ಚುನಾವಣೆ ಹಿನ್ನೆಲೆ | ಶಸ್ತ್ರಾಸ್ತ್ರಗಳ ಠೇವಣಿಗೆ ಸೂಚನೆ

July 19, 2023
11:19 PM
ಗ್ರಾಮ ಪಂಚಾಯತ್‌ ಚುನಾವಣೆ ಹಿನ್ನೆಲೆಯಲ್ಲಿ ಶಾಂತಿ, ಸುವ್ಯವಸ್ಥೆ ಮತ್ತು ಸಾರ್ವಜನಿಕ ಸುರಕ್ಷತೆ ಕಾಪಾಡುವ ದೃಷ್ಟಿಯಿಂದ ಹಾಗೂ ಮುಕ್ತ, ನ್ಯಾಯಯುತ ಮತ್ತು ನಿಷ್ಪಕ್ಷಪಾತವಾಗಿ ಗ್ರಾಮ ಪಂಚಾಯತ್ ಚುನಾವಣೆ ನಡೆಸಲು ಪರವಾನಗಿ ಪಡೆದಿರುವ ಆಯುಧಗಳನ್ನು ಠೇವಣಿ ಇಡುವಂತೆ ದ ಕ ಜಿಲ್ಲಾ ದಂಡಾಧಿಕಾರಿಗಳು ಆದೇಶಿಸಿದ್ದಾರೆ.

ಶಾಂತಿ, ಸುವ್ಯವಸ್ಥೆ ಮತ್ತು ಸಾರ್ವಜನಿಕ ಸುರಕ್ಷತೆ ಕಾಪಾಡುವ ದೃಷ್ಟಿಯಿಂದ ಹಾಗೂ ಮುಕ್ತ, ನ್ಯಾಯಯುತ ಮತ್ತು ನಿಷ್ಪಕ್ಷಪಾತವಾಗಿ ಗ್ರಾಮ ಪಂಚಾಯತ್ ಚುನಾವಣೆ ನಡೆಸಲು ಇದೀಗ ಚುನಾವಣೆ ಘೋಷಣೆಯಾಗಿರುವ ಗ್ರಾಮ ಪಂಚಾಯತ್‍ಗಳ ವ್ಯಾಪ್ತಿಯಲ್ಲಿ ಪರವಾನಗಿ ಪಡೆದಿರುವ ಆಯುಧಗಳನ್ನು ಠೇವಣಿ ಇಡುವಂತೆ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಆದೇಶಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ನಿಡ್ಪಳ್ಳಿ ಮತ್ತು ಆರ್ಯಾಪು ಗ್ರಾಮ ಪಂಚಾಯತ್, ಬೆಳ್ತಂಗಡಿ ತಾಲೂಕಿನ ಮಡಂತ್ಯಾರ್ ಮತ್ತು ಉಜಿರೆ ಗ್ರಾಮ ಪಂಚಾಯತ್ ಹಾಗೂ ಬಂಟ್ವಾಳ ತಾಲೂಕಿನ ಪುದು ಗ್ರಾಮ ಪಂಚಾಯತ್ ಚುನಾವಣೆಗಳು ನಡೆಯಲಿವೆ. ಆದ ಕಾರಣ ಈ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಟ್ಟ ಬೆಳೆ ರಕ್ಷಣೆ ಮತ್ತು ಆತ್ಮ ರಕ್ಷಣೆಗಾಗಿ ಶಸ್ತ್ರಾಸ್ತ್ರ ಪರವಾನಿಗೆ ಹೊಂದಿರುವ ಎಲ್ಲಾ ಪರವನಿಗೆದಾರರು ಎಲ್ಲಾ ಶಸ್ತ್ರಾಸ್ತ್ರಗಳನ್ನು 2023ರ ಜು.19ರಿಂದ ಆಗಸ್ಟ್ 1ರವರೆಗೆ ಭಾರತೀಯ ಶಸ್ತ್ರ ಕಾಯಿದೆಯಡಿ ನಮೂನೆ 8ರ ಪರವಾನಿಗೆ ಹೊಂದಿರುವ ಅಧಿಕೃತ ಕೋವಿ ಮದ್ದುಗುಂಡು ವ್ಯಾಪಾರಿಗಳಲ್ಲಿ ಅಥವಾ ಹತ್ತಿರದ ಪೊಲೀಸ್ ಠಾಣೆಗಳಲ್ಲಿ ಠೇವಣಿ ಇಡಬೇಕು.

ಈ ಬಗ್ಗೆ ಯಾವುದೇ ಅಕ್ಷೇಪಣೆಗಳಿದ್ದಲ್ಲಿ ತಮ್ಮ ಬೆಳೆ ರಕ್ಷಣೆಗಾಗಿ ಆಯುಧದ ತೀರಾ ಅವಶ್ಯಕತೆ ಇದೆ ಎಂದಾದಲ್ಲಿ ಈ ಆದೇಶ ಹೊರಡಿಸಿದ ಒಂದು ವಾರದೊಳಗೆ ಪೂರಕ ದಾಖಲೆಗಳೊಂದಿಗೆ ತಹಶೀಲ್ದಾರರಿಗೆ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ
April 6, 2026
6:59 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!
April 5, 2026
1:27 PM
by: ಸಾಯಿಶೇಖರ್ ಕರಿಕಳ
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಮತ್ತು ನಾಗರಿಕ ಸಂಸ್ಕೃತಿ – ಸಮಾಜದ ನಿಜವಾದ ಅಳತೆ
April 5, 2026
9:00 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಗುಜ್ಜೆ-ಕಡಲೆ ಗಸಿ – ಸರಳ ಪದಾರ್ಥಗಳಿಂದ ಸೊಗಸಾದ ಸಾಂಪ್ರದಾಯಿಕ ಸವಿರುಚಿ!
April 4, 2026
8:44 AM
by: ದಿವ್ಯ ಮಹೇಶ್

You cannot copy content of this page - Copyright -The Rural Mirror