#RamMandir | ಅಯೋಧ್ಯೆ ರಾಮ ಮಂದಿರದ ನೆಲ ಮಹಡಿಯ ನಿರ್ಮಾಣ ಕಾಮಗಾರಿ ಅಂತ್ಯ | ಜ.22 ರಂದು ರಾಮ ಮಂದಿರದಲ್ಲಿ ಮೂರ್ತಿ ಪ್ರತಿಷ್ಠಾಪನೆ ನಿರೀಕ್ಷೆ

September 27, 2023
12:45 PM
ರಾಮಲಲ್ಲಾನ ‘ಪ್ರಾಣ ಪ್ರತಿಷ್ಠಾಪನಾ’ 10 ದಿನಗಳ ಆಚರಣೆ ನಡೆಯಲಿದೆ. ಮುಂದಿನ ವರ್ಷ ಜನವರಿ 20 ರಿಂದ 24 ರ ನಡುವೆ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ ನಡೆಯಲಿದೆ.

ಭಾರತೀಯ ಹಿಂದುಗಳ ಹಲವು ದಶಕಗಳ ಕನಸು ಈಡೇರುವ ಸಮಯ ಸನ್ನಿಹಿತವಾಗುತ್ತಿದೆ. ಅಯೋಧ್ಯೆ ರಾಮ ಮಂದಿರದ ನೆಲ ಮಹಡಿಯ ನಿರ್ಮಾಣ ಕಾಮಗಾರಿ ಡಿಸೆಂಬರ್‌ ಅಂತ್ಯಕ್ಕೆ ಮುಕ್ತಾಯವಾಗಲಿದ್ದು, ಜನವರಿ 22 ರಂದು ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯುವ ನಿರೀಕ್ಷೆ ಇದೆ ಎಂದು ದೇವಾಲಯ ನಿರ್ಮಾಣ ಸಮಿತಿ ಮುಖ್ಯಸ್ಥ ನೃಪೇಂದ್ರ ಮಿಶ್ರಾ ತಿಳಿಸಿದ್ದಾರೆ.

Advertisement
Advertisement
Advertisement
Advertisement

ಖಾಸಗಿ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಮುಂದಿನ ವರ್ಷ ಜನವರಿ 20 ರಿಂದ 24 ರ ನಡುವೆ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದಾರೆ. ಪ್ರತಿಷ್ಠಾಪನೆಯ ಅಂತಿಮ ದಿನಾಂಕವನ್ನು ಮೋದಿ ಅವರಿಗೆ ಇನ್ನೂ ತಿಳಿಸಬೇಕಿದೆ ಎಂದು ಹೇಳಿದ್ದಾರೆ.

Advertisement

ಜನವರಿ 14 ರಂದು ಮಕರ ಸಂಕ್ರಾಂತಿಯ ನಂತರ ರಾಮಲಲ್ಲಾನ ಪವಿತ್ರೀಕರಣವನ್ನು ಪ್ರಾರಂಭಿಸಲು ಮಂದಿರ ಟ್ರಸ್ಟ್ ನಿರ್ಧರಿಸಿದೆ. ಅದರ ನಂತರ ರಾಮಲಲ್ಲಾನ ‘ಪ್ರಾಣ ಪ್ರತಿಷ್ಠಾಪನಾ’ 10 ದಿನಗಳ ಆಚರಣೆ ನಡೆಯಲಿದೆ. ಜೂನ್‌ನಲ್ಲಿ ರಾಮ ಮಂದಿರ ಟ್ರಸ್ಟ್ ಸದಸ್ಯ ಮಿಶ್ರಾ ಅವರು, ರಾಮಲಲ್ಲಾ ವಿಗ್ರಹದ ಪ್ರತಿಷ್ಠಾಪನೆಯ ನಂತರ ಮುಂದಿನ ವರ್ಷ ಜನವರಿ 24 ರಂದು ಅಯೋಧ್ಯೆಯಲ್ಲಿ ರಾಮಮಂದಿರವನ್ನು ಭಕ್ತರಿಗೆ ತೆರೆಯುವ ಸಾಧ್ಯತೆಯಿದೆ ಎಂದು ಹೇಳಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ತುಮಕೂರು ಜಿಲ್ಲೆ | 10 ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆ ಆರಂಭ
February 5, 2025
6:45 AM
by: The Rural Mirror ಸುದ್ದಿಜಾಲ
ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ  ಬೆಳೆಗಳಿಗೆ ರಾಸಾಯನಿಕ ಬಳಸಬೇಡಿ
February 5, 2025
6:42 AM
by: The Rural Mirror ಸುದ್ದಿಜಾಲ
ಕಾರವಾರದಲ್ಲಿ ಎ.18-22 ವರೆಗೆ ಕರಾವಳಿ ಉತ್ಸವ
February 5, 2025
6:40 AM
by: The Rural Mirror ಸುದ್ದಿಜಾಲ
ಕೋಲಾರ ಜಿಲ್ಲೆ | ಒತ್ತುವರಿಯಾಗಿರುವ ಕೆರೆಗಳನ್ನು ಆದ್ಯತೆ ಮೇರೆಗೆ ತೆರವುಗಳಿಸಲು ಕ್ರಮ
February 5, 2025
6:37 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror