ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ವೈರಸ್, ರೂಪಾಂತರಿ ಒಮಿಕ್ರಾನ್ ಸೋಂಕಿತರ ಸಂಖ್ಯೆಯು ಹೆಚ್ಚುತ್ತಲೇ ಇರುವ ಹಿನ್ನಲೆಯಲ್ಲಿ ಮುಂದಿನ ಕ್ರಮ ಕೈಗೊಳ್ಳುವ ಕುರಿತಂತೆ ನಾಳೆ ಸಂಜೆ ತಜ್ಞರ ಜೊತೆ ಮಹತ್ವದ ಸಭೆ ನಡೆಸಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಕೊರೋನಾ, ರೂಪಾಂತರಿ ಒಮಿಕ್ರಾನ್ ವೇಗವಾಗಿ ಹರಡುವಂತಹ ವೈರಸ್ ಆಗಿದೆ. ನಮಗೆ ಕೊರೋನ ಎರಡನೇ ಅಲೆಯ ಪರಿಣಾಮವನ್ನು ಅನುಭವಿಸಿದ್ದೇವೆ. ಹೀಗಾಗಿ ಜನಜೀವನಕ್ಕೆ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು. ಜನರು ಕೂಡ ಕೊರೊನಾ ನಿಯಮವನ್ನು ಪಾಲಿಸಬೇಕು ಎಂದಿದ್ದಾರೆ.
ಇನ್ನು ಗುರುವಾರ ರಾಜ್ಯ ಸಚಿವ ಸಂಪುಟ ಸಭೆಯನ್ನು ನಡೆಸಲಾಗುತ್ತದೆ. ಈ ಸಂಪುಟ ಸಭೆಯಲ್ಲಿ ದೀರ್ಘಾವಧಿಯ ಯಾವೆಲ್ಲಾ ಕ್ರಮಗಳನ್ನು ಕೊರೋನಾ ನಿಯಂತ್ರಣಕ್ಕಾಗಿ ತಜ್ಞರ ಸಲಹೆಯ ಮೇರೆಗೆ ಕೈಗೊಳ್ಳಬಹುದು ಎನ್ನುವ ಕುರಿತಂತೆ ಚರ್ಚಿಸಲಾಗುತ್ತದೆ. ಆ ಬಳಿಕ ಕೊರೋನಾ ನಿಯಂತ್ರಣಕ್ಕಾಗಿ ಕಠಿಣ ನಿರ್ಧಾರವನ್ನು ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.
ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಹೊಸದಾಗಿ 900 ಬಸ್ ಗಳು ಸೇರ್ಪಡೆಗೊಳ್ಳಲಿವೆ ಎಂದು…
2025-26 ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಂದ ಎಫ್.ಎ.ಕ್ಯೂ ಗುಣಮಟ್ಟದ ಶೇಂಗಾ…
ರಾಜ್ಯದಲ್ಲಿ ಈಗಾಗಲೇ ಮಲೆನಾಡು ಪ್ರದೇಶದಲ್ಲಿ ಕಳೆದ ವರ್ಷ 100 ಕಾಲುಸಂಕ ನಿರ್ಮಾಣ ಮಾಡಲಾಗಿದೆ.…
ಉತ್ತರ ಕರ್ನಾಟಕ ಭಾಗದಲ್ಲಿ ಮುಂಗಾರು ಫಸಲು ಬಂದಾಗ ಭೂತಾಯಿಗೆ ಪೂಜೆ ಸಲ್ಲಿಸಿ ಫಸಲನ್ನು…
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ ಜನರ ಸಾಮಾಜಿಕ ಮತ್ತು…