ರಾಜ್ಯದಲ್ಲಿ ಹಿಂಗಾರು ಅತಿವೃಷ್ಟಿಯಿಂದ ಉಂಟಾಗಿರುವ ಬೆಳೆ ಹಾನಿ ಸಮೀಕ್ಷೆ ಕಾರ್ಯವನ್ನು ಒಂದು ವಾರದ ಒಳಗೆ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.
ಹಿಂಗಾರು ಅವಧಿಯಲ್ಲಿ ಅಧಿಕ ಮಳೆಯಿಂದ ಉಂಟಾದ ಹಾನಿ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳೊಂದಿಗೆ ನಡೆಸಿದ ಪರಿಶೀಲನಾ ಸಭೆಯಲ್ಲಿ ಅವರು ಈ ಬಗ್ಗೆ ಸೂಚನೆನೀಡಿದ್ದಾರೆ. ಮನೆ ಹಾನಿ ಮತ್ತ ಪ್ರಾಣಹಾನಿ ಪ್ರಕರಣಗಳಲ್ಲಿ 48 ಗಂಟೆಗಳ ಒಳಗಾಗಿ ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಹಿಂಗಾರು ಅವಧಿಯಲ್ಲಿ ಅತಿವೃಷ್ಟಿಯಿಂದ ಒಟ್ಟು 25 ಸಾವು ಸಂಭವಿಸಿದ್ದು, ತುರ್ತು ಪರಿಹಾರ ಪಾವತಿಸಲಾಗಿದೆ. ಜಾನುವಾರು ಸಾವಿಗೀಡಾದ ಪ್ರಕರಣಗಳಲ್ಲಿ ರೈತರಿಗೆ ಒಟ್ಟು 9.60 ಲಕ್ಷ ರೂಪಾಯಿ ಪರಿಹಾರ ಪಾವತಿಸಲಾಗಿದೆ. ಈ ಅವಧಿಯಲ್ಲಿ 84 ಮನೆಗಳು ಸಂಪೂರ್ಣ ಹಾನಿಗೀಡಾಗಿದ್ದು, 2022 ಮನೆಗಳು ಭಾಗಶಃ ಹಾನಿಗೊಳಗಾಗಿವೆ. ಪೂರ್ತಿ ಮನೆ ಹಾನಿಗೀಡಾದ ಪ್ರಕರಣಗಳಲ್ಲಿ 1.20 ಲಕ್ಷ ರೂಪಾಯಿ ಪರಿಹಾರ ಹಾಗೂ ಮನೆ ನಿರ್ಮಿಸಿಕೊಡಲು ಆದೇಶಿಸಲಾಗಿದೆ. ಭಾಗಶಃ ಹಾನಿಗೀಡಾದ ಮನೆಗಳಿಗೆ ಮುಂಗಾರು ಹಂಗಾಮಿನಲ್ಲಿ ಸೂಚಿಸಿರುವಂತೆ 50 ಸಾವಿರ ರೂಪಾಯಿ ಪರಿಹಾರ ಒದಗಿಸಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.
ಮುಂದಿನ ಎರಡು ಮೂರು ದಿನಗಳಲ್ಲಿ ದೇಶದ ವಾಯುವ್ಯ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ…
ವಿಧಾತ್ರಿ ಎಂ, 6 ನೇ ತರಗತಿ, ರೋಟರಿ ಮಿಡ್‌ಟೌನ್ ಶಾಲೆ, ಮೈಸೂರು | …
ನೈನಿಕಾ.ಬಿ.ಸಿ , 4ನೇ ತರಗತಿ , ಸೈಂಟ್ ಆನ್ಸ್ ಇಂಗ್ಲಿಷ್ ಮಾಧ್ಯಮ ಶಾಲೆ,…
ನಯೋನಿಕಾ.ಬಿ.ಸಿ., 4 ನೇ ತರಗತಿ, ಸೈಂಟ್ ಆನ್ಸ್ ಶಾಲೆ ಕಡಬ | -…
ನಿಪಾ ವೈರಸ್ ಹರಡುವಿಕೆಯ ವಿರುದ್ಧ ರಾಜ್ಯವು ತನ್ನ ತಡೆಗಟ್ಟುವ ಕ್ರಮಗಳನ್ನು ತೀವ್ರಗೊಳಿಸಿದೆ ಎಂದು…
ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ವಿಶೇಷವಾದ ಸ್ಥಾನವನ್ನು ನೀಡಲಾಗಿದೆ. ದೇವರು ಹಾಗೂ ಗುರು…