ಯಾದಗಿರಿ ಜಿಲ್ಲೆಯ ಅನಪುರ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿದ ಪ್ರಕರಣದಲ್ಲಿ ಮತ್ತೊಂದು ಸಾವು ಸಂಭವಿಸಿದ್ದು, ಸಾವಿನ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಕಳೆದ ಮೂರು ದಿನಗಳಿಂದ ವಾಂತಿ ಭೇದಿಯಿಂದ ಬಳಲುತ್ತಿದ್ದ ವೃದ್ಧೆ ನರಸಮ್ಮ (70) ಚಿಕಿತ್ಸೆ ಫಲಕಾರಿಯಾಗದೆ ಜಿಲ್ಲಾಸ್ಪತ್ರೆಯಲ್ಲಿ ತಡರಾತ್ರಿ ಸಾವಿಗೀಡಾಗಿದ್ದಾರೆ. ಕಲುಷಿತ ನೀರು ಸೇವನೆಯಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
Advertisement
ಗುರುವಾರ ಮತ್ತೆ 7 ಜನರಲ್ಲಿ ವಾಂತಿ ಭೇದಿ ಕಾಣಿಸಿಕೊಂಡಿದೆ. ರಾಯಚೂರುನ ರಿಮ್ಸ್ ಆಸ್ಪತ್ರೆಯಲ್ಲಿ 3 ಜನ, ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ 16 ಜನ ದಾಖಲಾಗಿ ಅಗತ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ.ಬುಧವಾರ ಕಲುಷಿತ ನೀರು ಸೇವನೆಯಿಂದ ಸಾವಿತ್ರಮ್ಮ, ಸಾಯಮ್ಮ ಎಂಬವರು ಮೃತಪಟ್ಟಿದ್ದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement