ರೈತರ ಬದುಕೇ ಹಾಗೆ…. ಲಾಭವೋ ನಷ್ಟವೋ ತಾವು ಬೆಳೆ ಬೆಳೆಯೋದನ್ನು ಮಾತ್ರ ನಿಲ್ಲಿಸೋದಿಲ್ಲ.ತಾನು ಪಟ್ಟ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗುತ್ತದೆ ಎನ್ನುವ ಭರವಸೆಯೇ ಕೃಷಿ. ಈಗ ಈರುಳ್ಳಿ ಬೆಳೆಗಾರರಿಗೆ ಈ ಭರವಸೆ ಸ್ವಲ್ಪ ಕಷ್ಟವಾಯಿತು. 30 ರೂಪಾಯಿ ಇದ್ದ ಕೆಜಿ ಈರುಳ್ಳಿ ಬೆಲೆ ಇಳಿಕೆಯಾಗಿದೆ. ದ್ವಿತೀಯ ದರ್ಜೆಯ ಈರುಳ್ಳಿ 2-5 ರೂಪಾಯಿಗೆ ಇಳಿಕೆಯಾದರೆ, ಉತ್ತಮ ಗುಣಮಟ್ಟದ ಈರುಳ್ಳಿ ಕೆ.ಜಿಗೆ 5-10 ರೂ. ಗೆ ಮಾರಾಟವಾಗುತ್ತಿದೆ. ಬೆಳೆಗಾರರು ಸಂಕಷ್ಟಕ್ಕೆ ಒಳಗಾಗಿದ್ದಾರೆ.
ಕಳೆದ ಒಂದು ತಿಂಗಳಿಂದ ಈರುಳ್ಳಿ ಬೆಲೆ ಏಕಾಏಕಿ ಕುಸಿತವಾಗುತ್ತಿದೆ. ಈರುಳ್ಳಿ ಬೆಳಗಾರರಿಗೆ ಸಂಕಷ್ಟ ಎದುರಾಗಿದೆ. ಏಕಾಏಕಿ ಸೋಮವಾರ , ದುಪ್ಪಟ್ಟು ಪ್ರಮಾಣ ಈರುಳ್ಳಿ ಮಾರುಕಟ್ಟೆಗೆ ಬಂದಿದೆ. ಹೆಚ್ಚು ಈರುಳ್ಳಿ ಮಾರುಕಟ್ಟೆಗೆ ಬಂದಿರುವ ಕಾರಣ ಬೆಲೆ ಕುಸಿತವಾಗಿದೆ. ಇದರಿಂದ ಈರುಳ್ಳಿ ಬೆಳೆಗಾರರಿಗೆ ಸಂಕಷ್ಟ ಎದುರಾಗಿದೆ.
ತೆಲುಗು ರಾಜ್ಯಗಳಲ್ಲಿ ಗುಣಮಟ್ಟದ ಈರುಳ್ಳಿ ಬೆಲೆ ಸದ್ಯ ಕೆಜಿಗೆ 30 ರೂ.ವರೆಗೆ ಇದೆ, ಆದರೆ ಮಹಾರಾಷ್ಟ್ರದಲ್ಲಿ ಈರುಳ್ಳಿ ಬೆಲೆ ಕೆಜಿಗೆ 2 ರೂಪಾಯಿಗೆ ಇಳಿದಿದ್ದು, ಇದರಿಂದ ಈರುಳ್ಳಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಚಾಲೀಸಗಾಂವ್ ಮಾರುಕಟ್ಟೆಯಲ್ಲಿ ಕೆಜಿ ಈರುಳ್ಳಿ ಬೆಲೆ ಕೇವಲ 2 ರಿಂದ 4 ರೂಪಾಯಿಗೆ ಮಾರಾಟವಾಗುತ್ತಿದೆ. ಮಾರುಕಟ್ಟೆಗೆ ಕ್ವಿಂಟಲ್ ಈರುಳ್ಳಿ ಬೆಲೆ 2,500 ರಿಂದ 3,000ಗೆ ಹಾಕಲಾಗುತ್ತಿದೆ. ವರ್ತಕರು 200 ರಿಂದ 850 ರೂ. ಪಡೆದುಕೊಳ್ತಿದ್ದಾರೆ. ಹೀಗಾಗಿ ಈರುಳ್ಳಿ ಬೆಲೆ ಭಾರೀ ಪ್ರಮಾಣದಲ್ಲಿ ಕುಸಿದಿರುವುದರಿಂದ ಮಹಾರಾಷ್ಟ್ರದ ರೈತರು ದಿಕ್ಕೇ ತೋಚದಂತಾಗಿದ್ದಾರೆ.
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…
ನಾಡಿನ ಹೆಮ್ಮೆಯ ಸಂಸ್ಥೆ ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ರಾಷ್ಟ್ರ ರಾಜಧಾನಿಯಲ್ಲಿ ಲಭ್ಯವಿರಲಿದೆ.…
ರಾಜ್ಯದಲ್ಲಿ ತುಮಕೂರು, ಚಿತ್ರದುರ್ಗ, ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ಹೆಚ್ಚಾಗಿ ಹುಣಸೆಹಣ್ಣು ಬೆಳೆಯಲಾಗುತ್ತಿದೆ. ಈ…
ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಗೆ 200…
ಗ್ರಾಹಕರಿಗೆ ಗುಣಮಟ್ಟದ ಜೇನುತುಪ್ಪ ದೊರಕುವಂತೆ ಮಾಡಲು ಹಾಗೂ ಜೇನು ಕೃಷಿಕರ ಆರ್ಥಿಕ ಮಟ್ಟ…