Advertisement
ವೆದರ್ ಮಿರರ್

ಹವಾಮಾನ ವರದಿ | 17-07-2025 | ಸಾಮಾನ್ಯ ಮಳೆ ಮುಂದುವರಿಕೆ ಎಷ್ಟು ದಿನ..? | ಜು.25 ರವರೆಗೂ ರಾಜ್ಯದಲ್ಲಿ ಹೇಗಿದೆ ಮಳೆ..?

Share

18.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಉತ್ತಮ ಮಳೆ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಕರಾವಳಿ ತೀರ ತಾಲೂಕುಗಳಲ್ಲಿ ಉತ್ತಮ ಹಾಗೂ ಉಳಿದ ಭಾಗಗಳಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಜುಲೈ 18ರಿಂದ 21ರ ತನಕ ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಉತ್ತಮ ಹಾಗೂ ಉತ್ತರ ಕನ್ನಡ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, 22 ರಿಂದ 27 ರ ತನಕವೂ ಸಾಮಾನ್ಯ ಮಳೆ ಮುಂದುವರಿಯುವ ಮುನ್ಸೂಚನೆ ಇದೆ.

ಮಲೆನಾಡು : ಕೊಡಗು ಭಾರಿ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಜುಲೈ 21ರ ತನಕ ಕೊಡಗು ಉತ್ತಮ ಮಳೆಯ ಮುನ್ಸೂಚನೆ ಇದ್ದರೆ, ಜುಲೈ 19 ರಿಂದ 21ರ ತನಕ ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ನಂತರ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಒಳನಾಡು : ಬೆಳಗಾವಿ ಧಾರವಾಡ, ಹಾವೇರಿ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ಗದಗ, ಬಾಗಲಕೋಟೆ, ದಾವಣಗೆರೆ, ಬಳ್ಳಾರಿ, ರಾಯಚೂರು, ವಿಜಯಪುರ, ಕಲಬುರ್ಗಿ, ಬೀದರ್, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಗುಡುಗು ಸಹ ಇರಬಹುದು. ದಕ್ಷಿಣ ಒಳನಾಡಿನ ಮೈಸೂರು ಚಾಮರಾಜನಗರ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದರೆ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಗುಡುಗು ಸಹ ಇರಬಹುದು.

ಈಗಿನಂತೆ ಜುಲೈ 25ರ ತನಕವೂ ರಾಜ್ಯದಾದ್ಯಂತ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

3 hours ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

13 hours ago

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ

ಅಸ್ಸಾಂನಲ್ಲಿ ಐಸಿಎಆರ್–ಐಎಆರ್‌ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…

15 hours ago

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…

18 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

1 day ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

1 day ago