ಹವಾಮಾನ ವರದಿ | 29-07-2025 | ಆಗಸ್ಟ್‌.1 ರವರೆಗೆ ಸಾಮಾನ್ಯ ಮಳೆ ಮುಂದುವರಿಕೆ |

July 29, 2025
2:37 PM
ಮಧ್ಯಪ್ರದೇಶ ಹಾಗೂ ಉತ್ತರ ಮಹಾರಾಷ್ಟ್ರ ಭಾಗಗಳಲ್ಲಿ ತಿರುವಿಕೆಯ ಕಾರಣದಿಂದ ಈ ರಾಜ್ಯಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದ್ದು, ಮಹಾರಾಷ್ಟ್ರ ಕಡೆಯಿಂದ ಕರ್ನಾಟಕದ ಉತ್ತರ ಒಳನಾಡು ಭಾಗಗಳಿಗೆ ಹರಿದು ಬರುತ್ತಿರುವ ನದಿಗಳಲ್ಲಿ ನೀರು ಪ್ರಮಾಣ ಹೆಚ್ಚಾಗುವ ಸಾಧ್ಯತೆಗಳಿವೆ .

30.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಸುಮಾರು ಮುಂಜಾನೆ 11.30 ಗಂಟೆಯ ನಂತರ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ ಹಾಗೂ ಬಿಡುವಿನ ಸಮಯ ಹೆಚ್ಚಿರಬಹುದು.
ಈಗಿನಂತೆ ಆಗಸ್ಟ್ 1ರ ತನಕ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ. ನಂತರ ಕಡಿಮೆಯಾಗಲಿದ್ದು, ಆ. 3 ರಿಂದ ಬಿಸಿಲಿನ ವಾತಾವರಣದ ಸಾಧ್ಯತೆಗಳಿವೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ತುಂತುರು ಹಾಗೂ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಬಿಟ್ಟು ಬಿಟ್ಟು ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಆಗಸ್ಟ್ 1ರ ತನಕ ಈ ವಾತಾವರಣ ಮುಂದುವರಿಯುವ ಸಾಧ್ಯತೆಗಳಿದ್ದು 3ರ ನಂತರ ಬಿಸಿಲು ಹಾಗೂ ಮೋಡದ ವಾತಾವರಣದ ಸೂಚನೆಗಳಿವೆ.

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳ ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಆಗಸ್ಟ್ ತಿಂಗಳ ಮೊದಲ ವಾರದಲ್ಲಿ ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. ನಂತರ ಕಾದು ನೋಡಬೇಕಾಗಿದೆ.

ಮಧ್ಯಪ್ರದೇಶ ಹಾಗೂ ಉತ್ತರ ಮಹಾರಾಷ್ಟ್ರ ಭಾಗಗಳಲ್ಲಿ ತಿರುವಿಕೆಯ ಕಾರಣದಿಂದ ಈ ರಾಜ್ಯಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದ್ದು, ಮಹಾರಾಷ್ಟ್ರ ಕಡೆಯಿಂದ ಕರ್ನಾಟಕದ ಉತ್ತರ ಒಳನಾಡು ಭಾಗಗಳಿಗೆ ಹರಿದು ಬರುತ್ತಿರುವ ನದಿಗಳಲ್ಲಿ ನೀರು ಪ್ರಮಾಣ ಹೆಚ್ಚಾಗುವ ಸಾಧ್ಯತೆಗಳಿವೆ .

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಕೃಷಿ ಯೋಜನೆಯ ಪ್ರಗತಿಯಲ್ಲಿ ತುಮಕೂರಿಗೆ ರಾಜ್ಯದಲ್ಲೇ ಮೊದಲ ಸ್ಥಾನ
October 12, 2026
12:17 PM
by: ದ ರೂರಲ್ ಮಿರರ್.ಕಾಂ
ಬರಗಾಲದಲ್ಲೂ ಬೆಳೆ ಉಳಿಸಿದ ಸಾವಯವ ಕೃಷಿ – ಸಾವಯವ ಕೃಷಿ ಅಬ್ಬರಿಸಿ ಬರುವುದಿಲ್ಲ- ಮುಗ್ಗರಿಸಿ ಬೀಳುವುದಿಲ್ಲ..!
October 12, 2026
7:30 AM
by: ಮಹೇಶ್ ಪುಚ್ಚಪ್ಪಾಡಿ
ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ
October 11, 2026
10:37 AM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ
October 11, 2026
10:24 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror