Advertisement
MIRROR FOCUS

12,000 ಹೆಕ್ಟೇರ್‌ಗಳಲ್ಲಿ 17 ಲಕ್ಷಕ್ಕೂ ಹೆಚ್ಚು ಎಣ್ಣೆ ತಾಳೆ ಸಸಿ ನಾಟಿ | ಖಾದ್ಯ ತೈಲಗಳಲ್ಲಿ ಸ್ವಾವಲಂಬನೆಯತ್ತ ಚಿತ್ತ|

Share

ಖಾದ್ಯ ತೈಲಗಳಲ್ಲಿ ಭಾರತವು ಸ್ವಾವಲಂಬನೆಯಾಗಬೇಕು ಎನ್ನುವ ಗುರಿಯೊಂದಿಗೆ ಈಗ ತಾಳೆ ಕೃಷಿಯನ್ನು ಉತ್ತೇಜಿಸಲಾಗುತ್ತಿದೆ. ಮೆಗಾ ಆಯಿಲ್ ಪಾಮ್ ಪ್ಲಾಂಟೇಶನ್ ಡ್ರೈವ್ 2024 ಎನ್ನುವ ಅಭಿಯಾನದಲ್ಲಿ ಕೆಲಸ ನಡೆಯುತ್ತಿದೆ. ದೇಶದ ವಿವಿಧ ಕಡೆಗಳಲ್ಲಿ ತಾಳೆ ಕೃಷಿಗೆ ಆದ್ಯತೆ ನೀಡಲಾಗುತ್ತಿದೆ. ಈ ಬಾರಿ 12,000 ಹೆಕ್ಟೇರ್‌ಗಳಲ್ಲಿ 17 ಲಕ್ಷಕ್ಕೂ ಹೆಚ್ಚು ಎಣ್ಣೆ ತಾಳೆ ಸಸಿಗಳನ್ನು ನೆಡಲಾಗಿದೆ. ಸುಮಾರು 10000 ಕೃಷಿಕರು ತಾಳೆ ಕೃಷಿಯಲ್ಲಿ ಹೊಸದಾಗಿ ತೊಡಗಿಸಿಕೊಂಡಿದ್ದಾರೆ.

Advertisement
Advertisement

ಖಾದ್ಯ ತೈಲದ ರಾಷ್ಟ್ರೀಯ ಮಿಷನ್ ಅಡಿಯಲ್ಲಿ ಈ ಅಭಿಯಾನ ನಡೆಸಲಾಗುತ್ತಿದೆ. ಈ ಅಭಿಯಾನವು 15 ರಾಜ್ಯಗಳಾದ್ಯಂತ 10,000 ಕ್ಕೂ ಹೆಚ್ಚು ರೈತರಿಗೆ ನೇರವಾಗಿ ಪ್ರಯೋಜನವನ್ನು ನೀಡಿದೆ. ಇದು ಭಾರತ ಸರ್ಕಾರ, ರಾಜ್ಯ ಸರ್ಕಾರಗಳು ಮತ್ತು ತೈಲ ತಾಳೆ ಸಂಸ್ಕರಣಾ ಕಂಪನಿಗಳ ಸಾಮೂಹಿಕ ಪ್ರಯತ್ನಗಳ ಮೂಲಕ ಕೆಲಸ ನಡೆಯುತ್ತಿದೆ.

2024 ಜುಲೈ 15 ರಂದು ಪ್ರಾರಂಭವಾದ ಈ ಡ್ರೈವ್ ಆಯಿಲ್ ಪಾಮ್ ಕೃಷಿ ಅಭಿಯಾನವು ದೇಶದಲ್ಲಿ ಕಚ್ಚಾ ಪಾಮ್ ಆಯಿಲ್  ಉತ್ಪಾದನೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ. ಆಂಧ್ರಪ್ರದೇಶ, ಛತ್ತೀಸ್‌ಗಢ, ಗೋವಾ, ಗುಜರಾತ್, ಕರ್ನಾಟಕ, ಕೇರಳ, ಒಡಿಶಾ, ತಮಿಳುನಾಡು, ತೆಲಂಗಾಣ ಮತ್ತು ಈಶಾನ್ಯ ರಾಜ್ಯಗಳಾದ ಅರುಣಾಚಲ ಪ್ರದೇಶ, ಅಸ್ಸಾಂ, ಮಣಿಪುರ, ಮಿಜೋರಾಂ, ನಾಗಾಲ್ಯಾಂಡ್ ಮತ್ತು ತ್ರಿಪುರಾ ಸೇರಿದಂತೆ ರಾಜ್ಯಗಳು ಸಕ್ರಿಯವಾಗಿ ಭಾಗವಹಿಸುತ್ತಿವೆ.

ಪತಂಜಲಿಯಂತಹ ಪ್ರಮುಖ ಕಂಪನಿಗಳ ಸಹಯೋಗದೊಂದಿಗೆ ಆಯೋಜಿಸಲಾಗಿದೆ. ಇದರ ಜೊತೆಗೆ ಗೋದ್ರೇಜ್‌, 3F ಆಯಿಲ್‌ ಮೊದಲಾದ ಕಂಪನಿಗಳ ಸಹಯೋಗವೂ ಇದೆ. ಜಾಗೃತಿ ಕಾರ್ಯಾಗಾರಗಳು, ಬೆಳೆ ಅಭಿಯಾನಗಳು ಮತ್ತು ಪ್ರಚಾರ ಕಾರ್ಯಕ್ರಮಗಳನ್ನು ಕೂಡಾ ಈ ಕಂಪನಿಗಳ ಸಹಕಾರ ನೀಡಿದೆ, ತಾಳೆ ಕೃಷಿಯ ಪ್ರಯೋಜನಗಳ ಬಗ್ಗೆ ಜಾಗೃತಿ ಮೂಡಿಸಿವೆ.

ಖಾದ್ಯ ತೈಲಗಳ ಬೆಳೆಯನ್ನು ಬೆಳೆಯುವುದರಿಂದ ದೇಶಕ್ಕೂ ಪ್ರಯೋಜನವಾಗಿದೆ. ಖಾದ್ಯ ತೈಲ ಮೇಲಿನ ಆಮದು ಅವಲಂಬನೆಯನ್ನು ಕಡಿಮೆ ಮಾಡುವುದು ಇದರ ಪ್ರಮುಖ ಉದ್ದೇಶ. ಇದರ ಜೊತೆಗೆ ರೈತರ ಆದಾಯವನ್ನೂ ಹೆಚ್ಚಿಸುವ ಗುರಿಯನ್ನು ಹೊಂದಲಾಗಿದೆ. ಈಗಾಗಲೇ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ತಾಳೆ ಕೃಷಿ ಆರಂಭವಾಗಿದೆ.

In a major step towards self-reliance in edible oils, more than 17 lakh oil palm saplings have been planted across 12,000 hectares under the Mega Oil Palm Plantation Drive 2024. Conducted under the National Mission on Edible Oil-Oil Palm (NMEO-OP), the initiative has directly benefited over 10,000 farmers across 15 states, demonstrating the collective efforts of the Government of India, state governments, and oil palm processing companies.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

2 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

1 day ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

1 day ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

1 day ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

1 day ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

1 day ago