ಹೆಚ್ಚುತ್ತಿರುವ ಆನ್‌ಲೈನ್ ವಂಚನೆ ಪ್ರಕರಣಗಳು | ಸಾರ್ವಜನಿಕರ ಜಾಗೃತಿಗಾಗಿ ಅರಿವು ಕಾರ್ಯಕ್ರಮ

November 15, 2024
10:56 PM

ವಾಟ್ಸ್ ಆಪ್ ಮೂಲಕ ಮದುವೆಯ ಆಮಂತ್ರಣ ಪತ್ರಿಕೆಗಳನ್ನು ಕಳುಹಿಸಿ, ಮೊಬೈಲ್ ಹ್ಯಾಕ್ ಮಾಡುವ ಪ್ರವೃತ್ತಿ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿದೆ. ಸಾರ್ವಜನಿಕರು ಇಂತಹ ಆಮಂತ್ರಣ ಪತ್ರಿಕೆಗಳ ಕುರಿತು ಎಚ್ಚರಿಕೆಯಿಂದ ಇರಬೇಕೆಂದು ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ ಮನವಿ ಮಾಡಿದ್ದಾರೆ.

ಹೆಚ್ಚುತ್ತಿರುವ ಆನ್‌ಲೈನ್ ವಂಚನೆಗಳ ಕುರಿತು ಜಿಲ್ಲೆಯ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮದ ಭಾಗವಾಗಿ ಮಾಹಿತಿ ನೀಡಿರುವ ಅವರು, ವಾಟ್ಸ್ ಆಪ್ ಮೂಲಕ ಡಿಜಿಟಲ್ ಮದುವೆ ಆಮಂತ್ರಣ ಪತ್ರಿಕೆಗಳ ಹಂಚಿಕೆ ಮಾಡುತ್ತಿರುವುದು ಹೆಚ್ಚಾಗಿ ಕಂಡುಬರುತ್ತಿದ್ದು, ಈ ಆಮಂತ್ರಣ ಪತ್ರಿಕೆಗಳ ಲಿಂಕ್  ತೆರೆಯಲು ಹೋಗಿ, ಮೊಬೈಲ್ ಹ್ಯಾಕ್ ಆಗಿ, ಸಾರ್ವಜನಿಕರು ತೊಂದರೆಗಳಿಗೆ ಸಿಲುಕುತ್ತಿದ್ದಾರೆ ಎಂದು ವಿವರಿಸಿದರು.   ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಯಾವುದೇ ಅಪರಿಚಿತ ಲಿಂಕ್‌ಗಳನ್ನು ತೆರೆಯುವ ಮುನ್ನ ಎಚ್ಚರ ವಹಿಸಬೇಕು. ಸಹಾಯಕ್ಕಾಗಿ ಹತ್ತಿರದ ಪೊಲೀಸ್ ಠಾಣೆ ಅಥವಾ 1930  ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ
April 2, 2026
6:56 AM
by: ಅರುಣ್‌ ಕುಮಾರ್ ಕಾಂಚೋಡು
ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ
April 2, 2026
6:37 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!
April 1, 2026
2:30 PM
by: ಸಾಯಿಶೇಖರ್ ಕರಿಕಳ
ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror