ಕೊರೋನಾ, ರೂಪಾಂತಾರಿ ಒಮಿಕ್ರಾನ್‌ನಿಂದ ಸೋಂಕಿತರ ಸಂಖ್ಯೆಯು ದಿನದಿಂದ ದಿನಕ್ಕೆ ಹೆಚ್ಚತ್ತಿದೆ. ಈ ನಡುವೆ ಹೊಸವರ್ಷಾಚರಣೆಯ ಹಿನ್ನಲೆ ಜನರು ಮಧ್ಯರಾತ್ರಿಯಲ್ಲಿ ಪಾರ್ಟಿ ಮಾಡುವ ಕಾರಣದಿಂದಲೇ ನೈಟ್ ಕರ್ಫ್ಯೂವನ್ನು ಜಾರಿಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸ್ಪಷ್ಟ ಪಡಿಸಿದ್ದಾರೆ.
ನಾಳೆಯಿಂದ ರಾಜ್ಯಾಂತದ್ಯಂತ 10 ದಿನಗಳ ಕಾಲ ರಾತ್ರಿ 10 ಗಂಟೆಯಿಂದ ಮುಂಜಾನೆ 5 ರವರೆಗೆ ಕರ್ಫ್ಯೂ ಜಾರಿ ಮಾಡಿರುವುದಕ್ಕೆ ವಿರೋಧ ವ್ಯಕ್ತವಾಗಿತ್ತು. ಇದಕ್ಕೆ ಸೀಎಂ ಸ್ಪಷ್ಟನೆ ನೀಡಿದ್ದರು. ಈಗಾಗಲೇ ಸ್ಪಷ್ಟಪಡಿಸಿರುವಂತೆ ಸರ್ಕಾರದ ತೀರ್ಮಾನದಲ್ಲಿ ಯಾವುದೇ ಬದಲಾವಣೆಗಳಿಲ್ಲ. ಸಾರ್ವಜನಿಕರು ನಮ್ಮೊಂದಿಗೆ ಕೈಜೋಡಿಸಿದಾಗ ಮಾತ್ರ ಸೋಂಕು ನಿಯಂತ್ರಣ ಸಾಧ್ಯವಾಗುತ್ತದೆ ಎಂದು ತಿಳಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel