Advertisement
ವೆದರ್ ಮಿರರ್

ಹವಾಮಾನ ವರದಿ | 22-07-2025 | ಸಾಮಾನ್ಯ ಮಳೆ ಜು.29 ನಂತರ ಕಡಿಮೆ | ಬಂಗಾಳಕೊಲ್ಲಿಯಲ್ಲಿ ತಿರುವಿಕೆಯು ಕ್ಷೀಣಿಸುವ ಲಕ್ಷಣ |

Share

23.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :…… ಮುಂದೆ ಓದಿ……

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸ್ವಲ್ಪ ಕಡಿಮೆ ಇರಬಹುದು. ಈಗಿನಂತೆ ಜುಲೈ 29 ರ ತನಕ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. ನಂತರ ಕಡಿಮೆಯಾಗುವ ಲಕ್ಷಣಗಳಿವೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಈಗಿನಂತೆ ಜುಲೈ 28ರ ತನಕ ಈ ವಾತಾವರಣ ಮುಂದುವರಿಯುವ ಸೂಚನೆಗಳಿವೆ. ನಂತರ ಕಡಿಮೆಯಾಗಬಹುದು.

ಒಳನಾಡು : ಉತ್ತರ ಒಳನಾಡಿನ ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ದಾವಣಗೆರೆ, ಕೊಪ್ಪಳ, ಬಳ್ಳಾರಿ, ವಿಜಯಪುರ, ರಾಯಚೂರು ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ ಒಂದೆರಡು ಕಡೆ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಈಗಿನಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಜೋರು ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದ್ದು, ಬೀದರ್, ಯಾದಗಿರಿ, ರಾಯಚೂರು ಜಿಲ್ಲೆಗಳಲ್ಲಿ ಒಂದೆರಡು ದಿನಗಳ ಕಾಲ ಮಳೆಯ ಮುನ್ಸೂಚನೆ ಇದೆ. ಬಂಗಾಳಕೂಲ್ಲಿಯಲ್ಲಿ ಉಂಟಾಗಿರುವ ತಿರುವಿಕೆಯು ಕ್ಷೀಣಿಸುವ ಲಕ್ಷಣಗಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

4 hours ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

22 hours ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

2 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

2 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

3 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

3 days ago