ಅಡಿಕೆ ಕಳ್ಳಸಾಗಾಣಿಕೆಗೆಯ ಜಾಲವನ್ನು ಅಸ್ಸಾಂ ಪೊಲೀಸರು ಪತ್ತೆ ಮಾಡಿದ್ದಾರೆ. ಮ್ಯಾನ್ಮಾರ್‌ನಿಂದ ಮಿಜೋರಾಂಗೆ ಟ್ಯಾಂಕರ್ ಮೂಲಕ ಅಡಿಕೆ ಕಳ್ಳಸಾಗಾಣಿಕೆ ಅವ್ಯಾಹತವಾಗಿ ನಡೆಯುತ್ತಿತ್ತು. ಇದೀಗ ಈ ಜಾಲವನ್ನು ಪೊಲೀಸರು ಬೇಧಿಸಿದ್ದಾರೆ.
ಅಸ್ಸಾಂ-ಮಿಜೋರಾಂ ಗಡಿಯಲ್ಲಿನ ಕಚಾರ್ ಜಿಲ್ಲೆಯಿಂದ ಎರಡು ತೈಲ ಟ್ಯಾಂಕರ್‌ಗಳನ್ನು ಬುಧವಾರ ವಶಪಡಿಸಿಕೊಳ್ಳಲಾಗಿದೆ. ಟ್ಯಾಂಕರ್‌ಗಳ ಇಬ್ಬರು ಚಾಲಕರು ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಅಲ್ಲಿನ ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ. ಮಿಜೋರಾಂಗೆ ಇಂಧನವನ್ನು ಸಾಗಿಸುವ ತೈಲ ಟ್ಯಾಂಕರ್‌ಗಳು ಅಸ್ಸಾಂಗೆ ಹಿಂದಿರುಗುವ ವೇಳೆ ಮ್ಯಾನ್ಮಾರ್ ಮೂಲದ ಅಡಿಕೆಯನ್ನು ಕಳ್ಳಸಾಗಣೆ ಮಾಡುತ್ತಿದ್ದವು ಎಂದು ಅಸ್ಸಾಂ ಅಧಿಕಾರಿಗಳು ತಿಳಿಸಿದ್ದಾರೆ.
ಸಾಮಾನ್ಯವಾಗಿ ಮ್ಯಾನ್ಮಾರ್‌ನಿಂದ ಮಿಜೋರಾಂಗೆ ಲಾರಿಗಳ ಮೂಲಕ ಅಡಿಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು. ಇದನ್ನು ನಿರಂತರವಾಗಿ ಪತ್ತೆ ಮಾಡಿ ವಶಪಡಿಸಿಕೊಳ್ಳಲಾಗುತ್ತಿತ್ತು. ಈಗ ಪೊಲೀಸ್ ಕಾವಲು ಹೆಚ್ಚಿದ್ದರಿಂದ ಕಳ್ಳಸಾಗಾಣಿಕೆದಾರರು ತಮ್ಮ ಕಾರ್ಯತಂತ್ರವನ್ನು ಬದಲಿಸಿ ತೈಲ ಟ್ಯಾಂಕರ್‌ಗಳನ್ನು ಬಳಸುತ್ತಿದ್ದಾರೆ. ಕಳೆದ ಕೆಲವು ಸಮಯಗಳಿಂದ ಈ ಜಾಲ ಸಕ್ರಿಯವಾಗಿತ್ತು. ಇದೀಗ ಎರಡು ಟ್ಯಾಂಕರ್ ಮೂಲಕ ಕಳ್ಳಸಾಗಾಣಿಕೆ ಪತ್ತೆಯಾಗಿದೆ. ಎರಡು ಟ್ಯಾಂಕರ್‌ಗಳಿಂದ ಸುಮಾರು 170 ಚೀಲ ಅಡಿಕೆಯನ್ನು ಸುಮಾರು 10 ಟನ್ ಬರ್ಮಾ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದೆ.
ಈ ಹಿಂದೆ ಟ್ಯಾಂಕರ್‌ಗಳಲ್ಲಿ ಅಕ್ರಮವಾಗಿ ಮದ್ಯ ಸಾಗಣೆ ಮಾಡಲಾಗುತ್ತಿತ್ತು. ತೈಲ ಟ್ಯಾಂಕರ್‌ಗಳಲ್ಲಿ ಅಡಿಕೆ ಕಳ್ಳಸಾಗಣೆ ಪತ್ತೆಯಾಗಿರುವುದು ಇದೇ ಮೊದಲು. ಇದೀಗ ಅಡಿಕೆ ಧಾರಣೆ ಏರಿಕೆಯಾಗಿರುವುದರಿಂದ ತೈಲ ಸಾಗಾಟದ ಟ್ಯಾಂಕರ್‌ಗಳಿಗೆ ಹೆಚ್ಚಿನ ದರ ನೀಡುವ ಆಮಿಷವೊಡ್ಡಿ ಟ್ಯಾಂಕರ್‌ಗಳಲ್ಲಿ ಅಡಿಕೆ ಸಾಗಾಣಿಗೆ ಮಾಡಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ಹೇಳಿವೆ.
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…