ರಾಜ್ಯಾದ್ಯಂತ ಇರುವ 3 ಲಕ್ಷ 30 ಸಾವಿರ ಹೆಕ್ಟೇರ್ ಡೀಮ್ಡ್ ಫಾರೆಸ್ಟ್ ಕುರಿತು ಆರು ತಿಂಗಳಲ್ಲಿ ವರದಿ ನೀಡುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಬಿಖಂಡ್ರೆ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.
ಎಸ್.ಎನ್.ನಾರಾಯಣಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಡೀಮ್ಡ್ ಫಾರೆಸ್ಟ್ ವಿಷಯಕ್ಕೆ ಸಂಬಂಧಿಸಿದಂತೆ ಕಂದಾಯ ಸಚಿವರೊಂದಿಗೆ ಈಗಾಗಲೇ ಒಂದು ಸುತ್ತಿನ ಚರ್ಚೆ ನಡೆಸಲಾಗಿದೆ. ಕಂದಾಯ ಇಲಾಖೆ ಜೊತೆಗೆ ಸೇರಿ ಜಂಟಿ ಸರ್ವೆ ನಡೆಸಿದ ಬಳಿಕ ಡೀಮ್ಡ್ ಅರಣ್ಯ ಭೂಮಿಯ ಬದಲಿಗೆ ಕಂದಾಯ ಭೂಮಿ ನೀಡಿದರೆ ಸಮಸ್ಯೆ ಬಗೆಹರಿಯಲಿದೆ ಎಂದು ಸ್ಪಷ್ಟನೆ ನೀಡಿದ್ದಾರೆ. ಸದಸ್ಯರಾದ ಅರಗ ಜ್ಞಾನೇಂದ್ರ, ಸುನೀಲ್ ಕುಮಾರ್, ಸಿ ಸಿ ಪಾಟೀಲ್ ಮಾತನಾಡಿ ಇದು ತುಂಬಾ ಹಳೆಯ ಸಮಸ್ಯೆಯಾಗಿದೆ. ಆದಷ್ಟು ಶೀಘ್ರವಾಗಿ ಈ ಸಮಸ್ಯೆ ಬಗೆಹರಿಸಲು ಕಾಲಮಿತಿಯೊಳಗೆ ಕ್ರಮಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

