ಕಡಬ ತಾಲೂಕಿನ ರೆಂಜಿಲಾಡಿ ಬಳಿ ಇಬ್ಬರನ್ನು ಬಲಿ ತೆಗೆದುಕೊಂಡ ಆನೆಯ ಹಿಂಡಿನಿಂದ ನರ ಹಂತಕ ಆನೆಯನ್ನು ಹಿಡಿಯುವ ಪ್ರಯತ್ನದಲ್ಲಿ ಅರಣ್ಯ ಇಲಾಖಾ ಸಿಬಂದಿಗಳು ಯಶಸ್ಸಾಗಿದ್ದಾರೆ. ಮೂರು ದಿನಗಳ ಕಾರ್ಯಾಚರಣೆ ಬಳಿಕ ಕಾಡಾನೆ ಸೆರೆಯಾಗಿದೆ.
Advertisement
Advertisement
ಕಡಬದ ಕೊಂಬಾರು ರಕ್ಷಿತಾರಣ್ಯದಲ್ಲಿ ಕಾಡಾನೆ ಪತ್ತೆ ಹಚ್ಚಿ ಅರಿವಳಿಕೆ ಔಷಧಿ ನೀಡಿ ದುಬಾರೆ ಸಾಕಾನೆ ಶಿಬಿರದಿಂದ ಆಗಮಿಸಿದ 5 ಆನೆಗಳ ಸಹಕಾರದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು.ಕಾಡಾನೆ ಸೆರೆ ಹಿಡಿಯುವುದರಲ್ಲಿ ಪಳಗಿರುವ ಅಭಿಮನ್ಯು,ಪ್ರಶಾಂತ್, ಹರ್ಷ,ಕಂಜನ್ ಹಾಗು ಮಹೇಂದ್ರ ಎಂಬ ಸಾಕಾನೆಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದೆ. ಮಂಗಳವಾರ ಬೆಳಗ್ಗಿನಿಂದ ಆರಂಭಗೊಂಡ ಅರಣ್ಯ ಇಲಾಖೆಯ ಕಾರ್ಯಾಚರಣೆ ಗುರುವಾರ ಸಂಜೆಯ ವೇಳೆಗೆ ಯಶಸ್ವಿಯಾಗಿದೆ. ಮುಂದೆ ಸಾಕಾನೆಗಳ ಸಹಕಾರದಲ್ಲಿ ಕಾಡಾನೆಯನ್ನು ಬಂಧಿಸಿ ಆನೆ ಶಿಬಿರಕ್ಕೆ ಕರೆದೊಯ್ಯಲಾಗುತ್ತದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ದಿನೇಶ್ ಕುಮಾರ್ ತಿಳಿಸಿದ್ದಾರೆ.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement