Advertisement
ಸುದ್ದಿಗಳು

ಹವಾಮಾನ ವರದಿ | 26-07-2025 | ಜುಲೈ ಅಂತ್ಯದವರೆಗೂ ಸಾಮಾನ್ಯ ಮಳೆ | ಕಾರಣ ಏನು ?

Share

27.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಗಾಳಿಯೊಂದಿಗೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸಹ ಸ್ವಲ್ಪ ಜಾಸ್ತಿ ಇರಬಹುದು.
ಈಗಿನಂತೆ ಜುಲೈ 31ರ ತನಕವೂ ಸಾಮಾನ್ಯ ಮಳೆ ಮುಂದುವರಿಯುವ ಮುನ್ಸೂಚನೆ ಇದೆ.

ಮಲೆನಾಡು : ಕೊಡಗು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಗಾಳಿಯೊಂದಿಗೆ ಉತ್ತಮ ಹಾಗೂ ಉಳಿದ ಭಾಗಗಳ ಅಲ್ಲಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಗಾಳಿ ಮಳೆಯ ವಾತಾವರಣವು ಜುಲೈ 28ರ ತನಕ ಮುಂದುವರಿಯುವ ಮುನ್ಸೂಚನೆ ಇದೆ.

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ, ಗದಗ, ದಾವಣಗೆರೆ, ವಿಜಯಪುರ, ಕಲಬುರ್ಗಿ, ಬೀದರ್, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಜುಲೈ 27 ರಂದು ಮಧ್ಯಪ್ರದೇಶ ದಾಟಿ ರಾಜಸ್ಥಾನ ಗಡಿ ಭಾಗದಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ. ಇದರ ಪರಿಣಾಮದಿಂದ ರಾಜ್ಯದ ಕರಾವಳಿ ಭಾಗಗಳಲ್ಲಿ ಜುಲೈ 31ರ ತನಕವೂ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

6 hours ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

18 hours ago

ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ

ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…

19 hours ago

ಚಿತ್ರದುರ್ಗದಲ್ಲಿ ಕಣ್ಣೆದುರೇ ಒಣಗಿದ ಬೆಳೆ… ರೈತನಿಗೆ ದಿಕ್ಕೇ ತೋಚದ ಸ್ಥಿತಿ – ವಿಶೇಷ ಪ್ಯಾಕೇಜ್‌ಗೆ ರೈತರ ಒತ್ತಾಯ

ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆ ಕೊರತೆ ಮತ್ತು ಕೊಳವೆ ಬಾವಿಗಳಲ್ಲಿ ನೀರು ಬತ್ತುತ್ತಿರುವುದರಿಂದ ಈರುಳ್ಳಿ,…

19 hours ago

ಗದಗ ಜಿಲ್ಲೆಯಲ್ಲಿ ಹಿಂಗಾರು ಬಿತ್ತನೆ ಆರಂಭ – ರಿಯಾಯಿತಿ ದರದಲ್ಲಿ ಕಡಲೆ, ಜೋಳ, ಶೇಂಗಾ ಬೀಜ ಲಭ್ಯ

ಗದಗ ಜಿಲ್ಲೆಯಲ್ಲಿ 2026-27ನೇ ಸಾಲಿನ ಹಿಂಗಾರು ಹಂಗಾಮು ಆರಂಭವಾಗಿದ್ದು, ಕಡಲೆ, ಜೋಳ, ಶೇಂಗಾ…

19 hours ago

ಬೆಳಗಾವಿ ರೈತರಿಗೆ ಸಾಲ ಮರುಪಾವತಿಯಲ್ಲಿ ಪರಿಹಾರ ಸಿಗುತ್ತಾ?

ಬೆಳಗಾವಿ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರ ಸಾಲ ಮರುರಚನೆ ಮಾಡಿ, 12…

19 hours ago