ಪುತ್ತೂರು ವಿಷನ್ ಸಹಾಯನಿಧಿ ಸೇವಾ ಟ್ರಸ್ಟ್‌ನ ಆಶ್ರಯದಲ್ಲಿ ರೋಟರಿ ಕ್ಯಾಂಪ್ಕೋ ಬ್ಲಡ್ ಸೆಂಟರ್ ಪುತ್ತೂರು, ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿ, ಸಕ್ಷಮ ಪುತ್ತೂರು ಘಟಕದ ಸಹಯೋಗದೊಂದಿಗೆ ಸ್ವಯಂಪ್ರೇರಿತ ರಕ್ತದಾನ ಶಿಬಿರ ಮತ್ತು ನೇತ್ರದಾನ ನೋಂದಣಿ, ಉಚಿತ ಮಧುಮೇಹ ಹಾಗೂ ಅಧಿಕ ರಕ್ತದೊತ್ತಡ ತಪಾಸಣಾ ಶಿಬಿರ ಹಾಗೂ ಊರ ಪರವೂರ ಸಹೃದಯಿ ದಾನಿಗಳ ಸಹಕಾರದಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಅಶಕ್ತರಿಗೆ ನಿರಂತರವಾಗಿ ಆಹಾರ ಸಾಮಗ್ರಿಗಳ ಕಿಟ್ ನೀಡುವ 18ನೇ ಯೋಜನೆ ‘ಒಳಿತು ಮಾಡು ಮನುಷ’ ಕಾರ್ಯಕ್ರಮವು ಪುತ್ತೂರಿನ ‘ರೋಟರಿ ಟ್ರಸ್ಟ್ ಹಾಲ್’ನಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ರೋಯಲ್ ಸೌಹಾರ್ದ ಸಹಕಾರಿ ಸಂಘದ ಸ್ಥಾಪಕರಾದ ದಂಬೆಕ್ಕನ ಸದಾಶಿವ ರೈ ಮಾತನಾಡಿ ಈ ಕಾರ್ಯಕ್ರಮದಲ್ಲಿ ಮಾನವೀಯತೆ ಮತ್ತು ಮನುಷ್ಯತ್ವ ಕಂಡುಬರುತ್ತಿದೆ.ಯಾರು ಕಷ್ಟದಲ್ಲಿ ಇದ್ದಾರೋ ಯಾರು ಕಣ್ಣೀ ರಲ್ಲಿ ಇದ್ದಾರೋ ಯಾರು ದುಃಖ ದಲ್ಲಿ ಇದ್ದಾರೋ ಅವರಿಗೆ ಒಂದು ಸಹಾಯ ಹಸ್ತ ಇಲ್ಲಿ ಎದ್ದು ಕಾಣುತಿದೆ. ಇವರ ತಂಡ ಒಳ್ಳೆ ಕೆಲಸವನ್ನು ಮಾಡುತ್ತಿದ್ದಾರೆ.ಅವರೊಟ್ಟಿಗೆ ಯಾರು ಶಕ್ತಿವಂತರಿದ್ದರೋ ಅವರು ಈ ಕಾರ್ಯಕ್ರಮವನ್ನು ಮುಂದುವರಿಸುವುದು ತುಂಬಾ ಅವಶ್ಯಕತೆ ಇದೆ ಎಂದರು.
ಮುಖ್ಯ ಅತಿಥಿ ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ಮಾಜಿ ಅಧ್ಯಕ್ಷೆ ದಿವ್ಯ ಪ್ರಭಾ ಚಿಲ್ತಡ್ಕ ಮಾತನಾಡಿ ನಾವು ಸಮಾಜದಲ್ಲಿ ಒಳ್ಳೆ ಕೆಲಸ ಮಾಡುತ್ತಿದ್ದೇವೆ ಎಂದರೆ ಅದು ದೈವನಿಮಿತ್ತ.ಯಾವುದೇ ಫಲಾಪೇಕ್ಷೆಯಿಲ್ಲದೆ ಸ್ವಾರ್ಥ ವಿಲ್ಲದೆ,ಪ್ರಚಾರವಿಲ್ಲದೆ ಒಬ್ಬ ಮನುಷ್ಯ ಕಷ್ಟದಲ್ಲಿರುವವರಿಗೆ ಸಹಾಯ ಮಾಡಿದರೆ ಅದರಿಂದ ಸಿಗುವ ಆತ್ಮ ತೃಪ್ತಿಯೇ ದೇವರ ವರವಾಗಿರುತ್ತದೆ ಎಂದು ಹೇಳಿದರು.
ಇ ಮುಖ್ಯ ಅತಿಥಿಗಳಾದ ಪೆರ್ಲಂಪಾಡಿಯ ಹರಿಪ್ರಸಾದ್ ಮಾತನಾಡಿದರು. ಕಾರ್ಯಕ್ರಮದಲ್ಲಿ 52,000 ಸಾವಿರ ಮೊತ್ತದ 52ಆಹಾರ ಕಿಟ್ ವಿತರಣೆ ಮಾಡಲಾಯಿತು.ಹಾಗೂ 40 ಜನರಿಗೆ ಬಿಪಿ, ಶುಗರ್ ತಪಾಸಣೆ ಹಾಗೂ 2 ಜನರು ರಕ್ತದಾನ ಮಾಡಿದರು.
26.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಹಾಲಗುಂಡಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಲಕ್ಕುಂಡಿ ಪಾರಂಪರಿಕ…
ಬೆಂಗಳೂರಿನ ಬಸವನ ಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ಸೊಬಗು ಕಳೆಗಟ್ಟಿದೆ. ಇಂದು ಕಡಲೆಕಾಯಿ…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಆನೆಗಳ ಹಾವಳಿ ತಡೆಯಲು ಸರ್ಕಾರದ ಸಚಿವರು ಹಾಗೂ ಅರಣ್ಯ ಇಲಾಖೆ…
ಅಡಿಕೆ ಹಳದಿ ಎಲೆರೋಗ ಬಾಧಿಸಿದ ತೋಟದ ಕೃಷಿಕ ಶಂಕರಪ್ರಸಾದ್ ರೈ ಅವರು ಕೃಷಿ…
ಅಡಿಕೆ ಕೃಷಿಯ ಜೊತೆಗೆ ಮಿಶ್ರ ಕೃಷಿಯನ್ನು ಏಕೆ ಮಾಡಬೇಕು..? ಯಾವ ಕೃಷಿಯನ್ನು ಮಾಡಬಹುದು..?…