ಭಾರತೀಯ ಹಿಂದುಗಳ ಹಲವು ದಶಕಗಳ ಕನಸು ಈಡೇರುವ ಸಮಯ ಸನ್ನಿಹಿತವಾಗುತ್ತಿದೆ. ಅಯೋಧ್ಯೆ ರಾಮ ಮಂದಿರದ ನೆಲ ಮಹಡಿಯ ನಿರ್ಮಾಣ ಕಾಮಗಾರಿ ಡಿಸೆಂಬರ್ ಅಂತ್ಯಕ್ಕೆ ಮುಕ್ತಾಯವಾಗಲಿದ್ದು, ಜನವರಿ 22 ರಂದು ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯುವ ನಿರೀಕ್ಷೆ ಇದೆ ಎಂದು ದೇವಾಲಯ ನಿರ್ಮಾಣ ಸಮಿತಿ ಮುಖ್ಯಸ್ಥ ನೃಪೇಂದ್ರ ಮಿಶ್ರಾ ತಿಳಿಸಿದ್ದಾರೆ.
ಖಾಸಗಿ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಮುಂದಿನ ವರ್ಷ ಜನವರಿ 20 ರಿಂದ 24 ರ ನಡುವೆ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದಾರೆ. ಪ್ರತಿಷ್ಠಾಪನೆಯ ಅಂತಿಮ ದಿನಾಂಕವನ್ನು ಮೋದಿ ಅವರಿಗೆ ಇನ್ನೂ ತಿಳಿಸಬೇಕಿದೆ ಎಂದು ಹೇಳಿದ್ದಾರೆ.
ಜನವರಿ 14 ರಂದು ಮಕರ ಸಂಕ್ರಾಂತಿಯ ನಂತರ ರಾಮಲಲ್ಲಾನ ಪವಿತ್ರೀಕರಣವನ್ನು ಪ್ರಾರಂಭಿಸಲು ಮಂದಿರ ಟ್ರಸ್ಟ್ ನಿರ್ಧರಿಸಿದೆ. ಅದರ ನಂತರ ರಾಮಲಲ್ಲಾನ ‘ಪ್ರಾಣ ಪ್ರತಿಷ್ಠಾಪನಾ’ 10 ದಿನಗಳ ಆಚರಣೆ ನಡೆಯಲಿದೆ. ಜೂನ್‌ನಲ್ಲಿ ರಾಮ ಮಂದಿರ ಟ್ರಸ್ಟ್ ಸದಸ್ಯ ಮಿಶ್ರಾ ಅವರು, ರಾಮಲಲ್ಲಾ ವಿಗ್ರಹದ ಪ್ರತಿಷ್ಠಾಪನೆಯ ನಂತರ ಮುಂದಿನ ವರ್ಷ ಜನವರಿ 24 ರಂದು ಅಯೋಧ್ಯೆಯಲ್ಲಿ ರಾಮಮಂದಿರವನ್ನು ಭಕ್ತರಿಗೆ ತೆರೆಯುವ ಸಾಧ್ಯತೆಯಿದೆ ಎಂದು ಹೇಳಿದ್ದರು.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ "ಮಹಿಳಾ ಗ್ರಾಮಸಭೆ" ಯು ಸಂಪಾಜೆ ಗ್ರಾಮ ಪಂಚಾಯತ್…
ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ 852.6 ಕ್ವಿಂಟಾಲ್ ಬಿತ್ತನೆ ಬೀಜಗಳನ್ನು ಸಂಗ್ರಹಿಸಲಾಗಿದ್ದು,…
ಬೆಂಗಳೂರಿನಲ್ಲಿ ಈ ಹಿಂದೆ ಕಸ ವಿಲೇವಾರಿಗೆ 98 ಪ್ಯಾಕೇಜ್ ಟೆಂಡರ್ ಕರೆಯಲಾಗಿತ್ತು. ಈ…
ರಾಜ್ಯದ ಜೇನುತುಪ್ಪಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಹಾಗೂ ಮಾರುಕಟ್ಟೆ ಒದಗಿಸಲು ತೋಟಗಾರಿಕಾ ಇಲಾಖೆಯಿಂದ…
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಶದಲ್ಲಿ 183 ಕೆರೆಗಳಿದ್ದು, ಕಳೆದ ಒಂದು ವಾರದಿಂದ…