ಉತ್ತರಕನ್ನಡ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ವಿಫುಲವಾದ ಅವಕಾಶಗಳಿದ್ದು, ಪಶ್ಚಿಮಘಟ್ಟ, ಅರಣ್ಯ, ನದಿ ಮತ್ತು ಸಮುದ್ರಗಳ ಸಮ್ಮಿಲನವಾಗಿರುವ ಜಿಲ್ಲೆಯಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲಾಗುವುದು ಎಂದು ರಾಜ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಸಚಿವ ಮಂಕಾಳ ವೈದ್ಯ ತಿಳಿಸಿದ್ದಾರೆ.
ಕಾರವಾರದ ಅಜ್ವಿ ಓಷನ್ ಸಭಾಂಗಣದಲ್ಲಿ, ಜಿಲ್ಲಾಡಳಿತ ಮತ್ತು ಪ್ರವಾಸೋದ್ಯಮ ಇಲಾಖೆ ವತಿಯಿಂದ ನಡೆದ ವಿಶ್ವ ಪ್ರವಾಸೋದ್ಯಮ ದಿನಾಚರಣೆಯ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಕಡಲು ಪ್ರವಾಸೋದ್ಯಮ, ದೇಗುಲ ಪ್ರವಾಸೋದ್ಯಮ ಅಭಿವೃದ್ಧಿಪಡಿಸಲು ಅವಕಾಶಗಳಿದ್ದು, ಇದಕ್ಕಾಗಿ ಎಲ್ಲಾ ಇಲಾಖೆಗಳ ನೆರವು ಪಡೆಯಲು ಯೋಜನೆ ರೂಪಿಸಲಾಗುತ್ತಿದೆ ಎಂದರು. ರಾಜ್ಯ ಸರ್ಕಾರದ ವತಿಯಿಂದ ಎಲ್ಲಾ ಜಿಲ್ಲೆಗಳಲ್ಲಿ ಪಂಚತಾರಾ ಹೋಟೆಲ್‌ಗಳನ್ನು ಸರ್ಕಾರದ ವತಿಯಿಂದ ಅಥವಾ ಖಾಸಗಿ ಸಾರ್ವಜನಿಕ ಸಹಯೋಗದಲ್ಲಿ ನಿರ್ಮಿಸಲು ಚಿಂತನೆ ನಡೆಸಲಾಗಿದೆ. ಜಿಲ್ಲೆಗೆ ವಿದೇಶಿ ಪ್ರವಾಸಿಗರನ್ನು ಆಕರ್ಷಿಸಲು ಮಂಗಳೂರಿನಲ್ಲಿ 1 ಸಾವಿರದ 500 ಕೋಟಿ ರೂಪಾಯಿ ವೆಚ್ಚದಲ್ಲಿ ಬಂದರು ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು. ಅಂಕೋಲದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾದಲ್ಲಿ ಪ್ರವಾಸೋದ್ಯಮಕ್ಕೆ ಮತ್ತಷ್ಟು ಉತ್ತೇಜನ ದೊರೆಯಲಿದೆ. ಮಂಗಳೂರಿನಿಂದ ಕಾರವಾರದವರೆಗಿನ 13 ದ್ವೀಪಗಳನ್ನು ಸರ್ಕಾರದಿಂದ ಅಭಿವೃದ್ಧಿಪಡಿಸಲು ತೀರ್ಮಾನಿಸಲಾಗಿದೆ ಎಂದು ಸಚಿವ ಮಂಕಾಳ ವೈದ್ಯ ತಿಳಿಸಿದರು.
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…
ನಾಡಿನ ಹೆಮ್ಮೆಯ ಸಂಸ್ಥೆ ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ರಾಷ್ಟ್ರ ರಾಜಧಾನಿಯಲ್ಲಿ ಲಭ್ಯವಿರಲಿದೆ.…
ರಾಜ್ಯದಲ್ಲಿ ತುಮಕೂರು, ಚಿತ್ರದುರ್ಗ, ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ಹೆಚ್ಚಾಗಿ ಹುಣಸೆಹಣ್ಣು ಬೆಳೆಯಲಾಗುತ್ತಿದೆ. ಈ…
ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಗೆ 200…
ಗ್ರಾಹಕರಿಗೆ ಗುಣಮಟ್ಟದ ಜೇನುತುಪ್ಪ ದೊರಕುವಂತೆ ಮಾಡಲು ಹಾಗೂ ಜೇನು ಕೃಷಿಕರ ಆರ್ಥಿಕ ಮಟ್ಟ…