ಉತ್ತರ ಭಾರತದಲ್ಲಿ ಏರುತ್ತಿದೆ ತಾಪಮಾನ | ಶಾಖದ ಅಲೆಗೆ ಉತ್ತರ ಭಾರತ ತತ್ತರ | 48 ಗಂಟೆಗಳಲ್ಲಿ ಹೀಟ್​ ಸ್ಟ್ರೋಕ್‌ಗೆ 47 ಮಂದಿ ಸಾವು |

May 31, 2024
3:14 PM

ದಕ್ಷಿಣ ಭಾರತದಲ್ಲಿ(South India) ಪೂರ್ವ ಮುಂಗಾರು ಮಳೆಯಿಂದ(Pre Mansoon rain) ತಕ್ಕ ಮಟ್ಟಿಗೆ ಬಿಸಿಲಿನ ತಾಪ(Temperature) ಕೆಲವೆಡೆ ತಗ್ಗಿದೆ. ಆದರೆ ಕಳೆದೆರಡು ವಾರಗಳಿಂದ ಶಾಖದ ಅಲೆಗೆ(Heat wave) ತತ್ತರಿಸಿರುವ ವಾಯುವ್ಯ ಮತ್ತು ಮಧ್ಯ ಭಾರತದ ಹಲವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಅವಧಿಯಲ್ಲೂ ಕೂಡ ಬಿಸಿಲಿನ ಝಳ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ವಿಪರೀತ ತಾಪಮಾನಕ್ಕೆ ಈಗಾಗಲೇ ಹೀಟ್​ ಸ್ಟ್ರೋಕ್​ನಿಂದಾಗಿ(Heat Struck) 47 ಜನರು ಸಾವನ್ನಪ್ಪಿದ್ದಾರೆ(Death). ಬಿಹಾರ(Bihar), ಮಧ್ಯಪ್ರದೇಶ(Madhya Pradesh) ಸೇರಿದಂತೆ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ 47 ಡಿಗ್ರಿ ಸೆಲ್ಸಿಯಸ್​ ತಾಪಮಾನ ದಾಖಲಾಗಿದೆ.

Advertisement

 ಬಿಹಾರದಲ್ಲಿ ರಣಬಿಸಿಲು ಜನರನ್ನು ಹೈರಾಣಾಗಿಸಿದೆ. ಶಾಖದ ಅಲೆಗೆ ಬಿಹಾರದಲ್ಲಿ ಅತೀ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಕಳೆದ 48 ಗಂಟೆಗಳ ಅವಧಿಯಲ್ಲಿ ಪೊಲೀಸ್​ ಸಿಬ್ಬಂದಿ ಸೇರಿದಂತೆ 22 ಮಂದಿ ಸಾವನ್ನಪ್ಪಿದ್ದಾರೆ.  ಮೃತರಲ್ಲಿ ಒಬ್ಬ ಎಎಸ್‌ಐ ಮತ್ತು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾದ ಸಿಬ್ಬಂದಿ ಕೂಡ ಇದ್ದಾರೆ. ಅತಿಯಾದ ಉಷ್ಣಾಂಶದಿಂದಾಗಿ ಶಾಲೆಗಳಿಗೆ ಸರ್ಕಾರ ರಜೆ ಘೋಷಿಸಿದೆ. ರಾಜ್ಯದಲ್ಲಿ ತೀವ್ರ ಬಿಸಿ ಇರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಒಡಿಶಾದಲ್ಲಿ ಬಿಸಿಲ ಬೇಗೆಗೆ 10 ಅನಾಹುತಗಳು ಸಂಭವಿಸಿವೆ. ರೌರ್ಕೆಲ್​ ನಗರದಲ್ಲಿ ಶಾಖದಲೆಯಿಂದ ಅನೇಕ ಸಾವುಗಳು ಸಂಭವಿಸಿವೆ. ಈ ಕುರಿತು ಮಾತನಾಡಿರುವ ರೌರ್ಕೆಲ್​ ಸರ್ಕಾರಿ ಆಸ್ಪತ್ರೆಯ ಡಾ.ಸುಧಾರಾಣಿ ಪ್ರಧಾನ್​, ಆರು ಗಂಟೆ ಅವಧಿಯಲ್ಲಿಯೇ ಎರಡು ಸಾವು ಸಂಭವಿಸಿದೆ. ಸಾಮಾನ್ಯವಾಗಿ ದೇಹ ತಾಪಮಾನ 103-104 ಡಿಗ್ರಿ ​ ಇರಬೇಕು. ಆದರೆ, ಹವಾಮಾನ ಪರಿಸ್ಥಿತಿಯಿಂದ ಅತಿ ಹೆಚ್ಚು ತಾಪಮಾನ ದಾಖಲಾಗಿದೆ ಎಂದರು.

