ಸಿಇಟಿ: 30,000 ವಿದ್ಯಾರ್ಥಿಗಳ ಆರ್‌ಡಿ ಸಂಖ್ಯೆ ಹೊಂದಾಣಿಕೆ ಆಗುತ್ತಿಲ್ಲ : ಸರಿಪಡಿಸದಿದ್ದರೆ ಸಾಮಾನ್ಯ ಕೋಟಾದಲ್ಲಿ ಸೀಟು ಹಂಚಿಕೆ

June 9, 2023
8:04 PM

ದ್ವಿತೀಯ ಪಿಯುಸಿ ಮುಗಿಸಿದ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಸಿಇಟಿ ಅತ್ಯಂತ ಮುಖ್ಯ ಘಟ್ಟ. ವಿದ್ಯಾರ್ಥಿಗಳ ಅರ್ಧ ಭವಿಷ್ಯ ಅಲ್ಲೇ ನಿರ್ಧಾರವಾಗುತ್ತದೆ. ಆದರೆ ಈ ಬಾರಿ ಸಿಇಟಿ ಬರೆದ ಕೆಲವು ವಿದ್ಯಾರ್ಥಿಗಳು ದಾಖಲಾತಿ ವಿಚಾರದಲ್ಲಿ ಕೆಲವೊಂದು ಯಡವಟ್ಟುಗಳನ್ನು ಮಾಡಿಕೊಂಡಿದ್ದಾರೆ. ಆಂತಹ ವೃತ್ತಿಪರ ಕೋರ್ಸುಗಳಿಗೆ ಪ್ರವೇಶಾತಿ ಬಯಸಿ ಸಿಇಟಿ  ಬರೆದಿರುವ ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ.

Advertisement

ಜಾತಿ/ಆದಾಯ/ಕಲ್ಯಾಣ ಕರ್ನಾಟಕ ಪ್ರಮಾಣ ಪತ್ರಗಳ ಆರ್.ಡಿ ಸಂಖ್ಯೆಯನ್ನು (RD Number) ಆದಷ್ಟು ಬೇಗ ಸರಿಪಡಿಸಿಕೊಳ್ಳಿ. ಇಲ್ಲದಿದ್ದರೆ ಮೀಸಲಾತಿ ಸೌಲಭ್ಯಗಳು ರದ್ದಾಗಿ, ಜನರಲ್ ಮೆರಿಟ್ ಕೋಟಾದಡಿ ನೀವು ಬರಲಿದ್ದಾರೆ. ಆದ್ದರಿಂದ ಕೂಡಲೇ ಕಂದಾಯ ಇಲಾಖೆಯ ಆರ್.ಡಿ ಸಂಖ್ಯೆ ಜತೆ ತಾಳೆಯಾಗುವಂತೆ ಜೂನ್ 12ರ ಬೆಳಿಗ್ಗೆ 11 ಗಂಟೆಯ ವೇಳೆಗೆ ಸೂಕ್ತ ತಿದ್ದುಪಡಿ ಮಾಡಿಕೊಳ್ಳಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮತ್ತೊಮ್ಮೆ ಹೇಳಿದೆ. ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿದ್ದಾರೆ.

ಸಿಇಟಿ ಬರೆದಿರುವ 2.6 ಲಕ್ಷ ಅಭ್ಯರ್ಥಿಗಳ ಪೈಕಿ 80 ಸಾವಿರಕ್ಕೂ ಹೆಚ್ಚು ಮಂದಿ ಆರ್.ಡಿ ಸಂಖ್ಯೆಯನ್ನು ತಪ್ಪಾಗಿ ಅರ್ಜಿಯಲ್ಲಿ ನಮೂದಿಸಿರುವ ಹಿನ್ನೆಲೆಯಲ್ಲಿ ಪ್ರಾಧಿಕಾರವು ಅದರ ತಿದ್ದುಪಡಿಗೆ ಜೂನ್ 7ರಿಂದ 12ರವರೆಗೆ ಕೊನೆಯ ಅವಕಾಶ ನೀಡಿದೆ. ಆದರೂ ಇನ್ನೂ 30 ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳ ಅರ್ಜಿಗಳಲ್ಲಿನ ದೋಷಗಳು ಹಾಗೆಯೇ ಉಳಿದುಕೊಂಡಿವೆ ಎಂದು ಅವರು ಹೇಳಿದ್ದಾರೆ.

