ಆನೇಕಲ್ ತಾಲೂಕಿನ ಜಿಗಣಿಯ ಕುಂಟ್ಲರೆಡ್ಡಿ ಬಡಾವಣೆಯ ವೇಂಕಟೇಶ್ ಎಂಬುವರ ಮನೆಗೆ ನಿನ್ನೆ ನುಗ್ಗಿದ್ದ ಚಿರತೆಯನ್ನು ಕಲ್ಕೆರೆ ಅರಣ್ಯ ಅಧಿಕಾರಿ ಗಣೇಶ್ ನೇತೃತ್ವದಲ್ಲಿ ಸೆರೆಹಿಡಿಯಲಾಗಿದೆ.
ವೆಂಕಟೇಶ್ ಹಾಗೂ ಅವರ ಪತ್ನಿ ಮನೆಯಲ್ಲಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಮನೆಯೊಳಗೆ ಬಂದ ಚಿರತೆಯನ್ನು ಕೂಡಿ ಹಾಕಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ನಂತರ ಸ್ಥಳಕ್ಕೆ ಧಾವಿಸಿದ ಅರಣ್ಯ ಅಧಿಕಾರಿಗಳು ಸತತ 5 ಗಂಟೆಗಳ ಕಾರ್ಯಾಚರಣೆ ನಡೆಸಿ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಯಶಶ್ವಿಯಾಗಿದ್ದಾರೆ. ಚಿರತೆಯನ್ನು ಬನ್ನೇರುಘಟ್ಟ ಮೃಗಾಲಯಕ್ಕೆ ಚಿಕಿತ್ಸೆಗಾಗಿ ರವಾನಿಸಲಾಗಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel