ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು ಧಾರವಾಡದ ಐಐಟಿ ನಿರ್ದೇಶಕ ಡಾ.ವೆಂಕಪ್ಪಯ್ಯ ಆರ್. ದೇಸಾಯಿ ಹೇಳಿದ್ದಾರೆ.
ತೋಟಗಾರಿಕಾ ವಿಶ್ವವಿದ್ಯಾಲಯದಲ್ಲಿ ಜರುಗಿದ 19ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿಶ್ವದಲ್ಲಿಯೇ ಸರ್ವಾಧಿಕ ಕೃಷಿ ಯೋಗ್ಯ ಭೂಮಿಯ ಪ್ರಮಾಣವಿರುವ ಕೆಲವೇ ದೇಶಗಳಲ್ಲಿ ಭಾರತ ಕೂಡ ಒಂದಾಗಿದ್ದು, ಪ್ರತಿಶತ 40-45 ರಷ್ಟು ಕೃಷಿಗೆ ಯೋಗ್ಯವಾದ ಭೂಮಿ ಇದೆ. ಅದನ್ನು ಹಾಗೆಯೇ ಉಳಿಸಿಕೊಂಡು ಹೋಗುವುದು ಸವಾಲಾಗಿ ಪರಿಣಮಿಸಿದೆ ಎಂದರು. ಇದ್ದ ಭೂಮಿಯಲ್ಲಿ ಸಾವಯವ ಕೃಷಿ ಪದ್ದತಿ ಬಳಸಿಕೊಂಡು ಹೆಚ್ಚು ಆರೋಗ್ಯದ ಜೊತೆಗೆ ಹೆಚ್ಚು ಆದಾಯ ಪಡೆಯುವ ಕೆಲಸವಾಗಬೇಕು. ಸಾವಯವ ಕೃಷಿ ಪದ್ಧತಿಯಿಂದ ಭೂಮಿ ಫಲವತ್ತತೆಯನ್ನು ಉಳಿಸಿಕೊಳ್ಳಲು ಸಾಧ್ಯ. ಇದರಿಂದ ಕಡಿಮೆ ಖರ್ಚಿನಲ್ಲಿ ಹೆಚ್ಚಿನ ಆದಾಯ ಪಡೆಯಬಹುದಾಗಿದೆ ಎಂದರು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel