ಕೃಷಿ ವಿಜ್ಞಾನಿ ಡಾ| ಎಂ ಮಹಾದೇವಪ್ಪ | ಹುಟ್ಟುಹಬ್ಬದಂದು ಅವರ ಸಾಧನೆಗೊಂದು ನಮನ

August 5, 2024
2:38 PM

ಡಾ| ಎಂ ಮಹಾದೇವಪ್ಪ ಭಾರತದಲ್ಲಿ ಹೈಬ್ರಿಡ್ ಭತ್ತದ ಯೋಜನೆಯ ಪಿತಾಮಹರಾಗಿ, ನಾಡಿನ ಶ್ರೇಷ್ಠ ಕೃಷಿ ವಿಜ್ಞಾನಿಗಳಾಗಿ, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತರಾಗಿ ಹೆಸರಾಗಿದ್ದವರು. ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಖ್ಯಾತಿ ಹೊಂದಿದ್ದ ಮಹಾದೇವಪ್ಪ ಅವರು 1937 ಆಗಸ್ಟ್ 4 ರಂದು ಚಾಮರಾಜನಗರ ಜಿಲ್ಲೆಯ ಮಾದಾಪುರದಲ್ಲಿ ಜನಿಸಿದರು. ತಂದೆ ಮಾದಪ್ಪ. ತಾಯಿ ಪುಟ್ಟಬಸಮ್ಮ. ಸ್ಥಳೀಯ ಸರ್ಕಾರಿ ಶಾಲೆಯಲ್ಲಿಯೇ ಕಲಿತ ಇವರು ನಂತರ ಮೈಸೂರು, ಕೊಯಮತ್ತೂರಿನಲ್ಲಿ ಉನ್ನತ ವ್ಯಾಸಂಗ ನಡೆಸಿದರು.

Advertisement
Advertisement
Advertisement

ಮಹಾದೇವಪ್ಪನವರು ಮೈಸೂರಿನ ಸಿ.ಎಫ್.ಟಿ.ಆರ್.ಐ ನಲ್ಲಿ ಹಿರಿಯ ಸಂಶೋಧಕರಾಗಿ ಸೇವೆ ಸಲ್ಲಿಸಿ, ಬೆಂಗಳೂರಿನ ಕೃಷಿ ವಿವಿಯಲ್ಲಿ ಜೋಳ ಅಭಿವೃದ್ಧಿ ತಜ್ಞರಾಗಿ (ಬ್ರೀಡರ್) ಹಾಗೂ ಮಂಡ್ಯದ ವಿ.ಸಿ ಫಾರ್ಮನಲ್ಲಿ ಭತ್ತ ಸಸ್ಯ ವಿಜ್ಞಾನಿಯಾಗಿ ಸೇವೆ ಸಲ್ಲಿಸಿದರು. ಪಿಲಿಪೈನ್ಸ್ ನ ಅಂತಾರಾಷ್ಟ್ರೀಯ ಭತ್ತ ಸಂಶೋಧನಾ ಸಂಸ್ಥೆಯಲ್ಲಿ ಸಂಶೋಧನೆ (1977-1980) ನಡೆಸಿದ ಮಹಾದೇವಪ್ಪನವರು ಮತ್ತೆ ಕರ್ನಾಟಕಕ್ಕೆ ಬಂದು ಹಲವು ಕಡೆ ಸೇವೆ ಸಲ್ಲಿಸಿ 1994 -2000 ಅವಧಿಯಲ್ಲಿ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಉಪಕುಲಪತಿಗಳಾಗಿ ಸೇವೆ ಸಲ್ಲಿಸಿದ್ದರು.

Advertisement

ಮಹಾದೇವಪ್ಪನವರು ಫಿಲಿಪೈನ್ಸ್ ಅಲ್ಲದೆ ಜಪಾನ್, ತೈವಾನ್, ಥೈಲ್ಯಾಂಡ್, ಮಲೇಷಿಯಾ, ಚೈನಾ, ಇಂಗ್ಲೆಂಡ್, ಆಸ್ಟ್ರೇಲಿಯಾ, ಅಮೆರಿಕಾ, ಕ್ಯೂಬಾ, ರಷ್ಯಾ, ಕೀನ್ಯಾ ದೇಶಗಳಲ್ಲಿ ಸಂಚರಿಸಿ ತಮ್ಮ ಸಂಶೋಧನೆ ಹಾಗೂ ಕಾರ್ಯವ್ಯಾಪ್ತಿಯನ್ನು ಜಗತ್ತಿನಾದ್ಯಂತ ವಿಸ್ತರಿಸಿದ್ದರು. ಡಾ| ಎಂ ಮಹಾದೇವಪ್ಪನವರು ಕೆಆರ್‌ಎಚ್-1 ಹಾಗೂ 2 ಎನ್ನುವ ಹೆಸರಿನ ಭತ್ತದ ತಳಿಗಳನ್ನು ರೂಪಿಸಲು ರಾಷ್ಟ್ರಮಟ್ಟದಲ್ಲಿ ಮುಂದಾಳತ್ವ ವಹಿಸಿದವರು. ಭತ್ತದ ಬೆಳೆಯಲ್ಲಿ ಕಟಾವು ಹಾಗೂ ಕಟಾವಿನ ನಂತರ ಆಗುವ ನಷ್ಟವನ್ನು ತಗ್ಗಿಸಲು ಅವರು ವಿಶಿಷ್ಟವಾದ ತಂತ್ರಜ್ಞಾನ ರೂಪಿಸಿದರು. ನೀರಿನ ಕೊರತೆ ನಡುವೆಯೂ ಅತ್ಯುತ್ತಮವಾಗಿ ಭತ್ತ ಬೆಳೆಯುವ ಮಾರ್ಗೋಪಾಯಗಳನ್ನು ಹಾಕಿಕೊಟ್ಟರು.

ಡಾ| ಮಹಾದೇವಪ್ಪನವರಿಗೆ ಪದ್ಮಶ್ರೀ, ಪದ್ಮಭೂಷಣ, ಹೂಕರ್ ಪ್ರಶಸ್ತಿ, ಕರ್ನಾಟಕ ರಾಜೋತ್ಸವ ಪ್ರಶಸ್ತಿ, ಭಾರತ ರತ್ನ ಎಂ ವಿಶ್ವೇಶ್ವರಯ್ಯ ಸ್ಮಾರಕ ಪ್ರಶಸ್ತಿ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಜೀವಮಾನ ಸಾಧನೆಗಾಗಿನ ಗೌರವ ಸೇರಿದಂತೆ ಅನೇಕ ಗೌರವಗಳು ಸಂದಿದ್ದವು. ಕೃಷಿಕ್ಷೇತ್ರಕ್ಕೆ ದೊಡ್ಡ ಕೊಡುಗೆ ನೀಡಿದ ಡಾ| ಎಂ ಮಹಾದೇವಪ್ಪ 2021 ಮಾರ್ಚ್ 6 ರಂದು ಲಿಂಗೈಕ್ಯರಾದರು.

Advertisement

ಮೂಲ : social network

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಇಂಧನ ಉಳಿತಾಯ | ಪರಿಸರ ಜಾಗೃತಿ | ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆ
November 23, 2024
6:21 AM
by: The Rural Mirror ಸುದ್ದಿಜಾಲ
ಕೃಷಿ ಭೂಮಿ ಉಳಿಸಿಕೊಳ್ಳಲು- ಆರೋಗ್ಯ ಕಾಪಾಡಲು ಸಾವಯವ ಕೃಷಿಯತ್ತ ಒಲವು ಬೆಳೆಸಿ | ಐಐಟಿ ನಿರ್ದೇಶಕ ಡಾ.ವೆಂಕಪ್ಪಯ್ಯ ಆರ್. ದೇಸಾಯಿ
November 23, 2024
6:12 AM
by: The Rural Mirror ಸುದ್ದಿಜಾಲ
ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಕ್ಯೂಆರ್ ಕೋಡ್ ಅಳವಡಿಕೆ
November 23, 2024
6:06 AM
by: The Rural Mirror ಸುದ್ದಿಜಾಲ
ಅಡಿಕೆ ಹಳದಿರೋಗ ಪೀಡಿತ ಪ್ರದೇಶದಲ್ಲಿ ಗೇರುಕೃಷಿ ಹೇಗೆ..? | ಸಂಪಾಜೆಯಲ್ಲಿ ಪರ್ಯಾಯ ಕೃಷಿಯ ಬಗ್ಗೆ ಚಿಂತನೆ |
November 23, 2024
5:59 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror