ಮೊನ್ನೆ ಮೊನ್ನೆಯವರೆಗೆ ಆಪರೇಷನ್ ಕಮಲ ಸದ್ದು ಮಾಡಿತ್ತು. ಈಗ ರಾಜ್ಯದಲ್ಲಿ ಆಪರೇಶಷನ್ ಹಸ್ತ ಸದ್ದು ಮಾಡುತ್ತಿದೆ. ಈ ನಿಟ್ಟಿನಲ್ಲಿ ವಲಸಿಗರನ್ನು ತನ್ನ ಉಳಿಸಿಕೊಳ್ಳುವ ಹಾಗೂ ಬಿಜೆಪಿಯ ಯಾವ ನಾಯಕರೂ ಕಾಂಗ್ರೆಸ್ ಕಡೆ ವಾಲದಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ಬಿಜೆಪಿ ಹೈಕಮಾಂಡ್ ಬಿಎಸ್‌ವೈ ಹೆಗಲಿಗೆ ಹಾಕಿದೆ. ಈ ಹಿನ್ನೆಲೆಯಲ್ಲಿ ಲೋಕಸಭೆ ಚುನಾವಣೆ ತಯಾರಿ, ಆಪರೇಷನ್ ಹಸ್ತ, ಪಕ್ಷ ಸಂಘಟನೆ, ಸರ್ಕಾರದ ವಿರುದ್ಧ ಹೋರಾಟ ಸೇರಿದಂತೆ ಅನೇಕ ಪ್ರಮುಖ ವಿಚಾರಗಳ ಬಗ್ಗೆ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ತಿಳಿದುಬಂದಿದೆ.
ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಹಿರಿಯ ನಾಯಕರು ಸಭೆ ನಡೆಸಿ ಚರ್ಚಿಸಿದರು. ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಆಪರೇಷನ್ ಹಸ್ತದ ಬಗ್ಗೆ ಗಂಭೀರ ಚರ್ಚೆ ನಡೆಯಿತು. ಆಪರೇಷನ್ ಹಸ್ತಕ್ಕೆ ಬ್ರೇಕ್ ಹಾಕುವ ಬಗ್ಗೆ ನಾಯಕರು ಚರ್ಚಿಸಿದರು. 135 ಸ್ಥಾನ ಗೆದ್ದಿದ್ರೂ ನಮ್ಮ ಶಾಸಕರ ಮೇಲೆ ಕಣ್ಣು ಹಾಕಿದ್ದಾರೆ ಎಂದು ಕೆಲ ನಾಯಕರು ಆಕ್ರೋಶ ಹೊರಹಾಕಿದರು. ವಲಸಿಗರಲ್ಲಿ ಯಾರ‍್ಯಾರು ಹೋಗಬಹುದು? ಅವರನ್ನು ಹೇಗೆ ತಡೆಯಬಹುದು ಎಂಬ ಬಗ್ಗೆ ಮಾತುಕತೆ ನಡೆಸಿದರು. ಈ ವೇಳೆ, ವಲಸಿಗರ ಜೊತೆ ಸಮಾಲೋಚನೆ ಮಾಡುವುದಾಗಿ ಸಭೆಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ರಾಜ್ಯ ಸರ್ಕಾರದ ಮೇಲೆ ಬಂದಿರುವ ಕಮಿಷನ್ ಆರೋಪ ವಿಚಾರದಲ್ಲಿ ಹೋರಾಟಕ್ಕೆ ತಂತ್ರ, ಗುತ್ತಿಗೆದಾರರು ಮಾಡಿರುವ ಆರೋಪಕ್ಕೆ ರಾಜ್ಯಾದ್ಯಂತ ಹೋರಾಟಕ್ಕೆ ರೂಪುರೇಷೆ, ಎನ್‌ಇಪಿ ರದ್ದು ಮಾಡುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಹೋರಾಟಕ್ಕೆ ಪ್ಲಾನ್, ರಾಷ್ಟ್ರೀಯ ಶಿಕ್ಷಣ ನೀತಿ ರದ್ದು ಮಾಡುವ ರಾಜ್ಯ ಸರ್ಕಾರದ ನಡೆಗೆ ವಿವಿಧ ಸ್ವರೂಪದ ಹೋರಾಟಕ್ಕೆ ರೂಪುರೇಷೆ, ಕಾಂಗ್ರೆಸ್‌ಗೆ ಮರಳುತ್ತಾರೆ ಎನ್ನಲಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್, ಬೈರತಿ ಬಸವರಾಜ್ ಮತ್ತಿತರರ ಉಳಿಸಿಕೊಳ್ಳುವ ಬಗ್ಗೆ ಚರ್ಚೆ ಬಿಬಿಎಂಪಿ ಚುನಾವಣೆ, ವಾರ್ಡ್ ಮರುವಿಂಗಡಣೆ ಅವೈಜ್ಞಾನಿಕ ಎಂದು ಕಾನೂನು ಹೋರಾಟದ ಚರ್ಚೆ, ಲೋಕಸಭೆ ಚುನಾವಣಾ ತಯಾರಿ, ಪಕ್ಷ ಸಂಘಟನೆ ಬಗ್ಗೆ ಚರ್ಚೆ, ಲೋಕಸಭೆ ಚುನಾವಣೆಗೆ ರಿವರ್ಸ್ ಆಪರೇಷನ್ ಮೊದಲಾದ ವಿಷಯಗಳ ಬಗ್ಗೆ ಸಮಿತಿ ಸಭೆಯಲ್ಲಿ ಚರ್ಚೆ ನಡೆಸಲಾಯಿತು.
ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಸಿಎಂ ಯಡಿಯೂರಪ್ಪ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಡಿ.ವಿ. ಸದಾನಂದ ಗೌಡ, ಮಾಜಿ ಸಚಿವರಾದ ಗೋವಿಂದ ಕಾರಜೋಳ, ಆರ್. ಅಶೋಕ್, ಕೆ.ಎಸ್. ಈಶ್ವರಪ್ಪ, ಡಾ. ಸಿ.ಎನ್. ಅಶ್ವತ್ಥ ನಾರಾಯಣ, ಬಿ. ಶ್ರೀರಾಮುಲು, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಜಿ.ವಿ. ರಾಜೇಶ್ ಸೇರಿ ಅನೇಕರು ಸಭೆಯಲ್ಲಿ ಪಾಲ್ಗೊಂಡಿದ್ದರು.
Source : Digital Media
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಒಂದೆರೆಡು ಕಡೆ ಮಳೆಯಾಗಿದೆ. ಉತ್ತರ ಕನ್ನಡ, ಉಡುಪಿ,…
ಹಾವೇರಿ ಜಿಲ್ಲೆಯಲ್ಲಿರುವ 17 ಗ್ರಾಮ ಪಂಚಾಯಿತಿ ವ್ಯಾಪ್ತಿಯ 18 ಗ್ರಾಮಗಳಿಗೆ 21 ಬಾಡಿಗೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
11.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಆಮದು ಕಾರಣದಿಂದ ಮಿಜೋರಾಂ ಅಡಿಕೆ ಬೆಳೆಗಾರರು ಸ್ಪರ್ಧಾತ್ಮಕ ಬೆಲೆಯಲ್ಲಿ ತಮ್ಮ ಉತ್ಪನ್ನಗಳನ್ನು ಮಾರಾಟ…
ಇಂದು ಯಾವುದೇ ಪ್ರಮುಖ ಕ್ಷೇತ್ರಗಳನ್ನು ಗಮನಿಸಿ, ಅಲ್ಲೊಂದು ವಿವಾದ ಇಲ್ಲದೇ ಇರುವುದೇ ಇಲ್ಲ.…