ವಾಟ್ಸ್ ಆಪ್ ಮೂಲಕ ಮದುವೆಯ ಆಮಂತ್ರಣ ಪತ್ರಿಕೆಗಳನ್ನು ಕಳುಹಿಸಿ, ಮೊಬೈಲ್ ಹ್ಯಾಕ್ ಮಾಡುವ ಪ್ರವೃತ್ತಿ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿದೆ. ಸಾರ್ವಜನಿಕರು ಇಂತಹ ಆಮಂತ್ರಣ ಪತ್ರಿಕೆಗಳ ಕುರಿತು ಎಚ್ಚರಿಕೆಯಿಂದ ಇರಬೇಕೆಂದು ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ ಮನವಿ ಮಾಡಿದ್ದಾರೆ.
ಹೆಚ್ಚುತ್ತಿರುವ ಆನ್‌ಲೈನ್ ವಂಚನೆಗಳ ಕುರಿತು ಜಿಲ್ಲೆಯ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮದ ಭಾಗವಾಗಿ ಮಾಹಿತಿ ನೀಡಿರುವ ಅವರು, ವಾಟ್ಸ್ ಆಪ್ ಮೂಲಕ ಡಿಜಿಟಲ್ ಮದುವೆ ಆಮಂತ್ರಣ ಪತ್ರಿಕೆಗಳ ಹಂಚಿಕೆ ಮಾಡುತ್ತಿರುವುದು ಹೆಚ್ಚಾಗಿ ಕಂಡುಬರುತ್ತಿದ್ದು, ಈ ಆಮಂತ್ರಣ ಪತ್ರಿಕೆಗಳ ಲಿಂಕ್ ತೆರೆಯಲು ಹೋಗಿ, ಮೊಬೈಲ್ ಹ್ಯಾಕ್ ಆಗಿ, ಸಾರ್ವಜನಿಕರು ತೊಂದರೆಗಳಿಗೆ ಸಿಲುಕುತ್ತಿದ್ದಾರೆ ಎಂದು ವಿವರಿಸಿದರು. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಯಾವುದೇ ಅಪರಿಚಿತ ಲಿಂಕ್‌ಗಳನ್ನು ತೆರೆಯುವ ಮುನ್ನ ಎಚ್ಚರ ವಹಿಸಬೇಕು. ಸಹಾಯಕ್ಕಾಗಿ ಹತ್ತಿರದ ಪೊಲೀಸ್ ಠಾಣೆ ಅಥವಾ 1930 ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ ಹೇಳಿದರು.
ಪರಿಸರದ ಮೇಲೆ ಮೈಕ್ರೋಪ್ಲಾಸ್ಟಿಕ್ಗಳ ಪರಿಣಾಮವನ್ನು ತಗ್ಗಿಸಲು ತಕ್ಷಣದ ಕ್ರಮ ಕೈಗೊಳ್ಳಬೇಕೆಂದು ಸಂಶೋಧನೆಗಳು ಹೇಳುತ್ತವೆ.…
ಮಿಜೋರಾಂನ ಕೊಲಾಸಿಬ್ ಜಿಲ್ಲೆಯಲ್ಲಿ ಸುಮಾರು 130 ಹೆಕ್ಟೇರ್ಗಳಷ್ಟು ಅರಣ್ಯ ಪ್ರದೇಶ ಸುಟ್ಟುಹೋಗಿರುವ ಬಗ್ಗೆ…
ಕಳೆದ 8 ವರ್ಷಗಳಲ್ಲಿ 11 ಶತಕೋಟಿ ಘನ ಮೀಟರ್ ಮತ್ತು ಅದಕ್ಕಿಂತ ಹೆಚ್ಚಿನದನ್ನು…
ಹಾಲಿನ ದರವನ್ನ 4 ರೂ. ಹೆಚ್ಚಳ ಮಾಡಿರುವ ಸರ್ಕಾರದ ನಿರ್ಧಾರವನ್ನ ಮೈಮುಲ್ ಅಧ್ಯಕ್ಷ…
ಮಕ್ಕಳಿಗೆ ಉತ್ತಮ ಶಿಕ್ಷಣ ಕಲ್ಪಿಸುವ ಬಗ್ಗೆ ಚಿಂತಿಸುವ ಪೋಷಕರು ಅವರು ಭವಿಷ್ಯದಲ್ಲಿ ಉಸಿರಾಡುವ …