ಮಾಹಿತಿ

ಎಳ್ಳು ಅಮವಾಸ್ಯೆ | ಮಣ್ಣಿನ ಸಂಸ್ಕೃತಿ ಈ ದಿನ ಹಲವು ಕಡೆ ಶ್ರೇಷ್ಠ ಏಕೆ ಗೊತ್ತಾ…? |

Share

ಇಂದು ಅಮಾವಾಸ್ಯೆ. ಇದನ್ನು ಎಳ್ಳಮವಾಸ್ಯೆ(Elluamavasye) ಎಂದು ಕರೆಯಲಾಗುತ್ತದೆ. ರೈತರು(Farmer) ಭೂ ತಾಯಿಯ ಪೂಜೆ(Bhoomi Pooja) ಮಾಡಿದರೆ, ಶ್ರಾದ್ಧಕರ್ಮಗಳಿಂದ ಪಿತೃಗಳನ್ನು ಸಂತೃಪ್ತಗೊಳಿಸಲೂ ಸುದಿನ. ಇಂದು ದಕ್ಷಿಣಾಯನದ ಮಾರ್ಗಶಿರ ಮಾಸದ ಅಮಾವಾಸ್ಯೆಯ ದಿನ. ಈ ದಿನವನ್ನು ಮೊದಲಿಂದಲೂ ಎಳ್ಳಮಾವಾಸ್ಯೆ ಎಂದು ಆಚರಿಸಿಕೊಂಡು ಬರಲಾಗುತ್ತಿದೆ. ಎಳ್ಳು ಬೆಳೆ ಬರುವ ಅಮಾವಾಸ್ಯೆಯ ದಿನವಿದು.

ಕರ್ನಾಟಕ ಹಾಗೂ ಆಂಧ್ರಪ್ರದೇಶದಲ್ಲಿ ರೈತರು ಎಳ್ಳಮಾವಾಸ್ಯೆಯನ್ನು ಆಚರಿಸುತ್ತಾರೆ. ಈ ದಿನಕ್ಕೊಂದು ಐತಿಹ್ಯವಿದೆ. ಪಾಂಡವರು ಕುರುಕ್ಷೇತ್ರ ಯುದ್ಧದಲ್ಲಿ ಮಡಿದ ತಮ್ಮ ಬಂಧುಮಿತ್ರರಿಗಾಗಿ ಪಿಂಡ ಪ್ರದಾನ ಮಾಡಿದ ದಿನ ಈ ಎಳ್ಳಮಾವಾಸ್ಯೆ. ಈ ದಿನ ಮಲೆನಾಡು, ದಕ್ಷಿಣ ಕನ್ನಡ, ಉತ್ತರ ಕರ್ನಾಟಕಗಳಲ್ಲಿ ಒಂದೊಂದು ರೀತಿಯಲ್ಲಿ ಎಳ್ಳಮಾವಾಸ್ಯೆ ಆಚರಿಸಲಾಗುತ್ತದೆ.

ರೈತರಿಗೆ ಸಂಭ್ರಮ : ಇಂದು ವಿಶೇಷವಾಗಿ ಉತ್ತರ ಕರ್ನಾಟಕದಲ್ಲಿ ರೈತರು ತಮಗೆ ಉತ್ತಮ ಇಳುವರಿ ಕೊಟ್ಟ ಭೂಮಿ ತಾಯಿಗೆ ಧನ್ಯವಾದ ಹೇಳುವ ದಿನವಾಗಿ ಎಳ್ಳಮಾವಾಸ್ಯೆಯನ್ನು ಆಚರಿಸುತ್ತಾರೆ. ಇಂದು ರೈತರು ತಮ್ಮ ಜಮೀನಿನಲ್ಲಿ ಎಲ್ಲೆಡೆ ಎಳ್ಳು ಹಾಗೂ ಬೆಲ್ಲವನ್ನು ಚಿಮ್ಮುತ್ತಾರೆ. ಈ ಎಳ್ಳು ಹಾಗೂ ಬೆಲ್ಲವು ಜಮೀನಿನಲ್ಲಿರುವ ಹುಳಗಳಿಗೆ ಆಹಾರ ಎಂದೂ ಹೇಳಲಾಗುತ್ತದೆ.ಎರೆಹುಳದಂತವು,ಭೂತಾಯಿಯಫಲವತ್ತತೆಯನ್ನು,ಕಾಪಾಡುತ್ತವೆ. ಅವುಗಳಿಗೆ ಆಹಾರದಂತೆ ಕೂಡಾ ಇದನ್ನು ಚಿಮ್ಮಲಾಗುತ್ತದೆ. ಕೆಲವು ಗದ್ದೆಗಳಲ್ಲಿ ಪಾಂಡವರನ್ನು ಪ್ರತಿಷ್ಠಾಪಿಸಿಪೂಜೆಸಲ್ಲಿಸುತ್ತಾರೆ. ಮತ್ತೆ ಕೆಲವೆಡೆ ಹೊಲದಲ್ಲಿ ನಿಂತಿರುವ ಪೈರುಗಳ ಮಧ್ಯೆ ಬನ್ನಿ ಮರಕ್ಕೆ ಪೂಜೆ ಮಾಡಿ ಭೂಮಿ ತಾಯಿಗೆ ಚೆರಗ ಚೆಲ್ಲಾಗುತ್ತದೆ.

ನಂತರ ಬೇಳೆಕಾಳುಗಳು ಹಾಗೂ ಹಸಿರು ಸೊಪ್ಪುಗಳನ್ನು ಬಳಸಿ ಸಸ್ಯಾಹಾರದ ಅಡುಗೆ ತಯಾರಿಸಲಾಗುತ್ತದೆ. ಭಜ್ಜಿ, ಪುಂಡಿ, ಚಿಕ್ಕಿ, ಬರ್ತಾ, ಜೋಳದ ಕಡುಬು, ಸಜ್ಜೆ ಕಡುಬು, ಪಾಲಕ್ ಮೆಂತ್ಯೆ ಬಳಸಿದ ತಿಂಡಿಗಳು, ನಾನಾ ಬಗೆಯ ಚಟ್ನಿಗಳು ಎಳ್ಳಮಾವಾಸ್ಯೆಗೆ ವಿಶೇಷವಾಗಿ ತಯಾರಾಗುತ್ತವೆ. ನಂತರ ಎಲ್ಲಾ ರೈತಾಪಿ ವರ್ಗದವರು ಕುಟುಂಬ ಸಮೇತರಾಗಿ ಬಂಡಿಗಳಲ್ಲಿ ಸಂಭ್ರಮದಿಂದ ಹೊಲ ಗದ್ದೆ ತೋಟಗಳಿಗೆ ಹೋಗಿ ಒಟ್ಟಾಗಿ ಊಟ ಸವಿಯುತ್ತಾರೆ.

ದೇವಾಲಯಗಳಲ್ಲಿ ಪ್ರಾರ್ಥನೆ ಸಲ್ಲಿಸುತ್ತಾರೆ : ಈ ದಿನ ಉತ್ತಮ ಇಳುವರಿಗಾಗಿ ಬೇಡಿಕೊಂಡು ದೇವಾಲಯಗಳಲ್ಲಿ ವಿಶೇಷ ಪೂಜೆ ಕೈಗೊಳ್ಳಲಾಗುತ್ತದೆ. ಇನ್ನು, ಶನಿದೋಷವಿರುವವರು, ಸಾಡೇಸಾತಿನಡೆಯುತ್ತಿರುವವರು, ಈದಿನಶನಿಯನ್ನುಒಲಿಸಲು ವಿಶೇಷ ಪೂಜೆ ಮತ್ತು ದಾನಗಳನ್ನು ಮಾಡಿ ಪ್ರಾರ್ಥನೆ ಸಲ್ಲಿಸುತ್ತಾರೆ.

ಸಮುದ್ರ ಸ್ನಾನ : ದಕ್ಷಿಣ ಕನ್ನಡ, ಮಲೆನಾಡು ಭಾಗಗಳಲ್ಲಿ ಈ ದಿನ ತೀರ್ಥ ಸ್ನಾನವೇ ಪ್ರಮುಖವಾದುದು. ಎಳ್ಳಮಾವಾಸ್ಯೆಯ ದಿನ ತರ್ಪಣ ಬಿಡುವ ಮೊದಲು ದಕ್ಷಿಣ ಕನ್ನಡದ ಜನರು ಸಮುದ್ರದಲ್ಲಿ ಮುಳುಗು ಹಾಕಿದರೆ, ಇತರೆಡೆಯ ಜನರು ನದಿಗಳಲ್ಲಿ ತೀರ್ಥ ಸ್ನಾನ ಮಾಡಿ ಪಿತೃಗಳಲ್ಲಿ ಪ್ರಾರ್ಥಿಸುತ್ತಾರೆ. ಉಡುಪಿ ಜಿಲ್ಲೆಯ ಮಲ್ಪೆಯಲ್ಲಿರುವ, ವಡಭಂಡೇಶ್ವರ ದೇವಾಲಯದಲ್ಲಿ ಇಂದು ಬಲರಾಮನನ್ನು ದರ್ಶನ ಮಾಡುವುದರಿಂದ ಬಹಳಷ್ಟು ಒಳಿತಾಗುತ್ತದೆ ಎಂಬ ನಂಬಿಕೆ ಇದೆ.

ಶ್ರಾದ್ಧ : ಮೊದಲೇ ಹೇಳಿದಂತೆ ಇಂದು ಪಾಂಡವರು ಮಹಾಭಾರತದಲ್ಲಿ ಮಡಿದ ತಮ್ಮವರಿಗಾಗಿ ತರ್ಪಣ ಬಿಟ್ಟ ದಿನ. ಅಂದರೆ, ಇದು ಶ್ರಾದ್ಧ ಕರ್ಮಗಳನ್ನು ನಡೆಸಲು ಸೂಕ್ತ ದಿನ. ಈ ದಿನ ತಿಲ ತರ್ಪಣ ಬಿಟ್ಟು, ಬಡವರಿಗೆ ಊಟ ಹಾಕಿ, ದಾನಗಳನ್ನು ನೀಡಿ ಶ್ರಾದ್ಧ ಕ್ರಿಯೆಗಳನ್ನು ನಡೆಸುವುದರಿಂದ ಬದುಕಿನಲ್ಲಿ ಶಾಂತಿ, ಸಮೃದ್ಧಿ ನೆಲೆಸುತ್ತದೆ ಎಂಬ ನಂಬಿಕೆ ಇದೆ. ವಿಶೇಷವಾಗಿ ಇಂದು ಎಳ್ಳನ್ನು ದಾನ ಮಾಡಲಾಗುತ್ತದೆ. ಎಳ್ಳಿಗೆ ಪಾಪ ನಾಶ ಮಾಡುವ ಶಕ್ತಿಯಿದೆ. ಇಂದು ಜನರು ಪಿತ್ರಾಂತರ್ಯಾಮಿ ಶ್ರೀ ಹರಿ ಪೂಜೆಯನ್ನು ಸಹ ಕೈಗೊಳ್ಳುತ್ತಾರೆ. ಇದರಿಂದ ಕುಟುಂಬದಲ್ಲಿ ಮಡಿದ ಎಲ್ಲಾ ಪೂರ್ವಜರೂ ಸಂತೋಷಗೊಂಡು ತಮ್ಮ ಮುಂದಿನ ತಲೆಮಾರುಗಳನ್ನು ಉತ್ತಮ ರೀತಿಯಲ್ಲಿ ಆಶೀರ್ವಾದ ಮಾಡಲಿದ್ದಾರೆ ಎನ್ನಲಾಗುತ್ತದೆ.

