ಅಪರೇಷನ್ ಸಿಂಧೂರ | ಭಾರತೀಯ ಸೇನೆಯ ಕಾರ್ಯಾಚರಣೆಗೆ ರಾಜ್ಯದೆಲ್ಲೆಡೆ ಸಂಭ್ರಮಾಚರಣೆ

May 7, 2025
10:02 PM

ಭಾರತೀಯ ಸೇನಾಪಡೆಯು, ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿ ಪರಾಕ್ರಮ ಮೆರೆದಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದ ಪರವಾಗಿ ಭಾರತೀಯ ಸೇನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ.

Advertisement
Advertisement

ಬೆಂಗಳೂರಿನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಭದ್ರತೆ ವಿಷಯಲ್ಲಿ ಯಾವುದೇ ರಾಜಿ ಸಾಧ್ಯವಿಲ್ಲ. ಈ ದಾಳಿಯನ್ನು ಪಕ್ಷಾತೀತವಾಗಿ ಎಲ್ಲರೂ ಬೆಂಬಲಿಸಿದ್ದೇವೆ. ಇದು ಪಾಕಿಸ್ತಾನಕ್ಕೆ ಎಚ್ಚರಿಕೆಯ ಗಂಟೆಯಾಗಿದೆ. ರಾಜ್ಯ ಸರ್ಕಾರ ಸೇನೆ ಕೈಗೊಂಡಿರುವ ಕ್ರಮವನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ ಎಂದು ಹೇಳಿದರು. ಆಪರೇಷನ್ ಸಿಂಧೂರ ಮೂಲಕ ಸುಮಾರು  9 ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿದೆ. ಕೇವಲ ಉಗ್ರಗಾಮಿಗಳ ನೆಲೆಗಳ ಮೇಲೆ ಮಾತ್ರ ದಾಳಿ ನಡೆಸಲಾಗಿದೆ. ಭಾರತೀಯ ಸೈನಿಕರು ಉಗ್ರರ ನೆಲೆಗಳನ್ನು ಪತ್ತೆ ಹಚ್ಚಿ, ದಾಳಿ ಮಾಡಿದ್ದು, ಅಮಾಯಕ ಜನರ ಸಾವು-ನೋವು ತಪ್ಪಿಸಿದ್ದಾರೆ. ನಮ್ಮ ಸೈನಿಕರ ಕಾರ್ಯದಕ್ಷತೆ ಅಭಿನಂದನೀಯ. ಈ ದಾಳಿಯನ್ನು ನಾವು ಸ್ವಾಗತಿಸುತ್ತೇವೆ ಎಂದರು. ರಾಜ್ಯದಲ್ಲಿ ಸುರಕ್ಷತೆಯ ಕುರಿತು ಎಲ್ಲಾ ಎಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಪಾಕಿಸ್ತಾನದ ಉಗ್ರರ ತಾಣಗಳ ಮೇಲೆ ಭಾರತದ ದಾಳಿ ’ಅಪರೇಷನ್ ಸಿಂಧೂರ’ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಮಾಜಿ ಸೈನಿಕರ ಸಂಘದ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಸಂಭ್ರಮಾಚರಣೆ ನಡೆಸಿದರು. ಮಾಜಿ ಸೈನಿಕರು ಭಾರತ ಧ್ವಜ ಹಿಡಿದು, ಸಿಹಿ ಹಂಚಿ, ಭಾರತೀಯ ಸೇನೆ ಪರ ಘೋಷಣೆ ಕೂಗಿದರು.

ಬೆಳಗಾವಿಯ ಬಡಕಲ್ ಗಲ್ಲಿಯ ನಿವಾಸಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದರು.  ಈ ಸಂದರ್ಭದಲ್ಲಿ ಮಾಜಿ ಸೈನಿಕ ರಮೇಶ್ ಚೌಗಲಾ ಮಾತನಾಡಿ, ಭಾರತೀಯರು ಸೌಮ್ಯವಾದಿಗಳು. ಆದರೆ ದೇಶಕ್ಕೆ ಆತಂಕ ಉಂಟು ಮಾಡಿದರೆ, ಹೋರಾಟಕ್ಕೂ ಸಿದ್ಧ ಎಂಬುದಕ್ಕೆ ಈ ದಾಳಿ ನಿದರ್ಶನವಾಗಿದೆ. ಪಾಕಿಸ್ತಾನ ಇದನ್ನು ಅರಿತುಕೊಳ್ಳಬೇಕು ಎಂದು ಹೇಳಿದ್ದಾರೆ.

’ಅಪರೇಷನ್ ಸಿಂಧೂರ’ ಭಾಗವಾಗಿ ಭಾರತೀಯ ಸೈನಿಕರು ಪಾಕಿಸ್ತಾನದ ಉಗ್ರರ ತಾಣಗಳ ಮೇಲೆ ದಾಳಿ ನಡೆಸಿರುವುದನ್ನು ಬೆಂಬಲಿಸಿ ಚನ್ನಪಟ್ಟಣದಲ್ಲಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ಕಾರ್ಯಕರ್ತರು ವಿಜಯೋತ್ಸವ ಆಚರಣೆ ಮಾಡಿದರು.

Advertisement

ಇದೇ ವೇಳೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ  ಕರ್ನಾಟಕ ರಕ್ಷಣಾ  ವೇದಿಕೆಯ ಕಾರ್ಯಕರ್ತರು, ಸಿಹಿ ಹಂಚಿ ವಿಜಯೋತ್ಸವ ಆಚರಣೆ ಮಾಡಿದರು.

 

 

 

Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಸಂಪಾಜೆಯಲ್ಲಿ ಮಹಿಳಾ ಗ್ರಾಮಸಭೆ | ವಿವಿಧ ಮಾಹಿತಿ -ತರಬೇತಿ
May 22, 2025
10:48 PM
by: The Rural Mirror ಸುದ್ದಿಜಾಲ
ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ ಲಭ್ಯ
May 22, 2025
10:27 PM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನಲ್ಲಿ ಕಸ ವಿಲೇವಾರಿಗೆ 4,790 ಕೋಟಿ ಮೊತ್ತದಲ್ಲಿ 33 ಪ್ಯಾಕೇಜ್
May 22, 2025
9:50 PM
by: The Rural Mirror ಸುದ್ದಿಜಾಲ
ರಾಜ್ಯದ ಜೇನಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ
May 22, 2025
9:45 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group