ಒಡಿಶಾದ ಬಾಲಸೋರ್ನಲ್ಲಿ ಶುಕ್ರವಾರ ಸಂಜೆ ಭೀಕರ ರೈಲು ಅಪಘಾತ ನಡೆದ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ. ಸುಮಾರು 300 ಸಾವಿರ ಪ್ರಯಾಣಿಕರು ಸಾವೀಗಿಡಾಗಿದ್ದಾರೆ. 1000 ಮಂದಿಗೂ ಹೆಚ್ಚು ಮಂದಿ ಗಾಯಾಳುಗಳಾಗಿದ್ದು, ಹತ್ತಿರದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್‌ಪ್ರೆಸ್‌ನ 15ಕ್ಕೂ ಹೆಚ್ಚು ಬೋಗಿಗಳು ಹಳಿತಪ್ಪಿ ಎದುರಿನ ಹಳಿ ಮೇಲೆ ಬಿದ್ದವು. ತರುವಾಯ, ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಹಳಿತಪ್ಪಿದ ಕೋಚ್‌ಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಆ ರೈಲಿನ ಮೂರರಿಂದ ನಾಲ್ಕು ಬೋಗಿಗಳು ಹಳಿತಪ್ಪಿವೆ.
ಸ್ಥಳಕ್ಕೆ ಭೇಡಿ ನೀಡಿರುವ ಪ್ರಧಾನಿ ಮೋದಿ ಅವರು ಪರಿಸ್ಥಿತಿಯನ್ನು ಅವಲೋಕಿಸಿದ್ದು ನಂತರ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗಳಿಗೂ ಭೇಟಿ ನೀಡಿ, ಗಾಯಾಳುಗಳ ಆರೋಗ್ಯ ವಿಚಾರಿಸಲಿದ್ದಾರೆ ಎಂದು ವರದಿಯಿಂದ ತಿಳಿದುಬಂದಿದೆ.
10 ಲಕ್ಷ ಪರಿಹಾರ ಘೋಷಣೆ
ಇನ್ನು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಹಳಿ ತಪ್ಪಿದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಿರುವುದಾಗಿ ಶನಿವಾರ ಪ್ರಕಟಿಸಿದ್ದಾರೆ. ರೈಲ್ವೆ ಸಚಿವಾಲಯವು ಸಾವನ್ನಪ್ಪಿದ ಮೃತರ ಕುಟುಂಬಕ್ಕೆ 10 ಲಕ್ಷ ರೂಪಾಯಿಗಳನ್ನು, ತೀವ್ರವಾಗಿ ಗಾಯಗೊಂಡವರಿಗೆ 2 ಲಕ್ಷ ರೂಪಾಯಿಗಳನ್ನು, ಸಣ್ಣಪುಟ್ಟ ಗಾಯಗಳಾಗಿರುವವರಿಗೆ 50,000 ರೂಪಾಯಿಗಳನ್ನು ಘೋಷಿಸಿದ್ದಾರೆ.
ಕೋರಮಂಡಲ್ ಎಕ್ಸ್‌ಪ್ರೆಸ್ 1977ರಲ್ಲಿ ಸಂಚಾರ ಆರಂಭಿಸಿತ್ತು. 2002ರ ಮಾರ್ಚ್ 15 ರಂದು ನೆಲ್ಲೂರು ಜಿಲ್ಲೆಯ ಕೋವುರು ಮಂಡಲ ಮೇಲು ಸೇತುವೆ ಬಳಿ ಏಳು ಬೋಗಿಗಳು ಹಳಿ ತಪ್ಪಿದ್ದವು. ಇದರಲ್ಲಿ ಸುಮಾರು ನೂರು ಪ್ರಯಾಣಿಕರು ಗಾಯಗೊಂಡಿದ್ದರು. ಮತ್ತೆ 2009ರ ಫೆಬ್ರವರಿ 13 ರಂದು ಒಡಿಶಾದಿಂದ ನೂರು ಕಿಲೋಮೀಟರ್ ದೂರದಲ್ಲಿರುವ ಜಾಜ್‌ಪುರ ಕಿಯೋಂಜಾರ್ ರಸ್ತೆ ಬಳಿ ಹಳಿ ತಪ್ಪಿ 16 ಪ್ರಯಾಣಿಕರು ಮೃತಪಟ್ಟು ಹಲವರು ಗಾಯಗೊಂಡಿದ್ದರು.
ಒಂದೆರಡು ಕಡೆ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಮೇ14ರಿಂದ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಹಲಸಿನ ಬೀಜದ ಚಟ್ನಿ ಪುಡಿಗೆ ಬೇಕಾಗುವ ಸಾಮಗ್ರಿಗಳು: ಹಲಸಿನ ಬೀಜ 1ಕಪ್. (ಒಣಗಿಸಿದ ಹಲಸಿನ…
ನಿನ್ನೆ ಮಧ್ಯರಾತ್ರಿ ಪಾಕಿಸ್ತಾನ ಜಮ್ಮು ಮತ್ತು ಕಾಶ್ಮೀರದ ಹಲವು ಭಾಗಗಳಲ್ಲಿ ನಾಗರಿಕರನ್ನು ಮತ್ತು…
ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಹೆಚ್ಚಿರುವ ಹಿನ್ನೆಲೆಯಲ್ಲಿ ಸಂಭವನೀಯ ದಾಳಿಯ ಬಗ್ಗೆ…
ಹಿಂದೂ ಧರ್ಮದ ವಿಶೇಷತೆ ಎಂದರೆ ಅದು ಸ್ವ ವಿಮರ್ಶೆಯ (self -criticism) ಸ್ವಾತಂತ್ರ್ಯ…