ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವೆಡೆ ಅಬ್ಬರಿಸಿದ್ದ ಮಳೆ ಇಂದು ಇಳಿಮುಖವಾಗಿದೆ. ಕರಾವಳಿ ಕರ್ನಾಟಕದಲ್ಲಿ ಎಲ್ಲೊ ಅಲರ್ಟ್ ಘೋಷಿಸಲಾಗಿದೆ. ಕೊಡಗು ಜಿಲ್ಲೆಯಲ್ಲಿ ಇಂದು ಮಳೆಯ ಅಬ್ಬರ ಕಡಿಮೆಯಾಗಿದೆ. ಎರಡು ದಿನಗಳಿಂದ ರಜೆ ನೀಡಲ್ಪಟ್ಟಿದ್ದ ಶಿಕ್ಷಣ ಸಂಸ್ಥೆಗಳು ಇಂದು ಪುನರಾರಂಭಗೊಂಡಿದೆ. ಮೂರು ದಿನಗಳಿಂದ ಸುರಿದ ಭಾರೀ ಮಳೆಯಿಂದಾಗಿ ಕಾವೇರಿ, ಲಕ್ಷ್ಮಣತೀರ್ಥ ನದಿಗಳು ತುಂಬಿ ಹರಿಯುತ್ತಿದ್ದು ನದಿಪಾತ್ರದ ಹೊಲಗದ್ದೆಗಳು ಜಲಾವೃತಗೊಂಡಿವೆ.ಹಾರಂಗಿ ಜಲಾನಯನ ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗಿರುವುದರಿಂದಾಗಿ ಹಾರಂಗಿ ಜಲಾಶಯಕ್ಕೆ ನೀರಿನ ಹರಿವು ಹೆಚ್ಚಳವಾಗಿದ್ದು, 7 ಸಾವಿರದ 888 ಕ್ಯೂಸೆಕ್ ಒಳಹರಿವಿದೆ. ಜಲಾಶಯದಿಂದ ನದಿಗೆ 12 ಸಾವಿರದ 166 ಕ್ಯೂಸೆಕ್ ನೀರನ್ನು ಹೊರಬಿಡಲಾಗಿದೆ. 2 ಸಾವಿರದ 859 ಅಡಿ ಗರಿಷ್ಟ ಸಂಗ್ರಹಣಾ ಸಾಮರ್ಥ್ಯದ ಜಲಾಶಯದಲ್ಲಿಂದು 2 ಸಾವಿರದ 850 ಅಡಿ ನೀರಿನ ಸಂಗ್ರಹವಿದೆ.
ಜ್ಯೋತಿಷ್ಯ ಶಾಸ್ತ್ರದಲ್ಲಿ ಕೇತು ಒಂದು ನಿಗೂಢ ಗ್ರಹವಾಗಿದ್ದು, ಆಧ್ಯಾತ್ಮಿಕತೆ, ಕರ್ಮ, ಮತ್ತು ಜೀವನದಲ್ಲಿ…
ಕೋಲಾರ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಗ್ರಾಮ ಪಂಚಾಯತಿ ಸೇರಿದಂತೆ ಯಾವುದೇ…
ಹಾವೇರಿ ಜಿಲ್ಲೆಯಲ್ಲಿ ಹರಿಯುವ ವರದಾ ಹಾಗೂ ತುಂಗಭದ್ರಾ ನದಿಗಳಲ್ಲಿ ನೀರಿನ ಮಟ್ಟ ಕ್ರಮೇಣ…
ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು, 23 ಅಸಂಘಟಿತ ವರ್ಗಗಳ…
ಹಾವೇರಿ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರು ಮಳೆಯಿಂದಾಗಿ 148.57 ಹೆಕ್ಟೇರ್ ಪ್ರದೇಶದಲ್ಲಿದ್ದ…
ಹಾಸನದಲ್ಲಿ ಸಂಭವಿಸಿದ ಹೃದಯಾಘಾತ ಕುರಿತಂತೆ ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಕೆಯಾಗಿದೆ ಎಂದು ಆರೋಗ್ಯ…