ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಸಾಕಷ್ಟು ಹಾನಿ ಉಂಟಾಗಿದೆ. ಅನೇಕ ಕಡೆಗಳಲ್ಲಿ ನೆರೆ ಪರಿಸ್ಥಿತಿ ತಲೆದೋರಿ, ರೈತರ ಜಮೀನುಗಳು ಜಲಾವೃತಗೊಂಡು, ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ, ರಾಜ್ಯದಲ್ಲಿ ಅತಿವೃಷ್ಟಿಯಿಂದಾದ ಹಾನಿ ಹಾಗೂ ತೆಗೆದುಕೊಂಡಿರುವ ಕ್ರಮಗಳ ಕುರಿತು ಚರ್ಚಿಸಲು, ಮುಖ್ಯಮಂತ್ರಿ ಸಿದ್ಧರಾಮಯ್ಯ ಸಭೆ ನಡೆಸಿದರು.
ರಾಜ್ಯದಲ್ಲಿ ಮಳೆ ಹಾನಿ ಕುರಿತಂತೆ 10 ದಿನದೊಳಗೆ ಸಮೀಕ್ಷೆ ನಡಸಿ ವರದಿ ನೀಡುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ರಾಜ್ಯದಲ್ಲಿ ಅತಿವೃಷ್ಟಿಯಿಂದ ಉಂಟಾಗಿರುವ ಹಾನಿ ಹಾಗೂ ಪರಿಹಾರ ಕ್ರಮಗಳ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಸಂವಾದದಲ್ಲಿ ಮಾತನಾಡಿದ ಅವರು ಶೀಘ್ರ ಸಮೀಕ್ಷೆ ನಡೆಸಿ ವರದಿ ನೀಡಿದರೆ ಪರಿಹಾರವೂ ತ್ವರಿತವಾಗಿ ನೀಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ..

