14.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ( ಈಗಿನಂತೆ ಕರಾವಳಿ ಭಾಗಗಳಲ್ಲಿ ಅಡಿಕೆ ತೋಟಗಳಿಗೆ ಔಷಧಿ ಸಿಂಪಡಿಸಲು ಅವಕಾಶ ಜೂನ್ 15 ಕ್ಕೆ ಮಾತ್ರ ಸಿಗಬಹುದು)
ಕೊಡಗು, ಹಾಸನ (ಅರಸಿಕೆರೆ ಸುತ್ತಮುತ್ತ ಮಳೆಯ ಸಾಧ್ಯತೆ ಇದೆ), ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡದ ವಾತಾವರಣದೊಂದಿಗೆ ಅಲ್ಲಲ್ಲಿ ತುಂತುರು ಹಾಗೂ ಸಣ್ಣ ಪ್ರಮಾಣದ ಮಳೆಯ ಮುನ್ಸೂಚನೆ ಇದೆ.ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ರಾಯಚೂರು, ಕೊಪ್ಪಳ, ಗದಗ, ಬಾಗಲಕೋಟೆ, ಯಾದಗಿರಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.ಹಾವೇರಿ, ಧಾರವಾಡ, ಬೆಳಗಾವಿ, ವಿಜಯಪುರ, ಕಲಬುರ್ಗಿ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಜೂನ್ 14ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಜೂನ್ 16ರಿಂದ ಕರಾವಳಿ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮತ್ತೆ ಮಳೆ ಆರಂಭವಾಗುವ ಮುನ್ಸೂಚನೆ ಇದೆ.