Advertisement
ಸುದ್ದಿಗಳು

ಹವಾಮಾನ ವರದಿ | 26-08-2025 | ರಾಜ್ಯದಲ್ಲಿ ಒಂದು ವಾರದ ಕಾಲ ಸಾಮಾನ್ಯ ಮಳೆ ಏಕೆ..?

Share

27.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಬಿಟ್ಟು ಬಿಟ್ಟು ದಿನದಲ್ಲಿ 2, 3 ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕಾಸರಗೋಡು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ ಇರಬಹುದು. ಕರಾವಳಿ ತೀರ ಭಾಗಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.  ಈಗಿನಂತೆ ಸೆಪ್ಟೆಂಬರ್ 1 ರ ತನಕ ಈ ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆಗಳಿವೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು, ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಆಗಸ್ಟ್ 31 ರ ತನಕ ತುಂತುರು ಹಾಗೂ ಒಂದೆರಡು ದಿನ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ….

ಒಳನಾಡು : ಉತ್ತರ ಒಳನಾಡಿನ ಕಲಬುರ್ಗಿ, ಬೀದರ್, ಯಾದಗಿರಿ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.  ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ (ಕೊಳ್ಳೇಗಾಲ ಭಾಗಗಳಲ್ಲಿ), ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಬಂಗಾಳಕೊಲ್ಲಿಯ ಒಡಿಸ್ಸಾ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಚಲಿಸುವ ಪಥದ ನಿಖರತೆ ಇನ್ನೂ ಸ್ಪಷ್ಟವಾಗಿಲ್ಲ. ಇದರ ಪರಿಣಾಮದಿಂದ ಮುಂಗಾರು ಸ್ವಲ್ಪ ಚುರುಕಾಗಿದ್ದು, ರಾಜ್ಯದಲ್ಲಿ ಒಂದು ವಾರದ ಕಾಲ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ….

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಅಡಿಕೆ ಅಕ್ರಮ ಆಮದು ಜಾಲದ ಮೇಲೆ ಇಡಿ ದಾಳಿ – 16 ಕಡೆ ಶೋಧ, ನೂರಾರು ಕೋಟಿ ಹಣದ ವಹಿವಾಟಿನ ತನಿಖೆ

ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ 16 ಸ್ಥಳಗಳಲ್ಲಿ ವಿದೇಶಿ ಅಡಿಕೆ ಅಕ್ರಮ ಸಾಗಾಟಕ್ಕೆ…

10 hours ago

ಹವಾಮಾನ ವರದಿ | 01-10-2026 | ಕರ್ನಾಟಕದಲ್ಲಿ ಮತ್ತೆ ಮಳೆ ಇಳಿಕೆ – ಕಾರಣವೇನು?

ಉತ್ತರ ಭಾರತದ ಶುಷ್ಕ ಗಾಳಿ ಹಾಗೂ ಪೆಸಿಫಿಕ್ ಸಾಗರದ ಪ್ರಬಲ ಚಂಡಮಾರುತಗಳ ಪರಿಣಾಮ…

18 hours ago

ಹೊಸ ಅಡಿಕೆ ಧಾರಣೆ 350 ಫಿಕ್ಸ್ – ಆರಂಭಿಕ ಧಾರಣೆಯೇ ಆಮದು ದರಕ್ಕಿಂತ ಕಡಿಮೆ..!

ಹೊಸ ಅಡಿಕೆಯ ಆರಂಭಿಕ ಧಾರಣೆ ₹330–350ಕ್ಕೆ ನಿಗದಿಯಾಗಿದ್ದು, ಆಮದು ಅಡಿಕೆಗೆ ಇರುವ ₹351ರ…

18 hours ago

ರಿಲಯನ್ಸ್ ಫೌಂಡೇಶನ್ ಪದವಿ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಪದವಿ ಮೊದಲ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ರಿಲಯನ್ಸ್ ಫೌಂಡೇಶನ್ ವಿದ್ಯಾರ್ಥಿವೇತನಕ್ಕೆ…

23 hours ago

ರೈತನ ಹೊಲದಿಂದ ನಿಮ್ಮ ತಟ್ಟೆಯವರೆಗೆ… AI ಬರಲಿದೆ..!

ಕರ್ನಾಟಕದಲ್ಲಿ ಬೀಜದಿಂದ ಗ್ರಾಹಕರ ತಟ್ಟೆಯವರೆಗೆ ಕೃಷಿ ಉತ್ಪನ್ನದ ಪಯಣವನ್ನು ಪತ್ತೆಹಚ್ಚಲು AI ಆಧಾರಿತ…

23 hours ago

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಚಿನ್ನದ ಬೇಟೆ – ಒಂದೇ ದಿನ 4 ಚಿನ್ನ; ಪದಕಗಳ ಸಂಖ್ಯೆ 60ಕ್ಕೆ ಏರಿಕೆ

ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಒಂದೇ ದಿನ 4 ಚಿನ್ನ ಸೇರಿದಂತೆ 7 ಪದಕ…

1 day ago