ಪ್ರಸ್ತುತ ಸಾಲಿನ ಎನ್.ಟಿ.ಎಸ್.ಇ/ ಎನ್.ಎಂ.ಎಂ.ಎಸ್ ಪರೀಕ್ಷೆಯನ್ನು ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ನಿರ್ದೇಶನಾಲಯ ಹಾಗೂ ಮಾನವ ಸಂಪನ್ಮೂಲ ಇಲಾಖೆಯ ಸಹಯೋಗದೊಂದಿಗೆ 2021ನೇ ಸಾಲಿನ ಜ.24 ರಂದು ನಡೆಸಲಾಗುವುದು.
ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ನ.30 ಕೊನೆಯ ದಿನವಾಗಿರುತ್ತದೆ. ಜಿಲ್ಲೆಯ ಎಲ್ಲಾ ಸರ್ಕಾರಿ ಮತ್ತುಅನುದಾನಿತ ಪ್ರೌಢಶಾಲೆಗಳ 8ನೇ ತರಗತಿಯ ವಿದ್ಯಾರ್ಥಿಗಳು ಎನ್.ಎಂ.ಎಂ.ಎಸ್ ಪರೀಕ್ಷೆಗೆ ನೋಂದಾಯಿಸಲು ಶಾಲಾ ಮುಖ್ಯಸ್ಥರು ಕ್ರಮವಹಿಸಿ ಹಾಗೂ ಸರ್ಕಾರಿ, ಅನುದಾನಿತ, ಅನುದಾನರಹಿತ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸ್ವಾಯತ್ತತೆಯ ಶಾಲೆಗಳು, ಸ್ಥಳೀಯ ಸಂಸ್ಥೆಗಳ ಶಾಲೆಗಳ 10ನೇ ತರಗತಿ ವಿದ್ಯಾರ್ಥಿಗಳು ಎನ್.ಟಿ.ಎಸ್.ಇ ಪರೀಕ್ಷೆಗೆ ವರ್ಗವಾರು ಕನಿಷ್ಠ ಇಬ್ಬರು ವಿದ್ಯಾರ್ಥಿಗಳು ಕಡ್ಡಾಯವಾಗಿ ನೋಂದಾಯಿಸಿಕೊಳ್ಳಲು ಮುಖ್ಯಶಿಕ್ಷಕರು ಕ್ರಮ ಕೈಗೊಳ್ಳುವಂತೆ ದ.ಕ ಜಿಲ್ಲೆಯ ಮಂಗಳೂರಿನ ಡಯಟ್‍ನ ಪ್ರಾಂಶುಪಾಲರು ಹಾಗೂ ಪದನಿಮಿತ್ತ ಉಪನಿರ್ದೇಶಕರು (ಅಭಿವೃದ್ದಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel