ಪಿಲಿಕುಳದಲ್ಲಿ ಖಗ್ರಾಸ ಚಂದ್ರಗ್ರಹಣ ವೀಕ್ಷಣೆಗೆ ಅವಕಾಶ

September 7, 2025
7:23 AM

ಸೆಪ್ಟೆಂಬರ್ 7 ರಂದು ಖಗ್ರಾಸ ಚಂದ್ರಗ್ರಹಣವು ಸಂಭವಿಸಲಿದ್ದು, ಅಂದು ರಾತ್ರಿ ಸುಮಾರು 9:57 ಕ್ಕೆ  ಚಂದ್ರಗ್ರಹಣವು ಆರಂಭವಾಗಲಿದೆ. 11 ಗಂಟೆಯಿಂದ ಚಂದ್ರನು ಸಂಪೂರ್ಣವಾಗಿ ಭೂಮಿಯ ಗಾಢ ನೆರಳಿನಲ್ಲಿ ಮರೆಯಾಗುತ್ತಾನೆ. ಈ ಕ್ಷಣದಿಂದ ಮಧ್ಯರಾತ್ರಿ 12:22 ರವರೆಗೆ (ಸುಮಾರು 1 ಗಂಟೆ 22 ನಿಮಿಷ) ಖಗ್ರಾಸ ಚಂದ್ರಗ್ರಹಣವನ್ನು ವೀಕ್ಷಿಸಬಹುದು. ರಾತ್ರಿ ಸುಮಾರು 1:26ಕ್ಕೆ ಗ್ರಹಣವು ಮುಕ್ತಾಯಗೊಳ್ಳಲಿದ್ದು, ಈ ವಿದ್ಯಮಾನವನ್ನು ಬರಿಗಣ್ಣಿನಿಂದ ನೋಡಬಹುದು. ಈ ಸಮಯದಲ್ಲಿ ಭೂಮಿಯ ವಾತಾವರಣದ ಮೂಲಕ ಹಾದುಹೋಗುವ ಸೂರ್ಯನ ಕಿರಣಗಳ ಚದುರುವಿಕೆಯಿಂದ ಚಂದ್ರನು ತಾಮ್ರದಂತೆ ರಕ್ತವರ್ಣದಲ್ಲಿ ಕಂಡುಬರುತ್ತಾನೆ.

ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ರಾತ್ರಿ 9 ಗಂಟೆಯಿಂದ ನಡುರಾತ್ರಿ 1:30 ರವರೆಗೆ ಈ ವಿಶೇಷ ಖಗೋಳ ವಿದ್ಯಮಾನವನ್ನು ವೀಕ್ಷಿಸಲು ದೂರದರ್ಶಕ ಮತ್ತು ದುರ್ಬೀನುಗಳ ವ್ಯವಸ್ಥೆ ಮಾಡಲಾಗಿದೆ. ಇದೇ ಸಂದರ್ಭದಲ್ಲಿ ಕಾಣುವ ಇತರ ಗ್ರಹಗಳು, ನಕ್ಷತ್ರಗಳು ಮತ್ತು ನಕ್ಷತ್ರ ಸಮೂಹಗಳ ಬಗ್ಗೆ ವಿವರಣೆ ನೀಡಲಾಗುತ್ತದೆ. ಮಳೆ, ಮೋಡಗಳ ಅಡಚಣೆ ಇಲ್ಲದಿದ್ದಲ್ಲಿ ಆಸಕ್ತ ವೀಕ್ಷಕರು ಇದರ ಸದುಪಯೋಗ ಪಡಿಸಿಕೊಳ್ಳಬಹುದು ಎಂದು  ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕರು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ
ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror