Advertisement
ಸುದ್ದಿಗಳು

ದುರಂತ ಸ್ಥಳಕ್ಕೆ ಪ್ರಧಾನಿ ಭೇಟಿ, ಪರಿಸ್ಥಿತಿ ಅವಲೋಕಿಸಿ, ಗಾಯಾಳುಗಳನ್ನು ಭೇಟಿ ಮಾಡಿದ ಮೋದಿ

Share

ಒಡಿಶಾದ ಬಾಲಸೋರ್​ನಲ್ಲಿ  ಶುಕ್ರವಾರ ಸಂಜೆ ಭೀಕರ ರೈಲು ಅಪಘಾತ ನಡೆದ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ. ಸುಮಾರು 300 ಸಾವಿರ ಪ್ರಯಾಣಿಕರು ಸಾವೀಗಿಡಾಗಿದ್ದಾರೆ.  1000 ಮಂದಿಗೂ ಹೆಚ್ಚು ಮಂದಿ ಗಾಯಾಳುಗಳಾಗಿದ್ದು, ಹತ್ತಿರದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್‌ಪ್ರೆಸ್‌ನ  15ಕ್ಕೂ ಹೆಚ್ಚು ಬೋಗಿಗಳು ಹಳಿತಪ್ಪಿ ಎದುರಿನ ಹಳಿ ಮೇಲೆ ಬಿದ್ದವು. ತರುವಾಯ, ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಹಳಿತಪ್ಪಿದ ಕೋಚ್‌ಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಆ ರೈಲಿನ ಮೂರರಿಂದ ನಾಲ್ಕು ಬೋಗಿಗಳು ಹಳಿತಪ್ಪಿವೆ. 

ಸ್ಥಳಕ್ಕೆ ಭೇಡಿ ನೀಡಿರುವ ಪ್ರಧಾನಿ ಮೋದಿ ಅವರು ಪರಿಸ್ಥಿತಿಯನ್ನು ಅವಲೋಕಿಸಿದ್ದು ನಂತರ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗಳಿಗೂ ಭೇಟಿ ನೀಡಿ, ಗಾಯಾಳುಗಳ ಆರೋಗ್ಯ ವಿಚಾರಿಸಲಿದ್ದಾರೆ ಎಂದು ವರದಿಯಿಂದ ತಿಳಿದುಬಂದಿದೆ.

10 ಲಕ್ಷ ಪರಿಹಾರ ಘೋಷಣೆ

ಇನ್ನು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಹಳಿ ತಪ್ಪಿದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಿರುವುದಾಗಿ ಶನಿವಾರ ಪ್ರಕಟಿಸಿದ್ದಾರೆ. ರೈಲ್ವೆ ಸಚಿವಾಲಯವು ಸಾವನ್ನಪ್ಪಿದ ಮೃತರ ಕುಟುಂಬಕ್ಕೆ 10 ಲಕ್ಷ ರೂಪಾಯಿಗಳನ್ನು, ತೀವ್ರವಾಗಿ ಗಾಯಗೊಂಡವರಿಗೆ 2 ಲಕ್ಷ ರೂಪಾಯಿಗಳನ್ನು, ಸಣ್ಣಪುಟ್ಟ ಗಾಯಗಳಾಗಿರುವವರಿಗೆ 50,000 ರೂಪಾಯಿಗಳನ್ನು ಘೋಷಿಸಿದ್ದಾರೆ.

ಕೋರಮಂಡಲ್​ ಎಕ್ಸ್​ಪ್ರೆಸ್​ 1977ರಲ್ಲಿ ಸಂಚಾರ ಆರಂಭಿಸಿತ್ತು. 2002ರ ಮಾರ್ಚ್‌ 15 ರಂದು ನೆಲ್ಲೂರು ಜಿಲ್ಲೆಯ ಕೋವುರು ಮಂಡಲ ಮೇಲು ಸೇತುವೆ ಬಳಿ ಏಳು ಬೋಗಿಗಳು ಹಳಿ ತಪ್ಪಿದ್ದವು. ಇದರಲ್ಲಿ ಸುಮಾರು ನೂರು ಪ್ರಯಾಣಿಕರು ಗಾಯಗೊಂಡಿದ್ದರು.‌ ಮತ್ತೆ 2009ರ ಫೆಬ್ರವರಿ 13 ರಂದು ಒಡಿಶಾದಿಂದ ನೂರು ಕಿಲೋಮೀಟರ್ ದೂರದಲ್ಲಿರುವ ಜಾಜ್‌ಪುರ ಕಿಯೋಂಜಾರ್ ರಸ್ತೆ ಬಳಿ ಹಳಿ ತಪ್ಪಿ 16 ಪ್ರಯಾಣಿಕರು ಮೃತಪಟ್ಟು ಹಲವರು ಗಾಯಗೊಂಡಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ

ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…

7 hours ago

ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ

ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…

7 hours ago

ಡಿಸೆಂಬರ್‌ನಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆಯೇ ಎಲ್‌ನಿನೋ..? ಬರ, ಪ್ರವಾಹದ ಅಪಾಯದ ಬಗ್ಗೆ ವಿಶ್ವ ಹವಾಮಾನ ಸಂಸ್ಥೆ ಎಚ್ಚರಿಕೆ

ಎಲ್‌ನಿನೋ ವಿದ್ಯಮಾನವು ಡಿಸೆಂಬರ್‌ನಲ್ಲಿ ಗರಿಷ್ಠ ತೀವ್ರತೆ ತಲುಪುವ ಸಾಧ್ಯತೆಯಿದ್ದು, 2027ರ ಫೆಬ್ರವರಿವರೆಗೆ ಮುಂದುವರಿಯಬಹುದು…

7 hours ago

ಹವಾಮಾನ ವರದಿ | 10-10-2026 | ರಾಜ್ಯದಲ್ಲಿ ಇಂದಿನಿಂದ ಮಳೆ ಇಳಿಕೆ ; ಅ.16ರಿಂದ ಹಿಂಗಾರು ಮಳೆ ಆರಂಭದ ಮುನ್ಸೂಚನೆ

ಅಕ್ಟೋಬರ್ 11ರಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿ ಬಿಸಿಲಿನ ವಾತಾವರಣ ಮುಂದುವರಿಯುವ…

10 hours ago

ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ

ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…

2 days ago