ರಾಜಸ್ಥಾನದಲ್ಲಿ ಸುಡು ಬಿಸಿಲಿಗೆ 8 ಮಂದಿ ಸಾವನ್ನಪ್ಪಿದ್ದಾರೆ. ಜಾರ್ಖಂಡ್​ನ ಪಾಲಮು ಜಿಲ್ಲೆಯಲ್ಲಿ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 47.4 ಡಿಗ್ರಿ ಸೆಲ್ಸಿಯಸ್​ ತಾಪ ದಾಖಲಾಗಿದೆ. ಪಂಜಾಬ್, ಹರಿಯಾಣ, ಚಂಡೀಗಢ, ಜಾರ್ಖಂಡ್, ಒಡಿಶಾ ಮತ್ತು ಬಿಹಾರದ ಪ್ರತ್ಯೇಕ ಸ್ಥಳಗಳಲ್ಲಿ ಶಾಖದಲೆಯ ಪರಿಸ್ಥಿತಿಗಳು ಮುಂದುವರಿಯುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ. ದೆಹಲಿ ಮತ್ತು ರಾಜಸ್ಥಾನದಲ್ಲಿ 50 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ವಾಯುವ್ಯ ದೆಹಲಿಯ ಮುಂಗೇಶ್‌ಪುರದಲ್ಲಿ 52.9 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಈ ಹಿಂದಿನ ದಾಖಲೆಗಳನ್ನು ಮುರಿದಿದೆ. 1944ರಲ್ಲಿ ಇಲ್ಲಿ 47.2 ಡಿಗ್ರಿ ಸೆಲ್ಸಿಯಸ್​ ತಾಪಮಾನ ದಾಖಲಾಗಿತ್ತು.

ಮೂಲ : ಐಎಎನ್​ಎಸ್​

Advertisement

Advertisement

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಭದ್ರ ಜಲಾಶಯದಿಂದ ತುಂಗಭದ್ರಾ ನದಿಗೆ 8 ಸಾವಿರ ಕ್ಯೂಸೆಕ್ ನೀರು | ನದಿಪಾತ್ರದ ಜನರಿಗೆ ಜಿಲ್ಲಾಡಳಿತ ಎಚ್ಚರಿಕೆ
April 1, 2025
9:38 PM
by: The Rural Mirror ಸುದ್ದಿಜಾಲ
ಮನ್ರೇಗಾ ಕೂಲಿ ದರ ದಿನಕ್ಕೆ 370 ರೂಪಾಯಿಗೆ ಏರಿಕೆ
April 1, 2025
9:28 PM
by: The Rural Mirror ಸುದ್ದಿಜಾಲ
ನಾಳೆಯಿಂದ ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಎಚ್ಚರಿಕೆ |
April 1, 2025
8:46 PM
by: The Rural Mirror ಸುದ್ದಿಜಾಲ
15 ದಶಲಕ್ಷ ಮಹಿಳೆಯರಿಗೆ ಸ್ತನ ಕ್ಯಾನ್ಸರ್ ತಪಾಸಣೆ | 200 ಡೇ-ಕೇರ್ ಕ್ಯಾನ್ಸರ್ ಕೇಂದ್ರ ಸ್ಥಾಪನೆ
April 1, 2025
8:20 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group