ಸೂಕ್ಷ್ಮ ಅರಣ್ಯ ಪ್ರದೇಶಗಳ ಕುರಿತು ಅಧಿಕಾರಿಗಳ ಸಭೆ | ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ನೇತೃತ್ವದ ಸಭೆ

November 18, 2024
10:03 AM

ಉಡುಪಿ ಜಿಲ್ಲೆಯಲ್ಲಿಂದು ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ನೇತೃತ್ವದಲ್ಲಿ ಪಶ್ಚಿಮ ಘಟ್ಟಗಳ ಸೂಕ್ಷ್ಮ ಅರಣ್ಯ ಪ್ರದೇಶ ಮತ್ತು ಕಸ್ತೂರಿ ರಂಗನ್ ವರಿದಿ ಕುರಿತಾದ ಗೊಂದಲಗಳ ನಿವಾರಣೆ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

Advertisement
Advertisement
Advertisement

ಬಳಿಕ ಸುದ್ದಿಗಾರರೊಂದಿಗೆ ಕೋಟಾ ಶ್ರೀನಿವಾಸ್ ಪೂಜಾರಿ, ರಾಜ್ಯ ಸರ್ಕಾರ ಕಸ್ತೂರಿ ರಂಗನ್ ವರಿದಿಯನ್ನು ತಿರಸ್ಕಾರ ಮಾಡಿದ್ದು, ವರದಿಯ ಜಾರಿ ಕುರಿತು ಸಾರ್ವಜನಿಕರಲ್ಲಿ ಗೊಂದಲಗಳು ಸೃಷ್ಟಿಯಾಗಿವೆ.  ಗೊಂದಲಗಳ ನಿವಾರಣೆ ಕುರಿತು ಸಭೆಯಲ್ಲಿ ಚರ್ಚಿಸಿ, ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.  ಸದ್ಯಕ್ಕೆ ಸೂಕ್ಷ್ಮ ಹಾಗೂ ಅತೀ ಸೂಕ್ಷ್ಮ ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವರಿಗೆ ಅರಣ್ಯ ನೀತಿ -ನಿಯಮಗಳ ಕುರಿತು ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ಹೇಳಿದರು. ಅರಣ್ಯ ಪ್ರದೇಶದಲ್ಲಿ ಜೀವಿಸುತ್ತಿರುವವರಿಗೆ ಮನೆ ನಿರ್ಮಾಣಕ್ಕೆ ಯಾವುದೇ ಪರವಾನಗಿಯ ಅಗತ್ಯವಿಲ್ಲ. ವಾಣಿಜ್ಯ ಕಟ್ಟಡಗಳ ನಿರ್ಮಾಣಕ್ಕೆ ಮಾತ್ರ ನಿರ್ಬಂಧ ವಿಧಿಸಲಾಗಿದ್ದು,  ಮೈಸೂರು ವಿಭಾಗಧಿಕಾರಿ ನೇತೃತ್ವದ ಸಮಿತಿಯ ಅನುಮತಿ ಮೂಲಕ ಪರವಾನಗಿ  ಪಡೆಯಬಹುದಾಗಿದೆ ಎಂದು ತಿಳಿಸಿದರು

Advertisement

ಈ ಸಂದರ್ಭದಲ್ಲಿ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ,  ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ರೈತರು ಕೇವಲ ಒಂದು ಕೃಷಿಗೆ ಸೀಮಿತವಾಗಬಾರದು
November 18, 2024
10:22 AM
by: The Rural Mirror ಸುದ್ದಿಜಾಲ
ದೇಶದ ಎಲ್ಲ ನಾಗರಿಕರಿಗೂ ಆಹಾರ ಭದ್ರತೆ | ಪಡಿತರ ವ್ಯವಸ್ಥೆಯ ಲೋಪ ಸರಿಪಡಿಸಲು ಕ್ರಮ
November 18, 2024
10:19 AM
by: The Rural Mirror ಸುದ್ದಿಜಾಲ
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ನ.28 ರೊಳಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ |
November 18, 2024
10:14 AM
by: The Rural Mirror ಸುದ್ದಿಜಾಲ
ರಾಗಿ ಖರೀದಿಸಲು ಡಿ.01 ರಿಂದ ನೋಂದಣಿ ಪ್ರಕ್ರಿಯೆ | ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ
November 18, 2024
10:08 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror