ಭಾರತೀಯ ಸೇನಾಪಡೆಯು, ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿ ಪರಾಕ್ರಮ ಮೆರೆದಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದ ಪರವಾಗಿ ಭಾರತೀಯ ಸೇನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಭದ್ರತೆ ವಿಷಯಲ್ಲಿ ಯಾವುದೇ ರಾಜಿ ಸಾಧ್ಯವಿಲ್ಲ. ಈ ದಾಳಿಯನ್ನು ಪಕ್ಷಾತೀತವಾಗಿ ಎಲ್ಲರೂ ಬೆಂಬಲಿಸಿದ್ದೇವೆ. ಇದು ಪಾಕಿಸ್ತಾನಕ್ಕೆ ಎಚ್ಚರಿಕೆಯ ಗಂಟೆಯಾಗಿದೆ. ರಾಜ್ಯ ಸರ್ಕಾರ ಸೇನೆ ಕೈಗೊಂಡಿರುವ ಕ್ರಮವನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ ಎಂದು ಹೇಳಿದರು. ಆಪರೇಷನ್ ಸಿಂಧೂರ ಮೂಲಕ ಸುಮಾರು 9 ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿದೆ. ಕೇವಲ ಉಗ್ರಗಾಮಿಗಳ ನೆಲೆಗಳ ಮೇಲೆ ಮಾತ್ರ ದಾಳಿ ನಡೆಸಲಾಗಿದೆ. ಭಾರತೀಯ ಸೈನಿಕರು ಉಗ್ರರ ನೆಲೆಗಳನ್ನು ಪತ್ತೆ ಹಚ್ಚಿ, ದಾಳಿ ಮಾಡಿದ್ದು, ಅಮಾಯಕ ಜನರ ಸಾವು-ನೋವು ತಪ್ಪಿಸಿದ್ದಾರೆ. ನಮ್ಮ ಸೈನಿಕರ ಕಾರ್ಯದಕ್ಷತೆ ಅಭಿನಂದನೀಯ. ಈ ದಾಳಿಯನ್ನು ನಾವು ಸ್ವಾಗತಿಸುತ್ತೇವೆ ಎಂದರು. ರಾಜ್ಯದಲ್ಲಿ ಸುರಕ್ಷತೆಯ ಕುರಿತು ಎಲ್ಲಾ ಎಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಪಾಕಿಸ್ತಾನದ ಉಗ್ರರ ತಾಣಗಳ ಮೇಲೆ ಭಾರತದ ದಾಳಿ ’ಅಪರೇಷನ್ ಸಿಂಧೂರ’ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಮಾಜಿ ಸೈನಿಕರ ಸಂಘದ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಸಂಭ್ರಮಾಚರಣೆ ನಡೆಸಿದರು. ಮಾಜಿ ಸೈನಿಕರು ಭಾರತ ಧ್ವಜ ಹಿಡಿದು, ಸಿಹಿ ಹಂಚಿ, ಭಾರತೀಯ ಸೇನೆ ಪರ ಘೋಷಣೆ ಕೂಗಿದರು.
ಬೆಳಗಾವಿಯ ಬಡಕಲ್ ಗಲ್ಲಿಯ ನಿವಾಸಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಮಾಜಿ ಸೈನಿಕ ರಮೇಶ್ ಚೌಗಲಾ ಮಾತನಾಡಿ, ಭಾರತೀಯರು ಸೌಮ್ಯವಾದಿಗಳು. ಆದರೆ ದೇಶಕ್ಕೆ ಆತಂಕ ಉಂಟು ಮಾಡಿದರೆ, ಹೋರಾಟಕ್ಕೂ ಸಿದ್ಧ ಎಂಬುದಕ್ಕೆ ಈ ದಾಳಿ ನಿದರ್ಶನವಾಗಿದೆ. ಪಾಕಿಸ್ತಾನ ಇದನ್ನು ಅರಿತುಕೊಳ್ಳಬೇಕು ಎಂದು ಹೇಳಿದ್ದಾರೆ.
’ಅಪರೇಷನ್ ಸಿಂಧೂರ’ ಭಾಗವಾಗಿ ಭಾರತೀಯ ಸೈನಿಕರು ಪಾಕಿಸ್ತಾನದ ಉಗ್ರರ ತಾಣಗಳ ಮೇಲೆ ದಾಳಿ ನಡೆಸಿರುವುದನ್ನು ಬೆಂಬಲಿಸಿ ಚನ್ನಪಟ್ಟಣದಲ್ಲಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ಕಾರ್ಯಕರ್ತರು ವಿಜಯೋತ್ಸವ ಆಚರಣೆ ಮಾಡಿದರು.
ಇದೇ ವೇಳೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು, ಸಿಹಿ ಹಂಚಿ ವಿಜಯೋತ್ಸವ ಆಚರಣೆ ಮಾಡಿದರು.
ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ "ಮಹಿಳಾ ಗ್ರಾಮಸಭೆ" ಯು ಸಂಪಾಜೆ ಗ್ರಾಮ ಪಂಚಾಯತ್…
ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ 852.6 ಕ್ವಿಂಟಾಲ್ ಬಿತ್ತನೆ ಬೀಜಗಳನ್ನು ಸಂಗ್ರಹಿಸಲಾಗಿದ್ದು,…
ಬೆಂಗಳೂರಿನಲ್ಲಿ ಈ ಹಿಂದೆ ಕಸ ವಿಲೇವಾರಿಗೆ 98 ಪ್ಯಾಕೇಜ್ ಟೆಂಡರ್ ಕರೆಯಲಾಗಿತ್ತು. ಈ…
ರಾಜ್ಯದ ಜೇನುತುಪ್ಪಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಹಾಗೂ ಮಾರುಕಟ್ಟೆ ಒದಗಿಸಲು ತೋಟಗಾರಿಕಾ ಇಲಾಖೆಯಿಂದ…
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಶದಲ್ಲಿ 183 ಕೆರೆಗಳಿದ್ದು, ಕಳೆದ ಒಂದು ವಾರದಿಂದ…
ವಿದ್ಯುತ್ ಸರಬರಾಜು ಕಂಪನಿಗಳಿಗೆ ಗ್ರಾಮ ಪಂಚಾಯಿತಿಗಳು ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳು ಪಾವತಿಸಬೇಕಾಗಿದ್ದ …