ಅರಣ್ಯ ಉಳಿದರಷ್ಟೇ ಮಾನವ ಉಳಿಯಲು ಸಾಧ್ಯ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ಕಾಡಿದ್ದರೆ ಮಳೆ ಆಗುತ್ತದೆ, ಕಾಡಿದ್ದರೆ ಹಸಿರು ಹೊದಿಕೆ ಹೆಚ್ಚುತ್ತದೆ, ಈಗ ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆಯ ಕಾಲಘಟ್ಟದಲ್ಲಿ ಸುಂದರ ಬದುಕಿಗೆ ಸೋಪಾನವಾಗುತ್ತದೆ. ನಮ್ಮ ಪೂರ್ವಿಕರು ಬೆಟ್ಟ, ಗುಡ್ಡಗಳ ಮೇಲೆ ದೇವಾಲಯ ನಿರ್ಮಿಸುವ ಮೂಲಕ ಪ್ರಕೃತಿ ಪರಿಸರ ಉಳಿಸಿದ್ದಾರೆ. ಬೆಟ್ಟದ ಮೇಲೆ ದೇವಾಲಯ ಇರುವ ಕಾರಣ ಆ ಗುಡ್ಡಗಳನ್ನು, ಬೆಟ್ಟಗಳನ್ನು ಯಾರೂ ನಾಶ ಮಾಡಿಲ್ಲ. ನಮ್ಮ ಪೂರ್ವಿಕರ ದೂರದರ್ಶಿತ್ವ ಅಮೂಲ್ಯವಾದುದ್ದು ಎಂದು ಈಶ್ವರ ಬಿ ಖಂಡ್ರೆ ಹೇಳಿದರು.
ಕಾರ್ಯಕ್ರಮದಲ್ಲಿ ಸಂಸತ್ ಸದಸ್ಯ ಶ್ರೇಯಸ್ ಪಟೇಲ್, ಶಾಸಕ ಎಚ್.ಕೆ. ಸುರೇಶ್, ಮಾಜಿ ಶಾಸಕ ಲಿಂಗೇಶ್, ಕೆರಗೋಡಿ ರಂಗಾಪುರದ ಶ್ರೀ ಗುರುಪರದೇಶಿಕೇಂದ್ರ ಮಹಾಸ್ವಾಮೀಜಿ, ಪುಷ್ಪಗಿರಿ ಮಹಾ ಸಂಸ್ಥಾನ, ಹಳೇಬೀಡಿನ ಶ್ರೀ ಸೋಮಶೇಖರ ಶಿವಾಚಾರ್ಯ ಮಹಾಸ್ವಾಮೀಜಿ ಮೊದಲಾದವರು ಭಾಗವಹಿಸಿದ್ದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel