ನಾಳೆ‌ ಬೆಂಗಳೂರಿನಲ್ಲಿ ಏಕದಿನ ವಿಶ್ವಕಪ್​ ಕೊನೆಯ ಲೀಗ್ ಪಂದ್ಯ | ಭಾರತಕ್ಕೆ ಕೇವಲ ಔಪಚಾರಿಕ ಪಂದ್ಯ | ಎದುರಾಳಿ ಯಾರು..? |

November 11, 2023
11:55 AM
ನವೆಂಬರ್ 12 ರಂದು ಲೀಗ್ ಹಂತದ ಕೊನೆಯ ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ಭಾರತಕ್ಕೆ, ನೆದರ್ಲೆಂಡ್ಸ್ ತಂಡ ಎದುರಾಗುತ್ತಿದೆ.

ಏಕದಿನ ವಿಶ್ವಕಪ್​ನಲ್ಲಿ (ICC ODI World Cup 2023) ಇದುವರೆಗೆ ಟೂರ್ನಿಯಲ್ಲಿ ಒಂದೇ ಒಂದು ಸೋಲು ಕಾಣದ ಟೀಂ ಇಂಡಿಯಾ ಮೊದಲ ತಂಡವಾಗಿ ಸೆಮಿಫೈನಲ್​ಗೆ ಲಗ್ಗೆ ಇಟ್ಟಿದೆ.  ನಾಳೆ ಅಂದರೆ, ನವೆಂಬರ್ 12 ರಂದು ಲೀಗ್ ಹಂತದ ಕೊನೆಯ ಪಂದ್ಯ ನಡೆಯಲ್ಲಿದೆ. ಈ ಪಂದ್ಯದಲ್ಲಿ ಬಲಿಷ್ಠ ಭಾರತಕ್ಕೆ, ನೆದರ್ಲೆಂಡ್ಸ್ (India Vs Netherlands) ತಂಡ ಎದುರಾಗುತ್ತಿದೆ.  ಇತ್ತ ನೆದರ್ಲೆಂಡ್ಸ್ ತಂಡ ಕೇವಲ 2 ಗೆಲುವುಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಕೊನೆಯ ಸ್ಥಾನ ಪಡೆದುಕೊಂಡಿರುವುದಲ್ಲದೆ ವಿಶ್ವಕಪ್​ನಿಂದ ಹೊರಬಿದ್ದಿದೆ. ಹೀಗಾಗಿ ನಾಳಿನ ಪಂದ್ಯ ನೆದರ್ಲೆಂಡ್ಸ್ ತಂಡಕ್ಕೆ ಕೇವಲ ಔಪಚಾರಿಕವಾಗಿದೆ.

Advertisement
Advertisement
Advertisement

ಆದರೆ ಭಾರತಕ್ಕೆ ಮಾತ್ರ ತನ್ನ ಅಜೇಯ ಓಟವನ್ನು ಮುಂದುವರೆಸಲು ಇದು ಸುವರ್ಣಾವಕಾಶವಾಗಿದೆ. ಏಕೆಂದರೆ ಈ ಪಂದ್ಯದ ಬಳಿಕ ರೋಹಿತ್ ಪಡೆ ಸೆಮಿಫೈನಲ್‌ನಲ್ಲಿ ನ್ಯೂಜಿಲೆಂಡ್ (India Vs New Zealand) ತಂಡವನ್ನು ಎದುರಿಸಬೇಕಾಗಿದೆ. ಹೀಗಾಗಿ ಈ ಪಂದ್ಯದ ಗೆಲುವು ಟೀಂ ಇಂಡಿಯಾದ ಆತ್ಮವಿಶ್ವಾಸವನ್ನು ಹೆಚ್ಚಿಸಲಿದೆ.

Advertisement

ಭಾರತ ಮತ್ತು ನೆದರ್ಲ್ಯಾಂಡ್ಸ್ ನಡುವಿನ ವಿಶ್ವಕಪ್ ಪಂದ್ಯ ನವೆಂಬರ್ 12 ರ ಭಾನುವಾರದಂದು ನಡೆಯಲಿದೆ. ಭಾರತ ಮತ್ತು ನೆದರ್ಲ್ಯಾಂಡ್ಸ್ ನಡುವಿನ ವಿಶ್ವಕಪ್ ಪಂದ್ಯ ಮಧ್ಯಾಹ್ನ 2 ಗಂಟೆಗೆ ಪ್ರಾರಂಭವಾಗಲಿದ್ದು, ಪಂದ್ಯದ ಟಾಸ್ 1:30ಕ್ಕೆ ನಡೆಯಲ್ಲಿದೆ. ನೆದರ್ಲ್ಯಾಂಡ್ಸ್ ನಡುವಿನ ವಿಶ್ವಕಪ್ ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಪ್ರಸಿದ್ ಕೃಷ್ಣ.
ನೆದರ್ಲ್ಯಾಂಡ್ಸ್ ತಂಡ: ಸ್ಕಾಟ್ ಎಡ್ವರ್ಡ್ಸ್ (ನಾಯಕ), ಮ್ಯಾಕ್ಸ್ ಒ’ಡೌಡ್, ಬಾಸ್ ಡಿ ಲೀಡ್, ವಿಕ್ರಮ್ ಸಿಂಗ್, ತೇಜ ನಿಡಮನೂರು, ಪಾಲ್ ವ್ಯಾನ್ ಮೀಕೆರೆನ್, ಕಾಲಿನ್ ಅಕರ್ಮನ್, ರೋಲೋಫ್ ವ್ಯಾನ್ ಡೆರ್ ಮೆರ್ವೆ, ಲೋಗನ್ ವ್ಯಾನ್ ಬೀಕ್, ಆರ್ಯನ್ ದತ್, ನೋಹ್ ಕ್ರೋಸ್, ವೆಸ್ಲಿ ಬ್ಯಾರೆಸಿ, ಸಾಕಿಬ್ ಜುಲ್ಫಿಕ್ , ಶರೀಜ್ ಅಹ್ಮದ್, ಸೈಬ್ರಾಂಡ್ ಎಂಗಲ್‌ಬ್ರೆಕ್ಟ್.

- ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಸಿರಿಧಾನ್ಯ  ಬಳಕೆ  ಕುರಿತು  ಕೃಷಿ ಇಲಾಖೆಯಿಂದ  ಸಿರಿಧಾನ್ಯ ಓಟ
January 19, 2025
10:13 PM
by: The Rural Mirror ಸುದ್ದಿಜಾಲ
ಬೆಂಗಳೂರಿನಲ್ಲಿ ತುಂತುರು ಮಳೆ | ರಾಜ್ಯಾದ್ಯಂತ ಮುಂದಿನ ಐದು ದಿನ ಮಳೆ ಸಾಧ್ಯತೆ
January 19, 2025
10:06 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 19.01.2025 | ಇಂದು ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಕೃಷಿಕರೇ ಇರಲಿ ಎಚ್ಚರ |
January 19, 2025
11:01 AM
by: ಸಾಯಿಶೇಖರ್ ಕರಿಕಳ
ಸರ್ಕಾರದ ಯೋಜನೆಗಳನ್ನು ರೈತರು ಸದುಪಯೋಗಪಡಿಸಿಕೊಳ್ಳುವಂತೆ ಸಚಿವ ಈಶ್ವರ್ ಖಂಡ್ರೆ ಕರೆ
January 19, 2025
7:22 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror