ದಕ್ಷಿಣ ಆಫ್ರಿಕಾದಲ್ಲಿ ಗೋಚರಿಸಿರುವ ಕೊರೋನಾ ರೂಪಾಂತರಿ ಓಮ್ರಿಕಾನ್ ಸೋಂಕು ಬೆಂಗಳೂರಿಗೆ ಆಗಮಿಸಿದ ಇಬ್ಬರಲ್ಲಿ ಕಾಣಿಸಿಕೊಂಡಿದೆ ಎಂಬ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಜ್ಯದಲ್ಲೂ ಕಟ್ಟೆಚ್ಚರಕ್ಕೆ ಕ್ರಮ ಕೈಗೊಳ್ಳಲಾಗಿದೆ.
ಕೊರೋನಾ ರೂಪಾಂತರಿ ಓಮ್ರಿಕಾನ್ ಸೋಂಕು ಬಗ್ಗೆ ಜಾಗತಿಕ ಮಟ್ಟದಲ್ಲಿ ಆತಂಕ ಶುರುವಾಗಿದೆ. ದಕ್ಷಿಣ ಆಫ್ರಿಕಾದಲ್ಲಿ ಕಾಣಿಸಿಕೊಂಡಿರುವ ಹೊಸ ಕೊರೊನಾ ರೂಪಾಂತರಿ ಆತಂಕ ಈಗ ದೇಶಕ್ಕೂ ಎದುರಾಗಿದೆ. ದಕ್ಷಿಣ ಆಫ್ರಿಕಾದಲ್ಲಿ 6 ಪ್ರಕರಣಗಳು, ಹಾಂಗ್‌ಕಾಂಗ್‌ನಲ್ಲಿ 1 ಪ್ರಕರಣ ಈಗಾಗಲೇ ಪತ್ತೆಯಾಗಿವೆ.
ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಆಗಮಿಸಿದ ಇಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ. ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಈ ತಿಂಗಳು ಆಗಮಿಸಿದ ಸುಮಾರು 94 ಪ್ರಯಾಣಿಕರ ಪೈಕಿ ಇಬ್ಬರಲ್ಲಿ ಕೊರೋನಾ ಸೋಂಕು ಪತ್ತೆಯಾಗಿತ್ತು, ಅದರಲ್ಲಿ ಎರಡು ಪ್ರಕರಣದಲ್ಲಿ ಓಮಿಕ್ರಾನ್ ಸೋಂಕು ಇದೆ ಎಂದು ಶಂಕಿಸಲಾಗಿದೆ. ಹೀಗಾಗಿ ಸದ್ಯ ವಿದೇಶ ಪ್ರಯಾಣದ ಮೇಲೆ ತೀರಾ ನಿಗಾ ಇಡಲಾಗಿದೆ. ಪ್ರಯಾಣಿಕರು ಮತ್ತು ಅವರ ಸಂಪರ್ಕಗಳ ಸ್ಕ್ರೀನಿಂಗ್ ಮತ್ತು ಪರೀಕ್ಷೆ ಕಟ್ಟುನಿಟ್ಟಾಗಿ ಮಾಡಲಾಗುತ್ತಿದ್ದು , ಕರ್ನಾಟಕ – ಕೇರಳ-ತಮಿಳುನಾಡಿ ಸೇರಿದಂತೆ ಗಡಿಭಾಗದ ಓಡಾಟದ ಕಡೆಗೂ ಕಟ್ಟೆಚ್ಚರ ಇರಿಸಲಾಗಿದೆ.
ಇದರ ಜೊತೆಗೆ ಸರ್ಕಾರಿ ಕಚೇರಿಗಳು, ಮಾಲ್‌ಗಳು, ಹೋಟೆಲ್‌ಗಳು, ಸಿನಿಮಾ ಹಾಲ್‌ಗಳು, ಮೃಗಾಲಯಗಳು, ಈಜುಕೊಳಗಳು ಮತ್ತು ಗ್ರಂಥಾಲಯಗಳಲ್ಲಿ ಕೆಲಸ ಮಾಡುವವರಿಗೆ ಎರಡನೇ ಡೋಸ್ ಲಸಿಕೆಯನ್ನು ಕಡ್ಡಾಯಗೊಳಿಸಲು ಸರ್ಕಾರ ನಿರ್ಧರಿಸಿದೆ.
ಕೊರೋನಾ ಸೋಂಕಿನ ಒಮಿಕ್ರೋನ್ ರೂಪಾಂತರಿ ಕುರಿತು ಎಚ್ಚರಿಕೆಯಿಂದಿರಲು ಪ್ರಧಾನಿ ನರೇಂದ್ರ ಮೋದಿ ಅವರು ಈಗಾಗಲೇ ಸೂಚನೆ ನೀಡಿದ್ದಾರೆ.
ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಾರ್ಚ್…
ಸಣ್ಣಪುಟ್ಟ ಸಮಸ್ಯೆಗಳಿಗೆ, ಮುಂದೆ ಆಗಬಹುದಾದ ಅನೇಕ ಸಾಧ್ಯತೆಗಳ ಊಹಾತ್ಮಕ ಘಟನೆಗಳಿಗೆ, ಇನ್ನೂ ಅನೇಕ…
ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಕಳೆದ ಒಂಬತ್ತು ತಿಂಗಳಿಗೂ ಹೆಚ್ಚು ಕಾಲ ಸಿಲುಕಿಕೊಂಡಿದ್ದ ಭಾರತೀಯ…
ಆಸ್ತಿಯನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡ ನಂತರ, ಪೋಷಕರನ್ನು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಬಿಟ್ಟು…
ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್ ಆಗಿವೆ. ಬಿಹಾರ ಮತ್ತು ಉತ್ತರ…
ಕಲ್ಯಾಣ ಕರ್ನಾಟಕ ಭಾಗದಲ್ಲಿ 1800 ಶಿಕ್ಷಕರು ಸೇರಿದಂತೆ ಒಟ್ಟಾರೆ ರಾಜ್ಯದಲ್ಲಿ 5 ಸಾವಿರ…