ಇದರ ಜತೆಗೆ ಕೆಲವರು ಆದಾಯ ಪ್ರಮಾಣ ಪತ್ರದ ಬದಲು ಇಡಬ್ಲ್ಯುಎಸ್ ಪ್ರಮಾಣ ಪತ್ರವನ್ನು ಸಲ್ಲಿಸಿದ್ದಾರೆ. ಸಿಇಟಿ ನಿಯಮಗಳ ಪ್ರಕಾರ ಇದಕ್ಕೆ ಮನ್ನಣೆ ಇಲ್ಲ. ಆದ್ದರಿಂದ ಅಭ್ಯರ್ಥಿಗಳು ಪ್ರಾಧಿಕಾರದ ಪೋರ್ಟಲ್‍ನಲ್ಲಿ ಜೂನ್ 12ರ ನಿಗದಿತ ಕಾಲಮಿತಿಯೊಳಗೆ ತಿದ್ದುಪಡಿ ಮಾಡಿಕೊಳ್ಳಬೇಕು. ಇಲ್ಲದಿದ್ದರೆ ಮುಂದಿನ ಪರಿಣಾಮಗಳಿಗೆ ವಿದ್ಯಾರ್ಥಿಗಳೇ ಹೊಣೆಗಾರರಾಗಲಿದ್ದಾರೆ ಎಂದು ಅವರು ವಿವರಿಸಿದ್ದಾರೆ.

ಆರ್‌ಡಿ ಸಂಖ್ಯೆಗಳು ತಾಳೆಯಾಗದ ಅಭ್ಯರ್ಥಿಗಳ ಹೆಸರುಗಳನ್ನು ಪ್ರಾಧಿಕಾರದ ವೆಬ್‍ಸೈಟ್‍ನಲ್ಲಿ ಪ್ರಕಟಿಸಲಾಗಿದೆ. ಈಗಾಗಲೇ ಈ ಸಂಖ್ಯೆಗಳನ್ನು ಕಂದಾಯ ಇಲಾಖೆಯ ಆರ್‌ಡಿ ಸಂಖ್ಯೆ ಜತೆ ನಮೂದಿಸುವ ಪ್ರಕ್ರಿಯೆ ನಡೆಯುತ್ತಿದೆ. ಆದ್ದರಿಂದ ಸಂಬಂಧಿಸಿದ ಅಭ್ಯರ್ಥಿಗಳು ತಿದ್ದುಪಡಿಗೆ ನೀಡಿರುವ ಕೊನೆಯ ಅವಕಾಶವನ್ನು ಬಳಸಿಕೊಳ್ಳಬೇಕು ಎಂದು ಅವರು ಕೋರಿದ್ದಾರೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛತಾ ಅಭಿಯಾನ | 3570 ಟನ್ ಕಟ್ಟಡ ತ್ಯಾಜ್ಯ ತೆರವು
April 24, 2025
6:45 AM
by: The Rural Mirror ಸುದ್ದಿಜಾಲ
ಇಂದು ಶೂನ್ಯ  ನೆರಳಿನ ದಿನ | ಪಿಲಿಕುಳದಲ್ಲಿ  ಪ್ರಾತ್ಯಕ್ಷಿಕೆ
April 24, 2025
6:29 AM
by: The Rural Mirror ಸುದ್ದಿಜಾಲ
82 ವರ್ಷಗಳ ಬಳಿಕ ಅಕ್ಷಯ ತೃತೀಯ ದಿನವೇ 3 ಅಪರೂಪದ ಯೋಗಗಳ ನಿರ್ಮಾಣ
April 24, 2025
6:10 AM
by: ದ ರೂರಲ್ ಮಿರರ್.ಕಾಂ
ಪ್ರಕೃತಿ ಸೌಂದರ್ಯ ಮತ್ತು ಧಾರ್ಮಿಕತೆ ಮೇಳೈಸಿದ ಸ್ಥಳ ನಾಕೂರುಗಯ | ಭಕ್ತಿ ಪ್ರಕೃತಿಗಳ ಸಂಗಮ
April 24, 2025
6:05 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group