-Source : Digital media

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | ಕರಾವಳಿ, ಮಲೆನಾಡು ಭಾಗಗಳಲ್ಲಿ ಬೇಸಿಗೆ ಮಳೆಯು ಮುಂದುವರಿಯುವ ಲಕ್ಷಣ |

ರಾಜ್ಯದ ದಕ್ಷಿಣ ಕರಾವಳಿ, ಮಲೆನಾಡು ಭಾಗಗಳಲ್ಲಿ ಬೇಸಿಗೆ ಮಳೆಯು ಮುಂದುವರಿಯುವ ಲಕ್ಷಣಗಳಿವೆ. ಉತ್ತರ…

2 hours ago

ಅಂತರಂಗ | ಸ್ವಾರ್ಥರಹಿತ ಬೇಡಿಕೆಗಳಿಗೆ ರಾಜಕೀಯದಲ್ಲಿ ಮಾನ್ಯತೆಯಿಲ್ಲ…!

ರಾಜಕೀಯ ಎನ್ನುವುದು ಕೃಷಿ ಹಾಗೂ ಅಡಿಕೆ ಬೆಳೆಗಾರರ ವಿಚಾರದಲ್ಲಿ ಕೂಡಾ ಹೇಗೆ ಇರುತ್ತದೆ,…

5 hours ago

ಬದುಕು ಪುರಾಣ | ಎಲ್ಲರೊಳಗೂ ‘ಕುಂಭಕರ್ಣ’ನಿದ್ದಾನೆ!

ಮನುಷ್ಯನಿಗೆ ಆಹಾರ, ನಿದ್ರೆಗಳು ಸಹಜ. ವಯೋವೃದ್ಧರಿಗೆ ಬೋಜನದ ನಂತರದ ನಿದ್ರೆಯಿಂದ ಮೈಮನಗಳಿಗೆ ಸ್ಫೂರ್ತಿ.…

5 hours ago

ದಾವಣಗೆರೆ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ | ಬಾಡಿಗೆ ಆಧಾರದಲ್ಲಿ ಖಾಸಗಿ ಕೊಳವೆಬಾವಿ

ದಾವಣಗೆರೆ ಜಿಲ್ಲೆಯ 6 ತಾಲೂಕುಗಳಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಬಹುದಾದ 197…

5 hours ago

ಯಾದಗಿರಿ ಜಿಲ್ಲೆಗೆ ತಾಪಮಾನ ಎಚ್ಚರಿಕೆ | ಮುಂದಿನ ಮೂರು ತಿಂಗಳಿನಲ್ಲಿ ಗರಿಷ್ಠ 45 ಡಿಗ್ರಿ ತಾಪಮಾನ ದಾಖಲಾಗುವ ಸಾಧ್ಯತೆ

ಯಾದಗಿರಿ ಜಿಲ್ಲೆಯಲ್ಲಿ ಮುಂದಿನ ಮೂರು ತಿಂಗಳಿನಲ್ಲಿ ಗರಿಷ್ಠ 45 ಡಿಗ್ರಿ ಸೆಲ್ಸಿಯಸ್ ತಾಪಮಾನ…

5 hours ago

ಏಪ್ರಿಲ್ 30 ರವರೆಗೆ ಜೋಗ ಜಲಪಾತಕ್ಕೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ

ವಿಶ್ವವಿಖ್ಯಾತ ಜೋಗ ಜಲಪಾತ ಪ್ರದೇಶದ ವ್ಯಾಪ್ತಿಯಲ್ಲಿ ಪ್ರವಾಸಿಗರಿಗೆ ಮೂಲಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ…

5 hours ago