ಸ್ವಾವಲಂಬನೆಯ ಜೀವನ ಕಟ್ಟಿಕೊಳ್ಳುತ್ತಿರುವ ಅನೇಕ ಮಹಿಳಾ ಉದ್ಯಮಿದಾರರಿಗೆ ಎನ್‍ಆರ್ ಎಲ್‍ಎಮ್ ಯೋಜನೆಯು ಸ್ಪೂರ್ತಿಯ ಸೆಲೆಯಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ್ ತಿಳಿಸಿದ್ದಾರೆ.
ಬಾಗಲಕೋಟೆ ಜಿಲ್ಲಾ ಪಂಚಾಯತ್ ನೂತನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಎನ್‍ಆರ್ ಎಲ್‍ಎಮ್ ಯೋಜನೆಯಡಿ ಮಹಿಳಾ ಉದ್ಯಮಿದಾರರ ಜಿಲ್ಲಾ ಮಟ್ಟದ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು ಮಹಿಳೆಯರು ತಮ್ಮಲ್ಲಿರುವ ಶಕ್ತಿಯನ್ನು ಅರ್ಥಮಾಡಿಕೊಂಡು ಅದನ್ನು ಸೂಕ್ತ ರೀತಿಯಲ್ಲಿ ಸದ್ಬಳಕೆ ಮಾಡಿಕೊಂಡಲ್ಲಿ ದೇಶ, ರಾಜ್ಯ ಗ್ರಾಮ ಮತ್ತು ಕುಟುಂಬಗಳು ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ. ಮಹಿಳೆಯರು ಸ್ವಾವಲಂಬಿಗಳಾಗಲು ಎನ್‍ಆರ್ ಎಲ್ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಜಿಲ್ಲೆಯಲ್ಲಿ ಮಹಿಳಾ ಸ್ವ ಸಹಾಯ ಗುಂಪುಗಳಿಂದ ಈಗಾಗಲೇ 5 ಮೊಬೈಲ್ ಕ್ಯಾಂಟೀನ್ ತೆಗೆಯಲಾಗಿದ್ದು ಎಲ್ಲವೂ ಚೆನ್ನಾಗಿ ನಡೆಯುತ್ತಿವೆ, ಜಮಖಂಡಿಯಲ್ಲಿ ಸೂಪರ್ ಮಾರ್ಕೆಟ್ ತೆಗೆಯಾಗಿದ್ದು ಇತರ ಪ್ರಮುಖ ಸ್ಥಳಗಳಲ್ಲಿ ಸೂಪರ ಮಾರ್ಕೇಟ್ ತೆರೆಯಲು ಸ್ಥಳ ಗುರುತಿಸಲಾಗುತ್ತಿದೆ. ಶೀಘ್ರದಲ್ಲಿ ಪ್ರಾರಂಬಿಸಲಾಗುವುದು ಅಲ್ಲದೇ ಈ ಯೋಜನೆಯಡಿ ಅಕ್ಕಾ ಕೆಫೆ ತೆರೆಯುವ ಉದ್ದೇಶವಿದ್ದು ಮುಂದಿನ 15 ದಿನಗಳಲ್ಲಿ ಪ್ರಾರಂಬಿಸಲಾಗುವುದು. ಪ್ರತಿ ಗ್ರಾಮ ಪಂಚಾಯತಿಗೆ ಒಂದು ಕ್ಯಾಂಟೀನ್ ತೆರೆಯುಲು ಕ್ರಮ ಕೈಗೊಳ್ಳಲಾಗುತ್ತಿದ್ದು ಮಹಿಳೆಯರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಕೃಷಿಗಾಗಿ, ಕೃಷಿ ಉಳಿಸುವುದಕ್ಕಾಗಿ ಸುರಂಗ ಕೊರೆದು ನೀರು ಹರಿಸಿದ ವಿಶೇಷ ಸಾಧನೆಯನ್ನು ಮಾಡಿದ್ದಾರೆ…
ದೇಶಾದ್ಯಂತ ಅಳಿವಿನಂಚಿಗೆ ತಲುಪಿರುವ ಗುಬ್ಬಚ್ಚಿ ಸಂಕುಲದ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು…
ಕೊಡಗು ಜಿಲ್ಲೆಯಲ್ಲಿ ಅಕ್ರಮ ಲಾಟರಿ, ಇತರೆ ರಾಜ್ಯದ ಲಾಟರಿಗಳು, ಮಟ್ಕಾಗೆ ಪೂರ್ಣ ಪ್ರಮಾಣದಲ್ಲಿ…
ಹಾನಿಯಾದ ಮನೆ ಮತ್ತು ಬೆಳೆಗಳಿಗೆ ತ್ವರಿತವಾಗಿ ಪರಿಹಾರ ನೀಡಿ, ಯಾವುದೇ ಪ್ರಕರಣಗಳು ಬಾಕಿ…
ಭಾರತದ ಸ್ವಚ್ಛತಾ ಅಭಿಯಾನಕ್ಕೆ ವೇಗ ದೊರೆಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.…
26.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…