ಉಡುಪಿ ಜಿಲ್ಲೆಯಲ್ಲಿಂದು ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ನೇತೃತ್ವದಲ್ಲಿ ಪಶ್ಚಿಮ ಘಟ್ಟಗಳ ಸೂಕ್ಷ್ಮ ಅರಣ್ಯ ಪ್ರದೇಶ ಮತ್ತು ಕಸ್ತೂರಿ ರಂಗನ್ ವರಿದಿ ಕುರಿತಾದ ಗೊಂದಲಗಳ ನಿವಾರಣೆ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಬಳಿಕ ಸುದ್ದಿಗಾರರೊಂದಿಗೆ ಕೋಟಾ ಶ್ರೀನಿವಾಸ್ ಪೂಜಾರಿ, ರಾಜ್ಯ ಸರ್ಕಾರ ಕಸ್ತೂರಿ ರಂಗನ್ ವರಿದಿಯನ್ನು ತಿರಸ್ಕಾರ ಮಾಡಿದ್ದು, ವರದಿಯ ಜಾರಿ ಕುರಿತು ಸಾರ್ವಜನಿಕರಲ್ಲಿ ಗೊಂದಲಗಳು ಸೃಷ್ಟಿಯಾಗಿವೆ. ಗೊಂದಲಗಳ ನಿವಾರಣೆ ಕುರಿತು ಸಭೆಯಲ್ಲಿ ಚರ್ಚಿಸಿ, ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಸದ್ಯಕ್ಕೆ ಸೂಕ್ಷ್ಮ ಹಾಗೂ ಅತೀ ಸೂಕ್ಷ್ಮ ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವರಿಗೆ ಅರಣ್ಯ ನೀತಿ -ನಿಯಮಗಳ ಕುರಿತು ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ಹೇಳಿದರು. ಅರಣ್ಯ ಪ್ರದೇಶದಲ್ಲಿ ಜೀವಿಸುತ್ತಿರುವವರಿಗೆ ಮನೆ ನಿರ್ಮಾಣಕ್ಕೆ ಯಾವುದೇ ಪರವಾನಗಿಯ ಅಗತ್ಯವಿಲ್ಲ. ವಾಣಿಜ್ಯ ಕಟ್ಟಡಗಳ ನಿರ್ಮಾಣಕ್ಕೆ ಮಾತ್ರ ನಿರ್ಬಂಧ ವಿಧಿಸಲಾಗಿದ್ದು, ಮೈಸೂರು ವಿಭಾಗಧಿಕಾರಿ ನೇತೃತ್ವದ ಸಮಿತಿಯ ಅನುಮತಿ ಮೂಲಕ ಪರವಾನಗಿ ಪಡೆಯಬಹುದಾಗಿದೆ ಎಂದು ತಿಳಿಸಿದರು
ಈ ಸಂದರ್ಭದಲ್ಲಿ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
ರೈತರು ಕೇವಲ ಒಂದು ಕೃಷಿಗೆ ಸೀಮಿತವಾಗದಂತೆ ಜೇನು ಸಾಗಾಣಿಕೆ, ಹೈನುಗಾರಿಕೆ, ಮೀನು ಸಾಗಾಣಿಕೆ,…
ದೇಶದ ಪ್ರತಿಯೊಬ್ಬರಿಗೂ ಆಹಾರ ಭದ್ರತೆ ಒದಗಿಸುವುದು ಸರ್ಕಾರದ ಪ್ರಮುಖ ಕರ್ತವ್ಯವಾಗಿದೆ. ಇದಕ್ಕಾಗಿ ಕೇಂದ್ರ…
ಚುನಾವಣಾ ಆಯೋಗ ನಿರ್ದೇಶನದನ್ವಯ ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ ನಡೆಯುತ್ತಿದ್ದು ಮತದಾರರ ಪಟ್ಟಿಗೆ…
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಖರೀದಿಸಲು ಡಿಸೆಂಬರ್ 1 ರಿಂದ…
ಕಾಳುಮೆಣಸು ಮಾರುಕಟ್ಟೆಯಲ್ಲಿ ಈ ಬಾರಿ ಆಶಾದಾಯಕ ವಾತಾವರಣ ಇದೆ.ಪ್ರಪಂಚದ ವಿವಿದೆಡೆ ಬೇಡಿಕೆಯಷ್ಟು ಪೂರೈಕೆ…
ರಬ್ಬರ್ ಬೆಲೆ ಆಗಸ್ಟ್ ತಿಂಗಳಲ್ಲಿ ಪ್ರತಿ ಕಿಲೋಗ್ರಾಂಗೆ 247 ರೂಪಾಯಿ ತಲುಪಿದ್ದು, ಈಗ…