ರಾಜ್ಯದ ವಿವಿಧೆಡೆ ರಾತ್ರಿಯಿಂದ ಮಳೆಯಾಗುತ್ತಿದ್ದು, ಮುಂದಿನ 10 ದಿನಗಳ ಕಾಲ ಮಳೆಯಾಗುವ ಮುನ್ಸೂಚನೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ 7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉಳಿದ 24 ಜಿಲ್ಲೆಗಳಲ್ಲಿಯೂ ಸಾಧಾರಾಣ ಮಳೆಯಾಗಲಿರುವ ಹಿನ್ನಲೆಯಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಒಳನಾಡು ಭಾಗದಲ್ಲೂ ಮಳೆಯಾಗಲಿದ್ದು, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಚಾಮರಾಜನಗರ ಮತ್ತು ಹಾಸನದಲ್ಲಿ ಆರೆಂಜ್ ಎಲರ್ಟ್ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುನ್ನೆಚ್ಚರಿಕೆಯಾಗಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರಲ್ಲಿ ಸಣ್ಣ ಪ್ರಮಾಣದ ಮಳೆಯಾಗುವ ನಿರೀಕ್ಷೆ ಇದೆ. ತಮಿಳುನಾಡು, ಪುದುಚೇರಿ, ಕಾರಕಲೈನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಎಲರ್ಟ್ ಘೋಷಿಸಲಾಗಿದೆ. ಆಂಧ್ರಪ್ರದೇಶ, ಕರಾವಳಿ ಕರ್ನಾಟಕ, ಅಂಡಮಾನ್- ನಿಕೋಬಾರ್, ಕೇರಳ, ಲಕ್ಷದ್ವೀಪ, ಒಡಿಶಾ ರಾಜ್ಯಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.

