Advertisement
ಸುದ್ದಿಗಳು

ಹವಾಮಾನ ವರದಿ | 21-01-2026 | ಜ.24-25 ರಂದು ಮಲೆನಾಡು ಭಾಗದ ಕೆಲವು ಕಡೆ ಮಳೆ | ಉತ್ತರ ಭಾರತದಲ್ಲಿ ತೀವ್ರ ಶೀತ ಮಾರುತ

Share

ಭಾರತದ ವಾಯವ್ಯ ಭಾಗದಲ್ಲಿ ಪಾಕಿಸ್ತಾನದ ಮೂಲಕ ಭಾರಿ ಶೀತ ಮಾರುತಗಳು ಬೀಸುತ್ತಿರುವ ಪರಿಣಾಮ, ಜಮ್ಮು ಕಾಶ್ಮೀರ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಜನವರಿ 23ರಿಂದ ವಾತಾವರಣದ ಉಷ್ಣಾಂಶ ತೀವ್ರವಾಗಿ ಕುಸಿಯುವ ಸಾಧ್ಯತೆ  ಇದ್ದು ಹಿಮಪಾತ ಕೂಡಾ ಸಂಭವಿಸುವ ಸಾಧ್ಯತೆ ಇದೆ. ಈ ಪ್ರದೇಶಗಳಲ್ಲಿ ವಾಯುಭಾರ ಕುಸಿತವೂ ಉಂಟಾಗುವ ಲಕ್ಷಣಗಳು ಕಂಡುಬಂದಿವೆ.

ಇದೇ ವೇಳೆ, ಅರಬ್ಬಿ ಸಮುದ್ರದ ಮೂಲಕ ಉತ್ತರ ಭಾರತದ ಕಡೆಗೆ ಬೀಸುವ ತೇವಾಂಶಭರಿತ ಗಾಳಿಯ ಪರಿಣಾಮ, ದೆಹಲಿ, ಹರಿಯಾಣ, ಪಂಜಾಬ್, ರಾಜಸ್ತಾನ, ಗುಜರಾತ್, ಉತ್ತರಾಖಂಡ ಹಾಗೂ ಉತ್ತರ ಪ್ರದೇಶ ರಾಜ್ಯಗಳ ಕೆಲವು ಭಾಗಗಳಲ್ಲಿ ಜನವರಿ 24 ಮತ್ತು 25ರಂದು ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

 ದಕ್ಷಿಣ ಭಾರತಕ್ಕೆ ಮಳೆಯ ಸೂಚನೆ:  ಬಂಗಾಳಕೊಲ್ಲಿಯಲ್ಲಿ ಉಷ್ಣ ಮಾರುತಗಳ ಪರಿಚಲನೆ (Anti-Cyclonic Circulation) ಉಂಟಾಗುವ ಲಕ್ಷಣಗಳು ಕಂಡುಬಂದಿದ್ದು, ತಮಿಳುನಾಡು ಮೂಲಕ ಬೀಸುವ ತೇವಾಂಶಭರಿತ ಗಾಳಿಯ ಪರಿಣಾಮದಿಂದ ತಮಿಳುನಾಡು, ಕೇರಳ ಹಾಗೂ ಕರ್ನಾಟಕದ ದಕ್ಷಿಣ ಒಳನಾಡು, ಮಲೆನಾಡು ಭಾಗಗಳಲ್ಲಿ ಜನವರಿ 24ರಿಂದ 26ರವರೆಗೆ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. The Rural Mirror Epaper & Date : 2026-01-21 (Page 4) https://epaper.theruralmirror.com/hd.php?date=2026-01-21&page=4

ಶೀತ ಮಾರುತ ಹಾಗೂ ಅಸಮಯ ಮಳೆಯ ಪರಿಣಾಮದಿಂದ ಬೆಳೆಗಳಿಗೆ ಹಾನಿ, ರಸ್ತೆ ಸಂಚಾರಕ್ಕೆ ಅಡಚಣೆ, ಮತ್ತು ಆರೋಗ್ಯ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಇರುವುದರಿಂದ ರೈತರು ಹಾಗೂ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬಹುದಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ

ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್‌ಗಳನ್ನು ಅಭಿವೃದ್ಧಿಪಡಿಸಿ,…

6 hours ago

ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…

8 hours ago

ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ

ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್‌ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್‌ಎಂಎಸ್‌ಜಿ ಕಾಂಪ್ಲೆಕ್ಸ್‌ನಲ್ಲಿ…

8 hours ago

ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…

8 hours ago

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…

2 days ago