ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದಲ್ಲಿ ಉಪ್ಪಿನಂಗಡಿ ಉಬರ್ ಚೆಸ್ ಅಕಾಡೆಮಿ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಚೆಸ್ ಎಸೋಸಿಯೇಶನ್ ಸಹಕಾರದೊಂದಿಗೆ ಅಂತರ್ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟವು ಭಾನುವಾರ ನಡೆಯಿತು.
ಪಂದ್ಯಾಟವನ್ನು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ ಉದ್ಘಾಟಿಸಿ, ಗ್ರಾಮೀಣ ಭಾಗದಲ್ಲೂ ಚೆಸ್ ಸ್ಫರ್ಧೆ ಏರ್ಪಡಿಸುವುದು ಉತ್ತಮ ಬೆಳವಣಿಗೆಯಾಗಿದೆ. ಚೆಸ್ ಆಟದ ಮೂಲಕ ಮಕ್ಕಳ ಬುದ್ಧಿಮತ್ತೆ ಹೆಚ್ಚಳವಾಗಬಹುದಾಗಿದೆ. ಆಡಳಿತಾತ್ಮಕ ಹಾಗೂ ಬದುಕು ಶಿಸ್ತಿನ ಮೂಲಕ ಸಾಗಲು ಸಾಧ್ಯವಿದೆ ಎಂದರು.
ಸಭಾಧ್ಯಕ್ಷತೆಯನ್ನು ವಹಿಸಿದ್ದ ಅನುಗ್ರಹ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಗಣೇಶ್ ಪ್ರಸಾದ್ ನಾಯರ್ ಮಾತನಾಡಿ, ಚೆಸ್ ಮೂಲಕ ವಿದ್ಯಾರ್ಥಿಗಳ ಬುದ್ದಿ ಚುರುಕಾಗುತ್ತದೆ. ಇಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಚೆಸ್ ಬೆಳೆಯುತ್ತಿದೆ. ಇದಕ್ಕಾಗಿ ಗ್ರಾಮೀಣ ಭಾಗದಿಂದಲೂ ಪ್ರತಿಭೆಗಳಿಗೆ ಬೆಳೆಯಲು ಅವಕಾಶ ಕಲ್ಪಿಸಲಾಗುತ್ತದೆ ಎಂದರು.
ಅತಿಥಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲಾ ಚೆಸ್ ಎಸೋಸಿಯೇಶನ್ ಅಧ್ಯಕ್ಷ ರಮೇಶ್ ಕೋಟೆ ಮಾತನಾಡಿ, ಎಲ್ಲಾ ಮಕ್ಕಳು ಸಮರ್ಥರಿರುತ್ತಾರೆ. ಚೆಸ್ ಸ್ಫರ್ಧೆ ಎಲ್ಲಾ ಸ್ಫರ್ಧೆಗಳ ಮಾದರಿ ಅಲ್ಲ. ಇಲ್ಲಿ ಗೆಲುವು ಮಾತ್ರವೇ ಮುಖ್ಯವಲ್ಲ, ಚುರುಕು ಹಾಗೂ ಬೆಳವಣಿಗೆ ಮುಖ್ಯ ಎಂದರು.
ವೇದಿಕೆಯಲ್ಲಿ ಕುಮಾರಸ್ವಾಮಿ ವಿದ್ಯಾಲಯದ ಸಂಚಾಲಕ ಚಂದ್ರಶೇಖರ ನಾಯರ್, ಅನುಗ್ರಹ ಎಜುಕೇಶನ್ ಟ್ರಸ್ಟ್ ಉಪಾಧ್ಯಕ್ಷ ಶಿವರಾಮ ಏನೆಕಲ್ಲು, ಕುಮಾರಸ್ವಾಮಿ ವಿದ್ಯಾಲಯದ ಮುಖ್ಯಶಿಕ್ಷಕಿ ವಿದ್ಯಾರತ್ನ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ಭಾರತಿ ದಿನೇಶ್, ಸಾಮಾಜಿಕ ಕಾರ್ಯಕರ್ತ, ಸಮಾಜಸೇವಾ ಟ್ರಸ್ಟ್ ಅಧ್ಯಕ್ಷ ರವಿ ಕಕ್ಕೆಪದವು ಉಪಸ್ಥಿತರಿದ್ದರು.
ಉಬರ್ ಚೆಸ್ ಎಸೋಸಿಯೇಶನ್ ನಿರ್ದೇಶಕ ಜಗನ್ನಾಥ್ ಅಡಪ ಸ್ವಾಗತಿಸಿ ಪ್ರಸ್ತಾವನೆಗೈದರು. ಶಿಕ್ಷಕ ಯೋಗನಾಥ್ ಕಾರ್ಯಕ್ರಮ ನಿರೂಪಿಸಿದರು. ಇದೇ ಸಂದರ್ಭ ರಾಜ್ಯ ಮಟ್ಟದ ಚೆಸ್ ಸ್ಫರ್ಧೆಯಲ್ಲಿ ಭಾಗವಹಿಸಿದ ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿನಿ ಪೂರ್ವಿ ಅವರನ್ನು ಗೌರವಿಸಲಾಯಿತು.
Inter-district level chess tournament was held on Sunday at Kumaraswamy Vidyalaya in Kukke Subrahmanya. By Uber Chess Academy, in collaboration with Dakshina Kannada District Chess Association.
ಹಕ್ಕಿಗಳಿಗೆ ಗೂಡುಕಟ್ಟುವ ಮೂಲಕ ಪರಿಸರ ಸಂರಕ್ಷಣೆಗೆ ಪಣತೊಟ್ಟಿರುವ ದಂಪತಿಗಳು ಬಂಟ್ವಾಳ ತಾಲೂಕಿನಲ್ಲಿದ್ದಾರೆ. ಇವರ…
ಜಾಗತಿಕ ಮಟ್ಟದಲ್ಲಿ ಅಡಿಕೆ ಬೆಳೆಯ ವಿಸ್ತೀರ್ಣ ಮತ್ತು ಉತ್ಪಾದನೆಯಲ್ಲಿ ಭಾರತ ಮೊದಲನೇ ಸ್ಥಾನದಲ್ಲಿದೆ.ಇನ್ನು…
ಕೃಷಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಮಹಾರಾಷ್ಟ್ರ ರಾಜ್ಯ ಸರ್ಕಾರವು ಮುಂದಿನ ಐದು ವರ್ಷಗಳಲ್ಲಿ ಕೃಷಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ದರ್ಶಿತ್ ಕೆ ಎಸ್, 3 ನೇ ತರಗತಿ, ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್, ಬೆಳ್ಳಾರೆದರ್ಶಿತ್…
ರಾಜ್ಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ವರದಿ ನೀಡಲು ರಚಿಸಲಾಗಿದ್ದ ತಜ್ಞರ ಸಮಿತಿ…