ದೇಶದಲ್ಲಿ ರೂಪಾಂತಾರಿ ಒಮಿಕ್ರಾನ್‌ಗಳ ಹೆಚ್ಚಳದ ಜೊತೆಜೊತೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅತೀ ಹೆಚ್ಚು ಸೋಂಕಿತ 10 ರಾಜ್ಯಗಳಲ್ಲಿ ನಿಯಂತ್ರಣಕ್ಕಾಗಿ ಮಹತ್ವದ ನಿರ್ಧಾರ ಕೈಕೊಳ್ಳಲು ಕೇಂದ್ರ ಸರ್ಕಾರವು ನಿರ್ಧರಿಸಿದೆ.
ಕೇರಳ, ಮಹಾರಾಷ್ಟ್ರ, ತಮಿಳುನಾಡು, ಪಶ್ಚಿಮ ಬಂಗಾಳ, ಮಿಜೋರಾಂ, ಕರ್ನಾಟಕ, ಬಿಹಾರ, ಉತ್ತರ ಪ್ರದೇಶ, ಜಾರ್ಖಾಂಡ್ ಮತ್ತು ಪಂಜಾಬ್‌ನಲ್ಲಿ ಹೆಚ್ಚು ಸೋಂಕಿತರ ಸಂಖ್ಯೆಯು ಕಂಡುಬಂದಿದ್ದು, ಆದುದರಿಂದ ಕೊರೋನಾ ನಿಯಂತ್ರಣಕ್ಕಾಗಿ ಶಿಸ್ತಿನ ಕೇಂದ್ರ ತಂಡಗಳನ್ನು ನಿಯೋಜಿಸಲಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದ್ದಾರೆ.
ರಾಜ್ಯದಲ್ಲಿ ಕೊರೋನಾ ಅಬ್ಬರ ಹೆಚ್ಚುತ್ತಿದೆ. ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ರಣಕೇಕೆ ಹಾಕುತ್ತಿದೆ. ಕೋವಿಡ್ ಸೋಂಕಿನ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಹೀಗಾಗಿ ರಾಜ್ಯದಲ್ಲಿ ಕಠಿಣ ಕ್ರಮಗಳು ಜಾರಿಯಾಗುವ ಸೂಚನೆಯನ್ನು ಸರಕಾರ ನೀಡಿದೆ. ದೇಶದ 10 ರಾಜ್ಯಗಳಿಗೆ ಬಹು ಶಿಸ್ತಿನ ಕೇಂದ್ರ ತಂಡಗಗಳನ್ನು ನಿಯೋಜಿಸಲಾಗಿದ್ದು, ಒಮಿಕ್ರಾನ್ ಮತ್ತು ಕೋವಿಡ್-19 ಪ್ರಕರಣಗಳ ಬಗ್ಗೆ ಕೇಂದ್ರ ಸರ್ಕಾರಕ್ಕೆ ವರದಿಯನ್ನು ನೀಡಲಿದೆ. ಹಾಗೂ ಖಡಕ್ ರೂಲ್ಸ್ ಗಳನ್ನು ಮಾಡಲಿದೆ ಎಂದು ಮೂಲಗಳು ತಿಳಿಸಿದೆ.