ಮಂಗಳೂರಿನಿಂದ ಕಾರವಾರದವರೆಗಿನ 13 ದ್ವೀಪಗಳನ್ನು ಅಭಿವೃದ್ಧಿಪಡಿಸಲು ಕ್ರಮ

October 1, 2024
8:47 PM

ಉತ್ತರಕನ್ನಡ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ವಿಫುಲವಾದ ಅವಕಾಶಗಳಿದ್ದು, ಪಶ್ಚಿಮಘಟ್ಟ, ಅರಣ್ಯ, ನದಿ ಮತ್ತು ಸಮುದ್ರಗಳ ಸಮ್ಮಿಲನವಾಗಿರುವ ಜಿಲ್ಲೆಯಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲಾಗುವುದು ಎಂದು ರಾಜ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಸಚಿವ ಮಂಕಾಳ ವೈದ್ಯ ತಿಳಿಸಿದ್ದಾರೆ.

Advertisement
Advertisement
Advertisement

ಕಾರವಾರದ ಅಜ್ವಿ ಓಷನ್ ಸಭಾಂಗಣದಲ್ಲಿ, ಜಿಲ್ಲಾಡಳಿತ ಮತ್ತು ಪ್ರವಾಸೋದ್ಯಮ ಇಲಾಖೆ ವತಿಯಿಂದ  ನಡೆದ ವಿಶ್ವ ಪ್ರವಾಸೋದ್ಯಮ ದಿನಾಚರಣೆಯ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಕಡಲು ಪ್ರವಾಸೋದ್ಯಮ, ದೇಗುಲ ಪ್ರವಾಸೋದ್ಯಮ ಅಭಿವೃದ್ಧಿಪಡಿಸಲು  ಅವಕಾಶಗಳಿದ್ದು, ಇದಕ್ಕಾಗಿ ಎಲ್ಲಾ ಇಲಾಖೆಗಳ ನೆರವು ಪಡೆಯಲು ಯೋಜನೆ ರೂಪಿಸಲಾಗುತ್ತಿದೆ ಎಂದರು. ರಾಜ್ಯ ಸರ್ಕಾರದ ವತಿಯಿಂದ ಎಲ್ಲಾ ಜಿಲ್ಲೆಗಳಲ್ಲಿ ಪಂಚತಾರಾ ಹೋಟೆಲ್‌ಗಳನ್ನು ಸರ್ಕಾರದ ವತಿಯಿಂದ ಅಥವಾ ಖಾಸಗಿ ಸಾರ್ವಜನಿಕ ಸಹಯೋಗದಲ್ಲಿ ನಿರ್ಮಿಸಲು ಚಿಂತನೆ ನಡೆಸಲಾಗಿದೆ. ಜಿಲ್ಲೆಗೆ ವಿದೇಶಿ ಪ್ರವಾಸಿಗರನ್ನು ಆಕರ್ಷಿಸಲು ಮಂಗಳೂರಿನಲ್ಲಿ 1 ಸಾವಿರದ 500 ಕೋಟಿ ರೂಪಾಯಿ ವೆಚ್ಚದಲ್ಲಿ ಬಂದರು ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು. ಅಂಕೋಲದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾದಲ್ಲಿ ಪ್ರವಾಸೋದ್ಯಮಕ್ಕೆ ಮತ್ತಷ್ಟು ಉತ್ತೇಜನ ದೊರೆಯಲಿದೆ. ಮಂಗಳೂರಿನಿಂದ ಕಾರವಾರದವರೆಗಿನ 13 ದ್ವೀಪಗಳನ್ನು ಸರ್ಕಾರದಿಂದ ಅಭಿವೃದ್ಧಿಪಡಿಸಲು ತೀರ್ಮಾನಿಸಲಾಗಿದೆ ಎಂದು ಸಚಿವ ಮಂಕಾಳ ವೈದ್ಯ ತಿಳಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೋಲಾರದಲ್ಲಿ ಅತೀ ಹೆಚ್ಚು ನಕಲಿ ವೈದ್ಯರು…! | ನಕಲಿ ವೈದ್ಯರ ಕಡಿವಾಣಕ್ಕೆ ಕಟ್ಟುನಿಟ್ಟಿನ ಕ್ರಮ
November 21, 2024
7:36 PM
by: The Rural Mirror ಸುದ್ದಿಜಾಲ
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ  ಮನವಿ
November 21, 2024
7:32 PM
by: The Rural Mirror ಸುದ್ದಿಜಾಲ
ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ದೆಹಲಿಯಲ್ಲಿ ಲಭ್ಯ | 2.5 ಲಕ್ಷ ಲೀಟರ್ ಹಾಲು ದೆಹಲಿಗೆ ಪೂರೈಸಲು ತೀರ್ಮಾನ |
November 21, 2024
7:25 PM
by: ದ ರೂರಲ್ ಮಿರರ್.ಕಾಂ
ಹುಣಸೆ ಹಣ್ಣು ಸಂರಕ್ಷಣೆ, ಮಾರಾಟದ ತರಬೇತಿ ಕಾರ್ಯಾಗಾರ
November 21, 2024
7:09 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror