ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆ – PMGKY ಹಾಗೂ ಇತರ ಕಲ್ಯಾಣ ಯೋಜನೆಗಳ ಅಡಿಯಲ್ಲಿ ಬಡವರಿಗೆ ಉಚಿತವಾಗಿ ಪೌಷ್ಟಿಕಾಂಶ ಪೂರಿತ ಅಕ್ಕಿ ಪೂರೈಕೆಯನ್ನು ಮುಂದುವರಿಸಲು ಸಚಿವ ಸಂಪುಟ ಇಂದು ಅನುಮೋದಿಸಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.
ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯ ನಂತರ, ಮಾಹಿತಿ ನೀಡಿದ ಸಚಿವ ಅಶ್ವಿನಿ ವೈಷ್ಣವ್, ಇದರಿಂದ ದೇಶದಲ್ಲಿ ರಕ್ತಹೀನತೆ ಹಾಗೂ ಸೂಕ್ಷ್ಮ ಪೋಷಕಾಂಶಗಳ ಕೊರತೆ ಎದರುಸುತ್ತಿರುವ ಬಡವರಿಗೆ ನೆರವಾಗಲಿದೆ ಎಂದರು. ಪೌಷ್ಟಿಕಾಂಶ ಪೂರಕ ಅಕ್ಕಿ ಪೂರೈಕೆ ಯೋಜನೆಯಿಂದ, ಕೇಂದ್ರ ಸರ್ಕಾರಕ್ಕೆ 17 ಸಾವಿರದ 82 ಕೋಟಿ ರೂಪಾಯಿ ವೆಚ್ಚವಾಗಲಿದ್ದು, ಶೇಕಡ 100ರಷ್ಟು ಸಬ್ಸಿಡಿಯನ್ನು ಕೇಂದ್ರ ಸರ್ಕಾರ ಒದಗಿಸಲಿದೆ ಎಂದು ಹೇಳಿದರು.
ಏಪ್ರಿಲ್ 3 ಹಾಗೂ 4 ರಂದು ಕರಾವಳಿ ಹಾಗೂ ಉತ್ತರ ಮತ್ತು ದಕ್ಷಿಣ…
ಮಿಜೋರಾಂನ ಚಂಫೈ ಜಿಲ್ಲೆಯ ಕಾಡಿನಲ್ಲಿ ದಾಸ್ತಾನು ಇರಿಸಿದ್ದ 321 ಚೀಲ ಅಡಿಕೆಯನ್ನು ಅಸ್ಸಾಂ…
ಕಡಬ ತಾಲೂಕಿನ ಯೇನೆಕಲ್ಲು ಬಚ್ಚನಾಯಕ ದೈವಸ್ಥಾನದಲ್ಲಿ ವಾರ್ಷಿಕ ನೇಮ ನಡೆಯುತ್ತಿದೆ. ಈ ಸಂದರ್ಭಹವ್ಯಾಸಿ…
ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಭಾರತ ಮೂರನೇ ಅತಿದೊಡ್ಡ ರಾಷ್ಟ್ರವಾಗಿದ್ದು, ಹಸಿರು ಪರಿವರ್ತನೆಯಂತಹ ಕ್ಷೇತ್ರದಲ್ಲಿ…
ಈಗಿನಂತೆ ಎ.1 ರಿಂದ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ…