03.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಆಗಾಗ ಬಿಸಿಲು, ಮೋಡದ ಜೊತೆಗೆ ಅಲ್ಲಲ್ಲಿ ದಿನದಲ್ಲಿ 2 ಅಥವಾ 3 ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈ ವಾತಾವರಣವು ಜೂನ್ 4ರ ತನಕ ಮುಂದುವರಿಯುವ ಮುನ್ಸೂಚನೆ ಇದ್ದು, 5 ರಿಂದ ಹೆಚ್ಚಿನ ಅವಧಿಯೂ ಬಿಸಿಲಿನ ವಾತಾವರಣದ ಸಾಧ್ಯತೆ ಇದೆ. ಈಗಿನಂತೆ ಜೂನ್ 10ರಿಂದ ಮತ್ತೆ ಮುಂಗಾರು ಸ್ವಲ್ಪ ಚುರುಕಾಗುವ ಲಕ್ಷಣಗಳಿವೆ. ಮಳೆ ಆರಂಭವಾಗಬಹುದು.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ದಿನದಲ್ಲಿ ಒಂದೆರಡು ಮಳೆಯ ಮುನ್ಸೂಚನೆ ಇದೆ. ಜೂನ್ 4ರ ತನಕ ಈ ವಾತಾವರಣ ಮುಂದುವರಿಯಬಹುದು. ನಂತರ ಬಿಸಿಲು ಹಾಗೂ ಮೋಡದ ವಾತಾವರಣದ ಸಾಧ್ಯತೆಗಳಿದ್ದು, ಜೂನ್ 10ರಿಂದ ಸಾಮಾನ್ಯ ಮಳೆ ಪ್ರಾರಂಭವಾಗುವ ಸೂಚನೆಗಳಿವೆ.
ಒಳನಾಡು : ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಬೆಳಗಾವಿ, ಕಲಬುರ್ಗಿ ಜಿಲ್ಲೆಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಮೈಸೂರಿನ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಉತ್ತರ ಒಳನಾಡಿನಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯಲಿದ್ದು, ದಕ್ಷಿಣ ಒಳನಾಡಿನಲ್ಲಿ ಜೂನ್ 4ರಂದು ಒಂದೆರಡು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇದೆ. ನಂತರ ಬಿಸಿಲಿನ ವಾತಾವರಣ ಮುಂದುವರಿಯಲಿದೆ.
ಮುಂಗಾರು ದುರ್ಬಲಗೊಂಡಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ಚಟುವಟಿಕೆಗಳು ಉಂಟಾದರೆ ಮಾತ್ರ ಮುಂಗಾರು ಸ್ವಲ್ಪ ಚುರುಕಾಗಬಹುದು. ಇದರ ಹೊರತು ಜೂನ್ ತಿಂಗಳಲ್ಲಿ ದುರ್ಬಲ ಮುಂಗಾರು ಮುಂದುವರಿಯಲಿದೆ.
ಅರಣ್ಯ ಹಕ್ಕು ಕಾಯಿದೆ -2006 ಅಡಿಯಲ್ಲಿ ಅರಣ್ಯವಾಸಿಗಳು ಮತ್ತು ಬುಡಕಟ್ಟು ಜನಾಂಗದವರಿಗೆ ಕಾಡಿನಲ್ಲಿ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಹಾಗೂ ಮರಳು ಅಭಾವದಿಂದ ಕಟ್ಟಡ ನಿರ್ಮಾಣ…
ಮಳೆಯ ಕಾರಣದಿಂದ ಅಡಿಕೆಗೆ ಬಾಧಿಸಿದ ಕೊಳೆರೋಗದ ತೀವ್ರತೆ ಹಾಗೂ ನಷ್ಟದ ಬಗ್ಗೆ ಅಖಿಲ…
ಅಡಿಕೆಗೆ ಕೊಳೆರೋಗ ವ್ಯಾಪಕವಾಗುತ್ತಿದೆ. ವಾರದ ಮೊದಲು ಕೆಲವು ಕಡೆ ಮಾತ್ರವೇ ಅಡಿಕೆಗೆ ಕೊಳೆರೋಗ…
ಅರಣ್ಯ ಅಥವಾ ಕಾಡು ಎಂದರೆ ದಟ್ಟವಾದ ಮರಗಳ ಸಮೂಹ ಮಾತ್ರವಲ್ಲ, ಅರಣ್ಯ ಎಂದರೆ…
ಬಾಂಗ್ಲಾ ದೇಶದ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಮೇಲ್ ಸ್ತರ ಹಾಗೂ ಮಧ್ಯಮ…